ಬಳ್ಳಾರಿ: ಕೊರೊನಾ ವೈರಸ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಇಬ್ಬರನ್ನು ಐಸೋಲೇಷನ್‍ನಿಂದ ಬಿಡುಗಡೆ ಮಾಡಲಾಯಿತು. ಪಿ-333 ಹಾಗೂ ಪಿ-337 ಸಂಖ್ಯೆಯ ಈ ಇಬ್ಬರಲ್ಲಿ ಕೊರೊನಾ ವೈರಸ್ ಪಾಸಿಟಿವ್ ದಾಖಲಾಗಿತ್ತು. ಸತತ 14 ದಿನಗಳ ಕಾಲ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಈ ಇಬ್ಬರನ್ನ ಜಿಲ್ಲಾ ಸರ್ಕಾರಿ ಕೋವಿಡ್-19 ಅಸ್ಪತ್ರೆಯಿಂದ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಡಲಾಯಿತು. ಈವರೆಗೂ ಒಟ್ಟಾರೆಯಾಗಿ ಏಳು ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …
Read More »ಒಂದೇ ದಿನ ನಾಲ್ಕು ಬಾಲ್ಯ ವಿವಾಹ ತಡೆದ ಅಧಿಕಾರಿಗಳು………
ಬಳ್ಳಾರಿ: ಲಾಕ್‍ಡೌನ್ ನಡುವೆಯೂ ಅಕ್ಷಯ ತೃತಿಯ ನಿಮಿತ್ತ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಾಲ್ಕು ಜೋಡಿ ಬಾಲ್ಯವಿವಾಹ ಪ್ರಕರಣಗಳು ಪತ್ತೆ ಯಾಗಿವೆ. ಕೂಡ್ಲಿಗಿ ತಾಲೂಕು, ಬಳ್ಳಾರಿ ನಗರ, ಸಂಡೂರು ತಾಲೂಕು ಹಾಗೂ ಬಳ್ಳಾರಿ ತಾಲೂಕಿನಲ್ಲಿ ನಡೆಯುತ್ತಿದ್ದ ಎರಡು ನಿಶ್ಚಿತಾರ್ಥ ಹಾಗೂ ಎರಡು ಬಾಲ್ಯವಿವಾಹಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಮೂಲದ 17 ವರ್ಷದ ಯುವತಿಗೆ ಬೆಳಗ್ಗೆ 5 ಗಂಟೆಗೆ ತರಾತುರಿಯಲ್ಲಿ ನಿಶ್ಚಿತಾರ್ಥ …
Read More »ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖ – ಇಂದು ಡಿಸ್ಚಾರ್ಜ್
ಬಳ್ಳಾರಿ: ಮಹಾಮಾರಿ ಕೊರೊನಾ ವೈರಸ್ ಬಾಧಿತರಾಗಿ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿಯ ಪೈಕಿ ಮೂವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಜಿಲ್ಲಾಮಟ್ಟದ ಕೋವಿಡ್-19 ಸಲಹಾ ಸಮಿತಿ ನಿರ್ಣಯದ ಅನುಸಾರ ಈ ಮೂವರನ್ನು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಜಿಲ್ಲಾಮಟ್ಟದ ಟಾಸ್ಕ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ …
Read More »ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್
ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್ ನೀಡಿವೆ. ಬಳ್ಳಾರಿ ನಗರದ ಸುತ್ತ ಸ್ಯಾನಿಟೈಜರ್ ಸಿಂಪಡಣೆ ಮಾಡುವ ಮೂಲಕ ತಮ್ಮದೇ ಆದ ಸಹಾಯ ಮಾಡಿವೆ. ಲಾಕ್‍ಡೌನ್ ಸಮಯದಲ್ಲಿ ಜಿಲ್ಲೆಯ ಕೈಗಾರಿಕೆಗಳು ಸಹಾಯ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕಲು ಕೇಳಿದ್ದರು. ಹೀಗಾಗಿ ಬಳ್ಳಾರಿಯ ಎನ್‍ಎಮ್‍ಡಿಸಿ ಕಂಪನಿ ಜಿಲ್ಲಾಡಳಿತಕ್ಕೆ ಸಾತ್ ನೀಡಿದ್ದು, ಕಂಪನಿ ವತಿಯಿಂದ ನಗರದ ನೈರ್ಮಲ್ಯೀಕರಣ ಕೈಗೊಳ್ಳಲು ಮುಂದಾಗಿದೆ. ನಗರದ ಜನ ನಿಬಿಡ …
Read More »ನೀನು ನನಗೆ ವೋಟ್ ಹಾಕಲ್ಲ, ನಾನ್ಯಾಕೆ ನಿಂಗ ರೇಷನ್ ಕಿಟ್ ಕೊಡಬೇಕು?ವಿಧವೆಯ ಮೇಲೆ ಹಲ್ಲೆ
ಬಳ್ಳಾರಿ: ರೇಷನ್ ಕಿಟ್ ಕೇಳಿದ್ದಕ್ಕೆ ವಿಧವೆಯೊಬ್ಬರಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಬೆಳಗಲ್ಲು ತಾಂಡಾದ ಮೋತಿ ಬಾಯಿ (38) ಹಲ್ಲೆಗೆ ಒಳಗಾದ ವಿಧವೆ. ಬೆಳಗಲ್ಲು ತಾಂಡಾದ ನಿವಾಸಿಗಳಾದ ಲೇಬರ್ ಕಂಟ್ರಾಕ್ಟರ್ ರಾಮುನಾಯ್ಕ, ಲಾರಿ ಮಾಲೀಕರಾದ ಬಾಬು ನಾಯ್ಕ, ವೆಂಕಟೇಶ ನಾಯ್ಕ, ಲಕ್ಷ್ಮಣ ನಾಯ್ಕ ಹಾಗೂ ತೇಜು ನಾಯ್ಕ ಹಲ್ಲೆಗೈದವರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಡ ಜನರಿಗೆ ಬೆಳಗಲ್ಲು ತಾಂಡಾ ಸಮೀಪ ಕಾರ್ಖಾನೆಗಳು ರೇಷನ್ ಕಿಟ್ …
Read More »ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ: ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಡಿ.ರಾಘವೇಂದ್ರನನ್ನು ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಇಡೀ ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೂ ಬಿಜೆಪಿ ಮುಖಂಡನ ಮಾಲೀಕತ್ವದ ಮದ್ಯದಂಗಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇರುವ ಮದ್ಯದಂಗಡಿಯ …
Read More »ಮಸ್ತಿ – ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಮೂವರು
ಬಳ್ಳಾರಿ: ಲಾಕ್‍ಡೌನ್ ಹಿನ್ನೆಲೆ ಸರಣಿ ರಜೆ ಇರೋದರಿಂದ ನದಿಯಲ್ಲಿ ಈಜಲು ತೆರೆಳಿದ್ದ ಮೂವರು ಕಾರ್ಮಿಕರು ನೀರುಪಾಲಾದ ಘಟನೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋವೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಇಂದು ಮಧ್ಯಾಹ್ನ ಈಜಾಡಲು ಹೋಗಿದ್ದ ಮೂವರು ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ನದಿಯಲ್ಲಿ ಈಜಾಡಲು ಐದು ಮಂದಿ ತೆರಳಿದ್ದು, ಈ ಪೈಕಿ ಮೂವರು ನೀರು ಪಾಲಾದರೆ, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋವೇನಹಳ್ಳಿ ಗ್ರಾಮದ ನಿವಾಸಿ …
Read More »ಬಳ್ಳಾರಿ:2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ.
ಬಳ್ಳಾರಿ: ನೆಗಡಿ, ತಲೆನೋವು ಕಾಣಿಸಿಕೊಂಡಾಗ ಬಳಕೆ ಮಾಡುವ 2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕರಿಬಸವಯ್ಯ ಹಾಗೂ ನಿಂಗಮ್ಮ ಅವರ ಮೊದಲ ಮಗಳು 9 ತಿಂಗಳ ಮಗು ಭಾರತಿ ಆಟ ಆಡುತ್ತಾ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಮಗುವಿನ ತಾಯಿ ಮನೆಯ …
Read More »ಬಳ್ಳಾರಿ:ಒಂದೂವರೆ ಎಕ್ರೆಯಲ್ಲಿ ಬೆಳೆದ ಈರುಳ್ಳಿಯನ್ನೇ ರಾತ್ರೋರಾತ್ರಿ ಕಟಾವು
ಬಳ್ಳಾರಿ: ಲಾಕ್‍ಡೌನ್ ಆಗಿದ್ದನ್ನೇ ಬಂಡವಾಳ ಮಡಿಕೊಂಡು ಗಣಿನಾಡು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಯರ್ರಂಗಳಿಯ ಹೊರವಲಯದ ಒಂದೂವರೆ ಎಕ್ರೆಯಲ್ಲಿ ಬೆಳೆದ ಈರುಳ್ಳಿಯನ್ನೇ ರಾತ್ರೋರಾತ್ರಿ ಕಟಾವು ಮಾಡಿಕೊಂಡು ಕದ್ದೊಯ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಯರ್ರಂಗಳಿ ಗ್ರಾಮದ ರೈತ ಸುನೀಲ್ ಕುಮಾರ್ ಅವರಿಗೆ ಈ ಹೊಲ ಸೇರಿದ್ದು, ಶನಿವಾರ ಹೊಲಕ್ಕೆ ಹೋಗಿ ಈರುಳ್ಳಿ ಬೆಳೆಯನ್ನು ವೀಕ್ಷಣೆ ಮಾಡಿದ್ದರು. ಭಾನುವಾರ ರಾತ್ರಿಯೊಳಗೆ ಈ ಬೆಳೆಯನ್ನು ಯಾರೋ ದುಷ್ಕರ್ಮಿಗಳು ಬಂದು ಕಟಾವು ಮಾಡಿಕೊಂಡು ಹೋಗಿದ್ದಾರೆ. ಈ …
Read More »ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ ನಿಂದ ಇಡೀ ದೇಶವೇ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕನೇಯ ವಾರ್ಡಿನ ಮಾಜಿ ಸದಸ್ಯೆ ಪರ್ವೀನ್ ಬಾನು ನೇತೃತ್ವದಲ್ಲಿ ಮಂಗಳಮುಖಿಯರು ಸೇರಿ ಈ ಕೆಲಸ ಮಾಡುತ್ತಿದ್ದಾರೆ. ಪಾದಾಚಾರಿ ರಸ್ತೆ, ಬಸ್ ಹಾಗೂ ರೈಲ್ವೇ ನಿಲ್ದಾಣ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ರಾತ್ರಿ ವೇಳೆಯಲ್ಲಿ ಹಸಿವಿನಿಂದ ಮಲಗಿಕೊಂಡಿದ್ದ …
Read More »