Breaking News
Home / ಜಿಲ್ಲೆ / ಧಾರವಾಡ (page 7)

ಧಾರವಾಡ

ಜೂನ್ 10 ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಾರಂಭ……

ಧಾರವಾಡ: ಜೂನ್ 10 ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಾರಂಭದ ದಿನವಾದ್ದರಿಂದ ಆ ದಿನ ದೇಶದ ಎಲ್ಲ ಹಿಂದೂ ಧರ್ಮದವರು ದೇವಸ್ಥಾನಗಳಲ್ಲಿ 500 ಬಾರಿ ಶ್ರೀರಾಮ ಜಯ ರಾಮ, ಜೈ ಜೈ ರಾಮ್ ಎಂಬ ಮಂತ್ರವನ್ನು ಜಪಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.   ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಸುಮಾರು 500 ವರ್ಷಗಳ ನಂತರ ಶ್ರೀರಾಮನ ಮಂದಿರ ತನ್ನ ಮೂಲ ಸ್ಥಳದಲ್ಲಿ …

Read More »

ಕಾಂಗ್ರೆಸ್‍ಗೆ ಭವಿಷ್ಯ ಇಲ್ಲವೆಂದು ಈಗಾಗಲೇ ಮನೆಗೆ ಕಳಿಸಿದ್ದಾರೆ: ಸಿದ್ದರಾಮಯ್ಯಗೆ ಶೆಟ್ಟರ್ ತಿರುಗೇಟು

ಧಾರವಾಡ: ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ಇಗಾಗಲೇ ಮನೆಗೆ ಕಳಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಪಕ್ಷದಿಂದ ರಾಜ್ಯದ ಜನರಿಗೆ ಭವಿಷ್ಯ ಇಲ್ಲ ಎಂದು ಧಾರವಾಡದಲ್ಲಿ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್‍ಗೆ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಭವಿಷ್ಯ ಇಲ್ಲ. ರಾಹುಲ್ ಗಾಂಧಿ ಅವರಂಥ …

Read More »

ಕೊರೊನಾಗೆ ವ್ಯಾಕ್ಸಿನ್ ಸಿಗುವವರೆಗೂ ಶಾಲೆ ಬೇಡ: ಪೋಷಕರು

ಧಾರವಾಡ: ಕೊರೊನಾ ಮಹಾಮಾರಿಗೆ ವ್ಯಾಕ್ಸಿನ್ ಸಿಗುವವರೆಗೆ ಶಾಲೆ ಬೇಡ ಎಂದು ಧಾರವಾಡದ ಶಾಲಾ ಮಕ್ಕಳ ಪೋಷಕರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕೊರೊನಾ ಬಗ್ಗೆ ಮಕ್ಕಳಿಗೆ ತಿಳುವಳಿಕೆ ಇಲ್ಲ, ಹೀಗಾಗಿ ಶಾಲೆಗೆ ಹೋದರೆ ಮಕ್ಕಳೆಲ್ಲ ಊಟಕ್ಕೆ ಹಾಗೂ ಆಟದಲ್ಲಿ ಗುಂಪಾಗಿ ಭಾಗವಹಿಸ್ತಾರೆ ಎಂದು ಬಹುತೇಕ ಪೋಷಕರು ಹೇಳುತ್ತಿದ್ದಾರೆ. ಅಲ್ಲದೆ ಮಕ್ಕಳು ಶಾಲೆಗೆ ಹೋಗಬೇಕಾದ್ರು ಆಟೋ ಹಾಗೂ ವ್ಯಾನ್‍ಗಳಲ್ಲಿ ಒಟ್ಟಿಗೆ ಕುಳಿತುಕೊಳ್ಳಬೇಕಾಗುತ್ತೆ. ಈ ಸಂದರ್ಭದಲ್ಲಿ ಒಂದು ಮಗುವಿಗೆ ಏನಾದ್ರು ಕೊರೊನಾ ಇದ್ರೆ ಅದು ಎಲ್ಲ …

Read More »

ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ :ಜಗದೀಶ ಶೆಟ್ಟರ್

ಧಾರವಾಡ: ಮುಂದಿನ ಒಂದು ವರ್ಷದವರೆಗೂ ಕೊರೊನಾ ಇರುತ್ತೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಕೊರೊನಾ ಎಲ್ಲರಿಗೂ ಒಂದು ಹೊಸ ಅನುಭವ, ಒಂದು ತಿಂಗಳು, ಎರಡು ತಿಂಗಳಿಗೆ ಮುಗಿದು ಹೋಯ್ತು ಎನ್ನುವಂತಹದ್ದಲ್ಲ. ಇದು ನಿರಂತರವಾಗಿ ವರ್ಷಗಟ್ಟಲೇ ಇರುವಂತಹದ್ದು ಎಂದು ಹೇಳಿದರು. ಕೆಲವು ಜನರಿಗೆ ಪಾಸಿಟಿವ್ ಬರುತ್ತಿರುತ್ತದೆ, ಅದೇ ರೀತಿ ಇನ್ನು ಕೆಲವರು ಡಿಸ್ಚಾರ್ಜ್ ಆಗತ್ತಿರುತ್ತಾರೆ. ಹೀಗೆ ನಿರಂತರವಾಗಿ ಪ್ರಕ್ರಿಯೆ …

Read More »

ಎಣ್ಣೆ ಏಟಲ್ಲಿ ಪತ್ನಿ, ಮಗಳಿಗೆ ಬೆಂಕಿ ಇಟ್ಟ ಪಾಪಿ………..

ಧಾರವಾಡ: ಮದ್ಯದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿ ಹಾಗೂ ಮಗಳಿಗೆ ಬೆಂಕಿಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ನಡೆದಿದೆ. ಗುಡಿಸಾಗರ ಗ್ರಾಮದ ಭೀರಪ್ಪ ಕಟಿಗಾರ (40) ಕೃತ್ಯ ಎಸೆಗಿದ ಪಾಪಿ. ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಭೀರಪ್ಪ ಹಾಗೂ ಪತ್ನಿ ಫಕೀರವ್ವ (34) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 12 ವರ್ಷದ ಮಗಳ ಪರಿಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.   ಭೀರಪ್ಪ ಮದ್ಯ …

Read More »

ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ.

ಧಾರವಾಡ: ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ. ವರುಣನ ಅಬ್ಬರಕ್ಕೆ ನಗರದ ವಿವಿಧೆಡೆ ಮರಗಳು ಧರೆಗುರುಳಿದ್ದು, ಮರಗಳಡಿ ವಾಹನಗಳು ಸಿಲುಕಿ ಜಖಂ ಆಗಿವೆ. ನಗರದ ಸೈದಾಪುರ ಗೌಡರ ಓಣಿಯಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರು ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಅಡೆತಡೆಯಾಯಿತು. ನಗರದ ಟೊಲ್ ನಾಕಾ ರಸ್ತೆ ಮಳೆಯಿಂದ ಹಳ್ಳದಂತಾಗಿತ್ತು. ತುಂಬಿ ಹರಿಯುತ್ತಿರುವ ನೀರಿನಲ್ಲಿ …

Read More »

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಹಣ ಕಳಿಸಿದ ಮಹಿಳೆಯರು…………

ಧಾರವಾಡ: ಸರ್ಕಾರಕ್ಕೆ ಮಹಿಳೆಯರು ಹಣ ಕಳುಹಿಸುವ ಮೂಲಕ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ನಗರದ ಮುರುಘಾಮಠ ಆವರಣದ ಅಂಚೆ ಕಚೇರಿ ಎದುರು ಪ್ರತಿಭಟನೆ ಮಾಡಿದ ಮಹಿಳೆಯರು, ಮನಿ ಆರ್ಡರ್ ಮೂಲಕ ಸರ್ಕಾರಕ್ಕೆ ಹಣ ಕಳುಹಿಸಿ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಈ ಮೂಲಕ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದಾರೆ. ಈ ಮೊದಲು ಮಹಿಳೆಯರು ಮನಿ ಆರ್ಡರ್ ಅಭಿಯಾನ ಮಾಡಿದ್ದರು. ಈ ವೇಳೆ ನೂರಾರು ಮಹಿಳೆಯರಿಂದ 1,020ರೂಪಾಯಿ ಜಮೆಯಾಗಿತ್ತು. ಈ ಹಣವನ್ನು …

Read More »

ಲಾರಿಯಲ್ಲಿ 74 ವಲಸೆ ಕಾರ್ಮಿಕರ ಸಾಗಾಟ…

ಧಾರವಾಡ: ಅಕ್ರಮವಾಗಿ 74 ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಧಾರವಾಡದ ಗರಗ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಾಸರಗೋಡಿನಿಂದ 27 ಮತ್ತು ಮಂಗಳೂರಿನಿಂದ 47 ಕಾರ್ಮಿಕರನ್ನು ಹೊತ್ತ ಲಾರಿಗಳು ರಾಜಸ್ಥಾನಕ್ಕೆ ಹೊರಟಿದ್ದವು. ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರ್.ಜೆ. 14 ಜಿಜೆ-2909 ಹಾಗೂ ಎಚ್‍ಆರ್- 46 ಸಿಎಸ್- 703 ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಎಲ್ಲ …

Read More »

ಧಾರವಾಡ:ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು?……..

ಧಾರವಾಡ: ನಗರದಲ್ಲಿ ಇಂದು ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ಗಾಂಧಿನಗರದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇವರ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಯದ್ವಾತದ್ವಾ ತಯಾರಿಸಿದ್ದಾರೆ. ಅಧಿಕಾರಿಗಳ ತಪ್ಪು ನೊಡದೆಯೇ ಜಿಲ್ಲಾಧಿಕಾರಿ ಕೂಡ ಸಹಿ ಮಾಡಿ ಮುಂದಿನ ಕ್ರಮಕ್ಕೆ ರವಾನಿಸಿದ್ದಾರೆ. ಅಲ್ಲದೆ ಯಾವ ತಿಂಗಳಲ್ಲಿ ಎಷ್ಟು ದಿನಾಂಕ ಎನ್ನುವ ಪರಿಜ್ಞಾನವೂ ಇಲ್ಲದಂತೆ ಅಧಿಕಾರಿಗಳು …

Read More »

ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ ಓರ್ವ ಅಂಗವಿಕಲ ಇಂದು ಕೊಲೆಯಾಗಿದ್ದಾರೆ ಎಂಬ ಆರೋಪ?

ಧಾರವಾಡ: ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ ಓರ್ವ ಅಂಗವಿಕಲ ಇಂದು ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು. ಧಾರವಾಡದ ಪತ್ರೇಶ್ವರ ನಗರದಲ್ಲಿ ಈ ಕೊಲೆ ನಡೆದಿದ್ದು, ಉಮೇಶ್ ಬಾಳಗಿ (37) ಕೊಲೆಯಾದ ಅಂಗವಿಕಲ. ಕಳೆದ ಹಲವು ವರ್ಷಗಳಿಂದ ಉಮೇಶ್ ಬಾಳಗಿ ಹಾಗೂ ಸಂಬಂಧಿಕರ ನಡುವೆ ಆಸ್ತಿ ವಿವಾದ ನಡೆದಿತ್ತು. ಈ ಮೊದಲು ಉಮೇಶ್‍ನ ಮೇಲೆ ಸಂಬಂಧಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆಗ ಉಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. …

Read More »