ಬಾಗಲಕೋಟೆ: ಇಸ್ರೋದ ಮಾಜಿ ಅಧ್ಯಕ್ಷ ಪದ್ಮಶ್ರೀ ಪುರಸ್ಕೃತ ಪ್ರೊ. ಎ ಎಸ್ ಕಿರಣ್ ಕುಮಾರ್ ಅವರಿಗೆ ಶನಿವಾರ ಡಾ. ಆರ್ ಎಲ್ ಕಪೂರ್ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು. ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಎಸ್ ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಶ್ರೀ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಭಾರತೀಯ ಮನೋವೈದ್ಯರ ಸಂಘದ ರಾಜ್ಯ ಶಾಖೆ 33ನೇ ವಾರ್ಷಿಕ ಸಮ್ಮೇಳನದಲ್ಲಿ, ಡಾ. ಆರ್ …
Read More »ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ.: ಆರ್.ಬಿ.ತಿಮ್ಮಾಪೂರ್
ಬೆಂಗಳೂರು: ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ. ಯಾವುದೇ ಅಧಿಕೃತ ಆದೇಶವೂ ಆಗಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಬಂದಿಲ್ಲ. ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುತ್ತೇನೆ ಎಂದರು. ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ …
Read More »ಕುಡಿಯುವ ನೀರಿಗಾಗಿ ಪ್ರತಿಭಟನೆ
ಕುಡಿಯುವ ನೀರಿಗಾಗಿ ಆಗ್ರಹಿಸಿ ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆಗಿದೆ. ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ಮಾಡಿದರು. ಅದಕ್ಕಾಗಿ ತಕ್ಷಣವೇ ಕುಡಿಯುವ …
Read More »ಪಕ್ಷ ಬದಲಾವಣೆ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್
ಬಾಗಲಕೋಟೆ: ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್ ಪಾಟೀಲ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ. ಕಾಂಗ್ರೆಸ್ ಮುಖಂಡ ವೇಣುಗೋಪಾಲ್ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಪಕ್ಷ ಬದಲಾವಣೆ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.
Read More »ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 2.10 ಕೋಟಿ ರೂಪಾಯಿ ಹಣ ಜಪ್ತಿ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನವನ್ನು ತಪಾಸಣೆ ನಡೆಸಿದಾಗ 2.10 ಕೋಟಿ ನಗದು ಹಣ ಪತ್ತೆಯಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಹಕಾರಿ ಬ್ಯಾಂಕ್ ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆದರೆ ಹಣದ …
Read More »ಮತ್ತೆ ನಾನೇ ಸಿಎಂ: ಬೊಮ್ಮಾಯಿ
ಬಾಗಲಕೋಟೆ: ‘ಬೀಳಗಿ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಮತ್ತೆ ಮುಖ್ಯಮಂತ್ರಿಯಾಗಿ ಬಂದು ನಾನೇ ಉದ್ಘಾಟನೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮುಧೋಳದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಧೋಳ, ತೇರದಾಳ, ಬಾಗಲಕೋಟೆ, ಬೀಳಗಿ ಕ್ಷೇತ್ರದಲ್ಲಿ ಸಾಕಷ್ಟು ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ’ ಎಂದರು. ‘ಅಭಿವೃದ್ಧಿ ಕಾರ್ಯ ನನಗೆ ಗೊತ್ತಾಗುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ನನ್ನನ್ನು ಅವರ ಕ್ಷೇತ್ರಕ್ಕೆ ಕರೆದಿಲ್ಲ. ಆದರೆ, ಮುಖ್ಯಮಂತ್ರಿಯಾಗಿ ಅವುಗಳ ಉದ್ಘಾಟನೆಯನ್ನು ನಾನೇ …
Read More »ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಯುವತಿಯ ದೇಹ ಸಿಕ್ಕ ಪ್ರಕರಣ; ಆಕೆಯ ಪ್ರಿಯಕರನ ಬಂಧನದಿಂದ ಬಯಲಾಯ್ತು ಹತ್ಯೆಗೆ ಕಾರಣ.
ಬಾಗಲಕೋಟೆ: ಯುವತಿ ದೇಹದ ಅರ್ಧ ಭಾಗ ತುಂಡಾದ ಸ್ಥಿತಿಯಲ್ಲಿ ಸಿಕ್ಕ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿತದ್ದು, ಅನ್ಯರ ಜೊತೆಗೆ ಸಂಬಂಧ ಇದೆ ಎಂಬ ಸಂಶಯದಿಂದ ಆಕೆಯೆ ಪ್ರಿಯಕರನೇ ಕೊಲೆ ಮಾಡಿರುವುದು ಬಯಲಾಗಿದೆ. 18ರ ಹರೆಯದ ಚೈತ್ರಾ ಹೋಳಿ ಕೊಲೆಯಾದ ದುರ್ದೈವಿ. ಆರೋಪಿ ಮುತ್ತಪ್ಪ ಆಸಂಗಿ(26) ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆಯಾದ ಚೈತ್ರಾ ಹೋಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಆರೋಪಿ …
Read More »ಸಾವಿನಲ್ಲೂ ಒಂದಾದ ತಾಯಿ-ಮಗ; ಬಾಗಲಕೋಟೆಯಲ್ಲಿ ನಡೆಯಿತು ಹೃದಯ ಹಿಂಡುವ ಘಟನೆ!
ಬಾಗಲಕೋಟೆ: ತಾಯಿ ಮತ್ತು ಮಗ ಒಂದೇ ದಿನ ಪ್ರಾಣ ಬಿಡುವ ಮೂಲಕ ಸಾವಿನಲ್ಲೂ ಒಂದಾಗಿದ್ದಾರೆ. ಈ ಹೃದಯ ಕಲಕುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಡೆದಿದೆ. ಕಲಾದಗಿ ಗ್ರಾಮದ ಸ್ಥಳೀಯ ಮುಖಂಡ ದಶರಥ ದುರ್ವೆ(60) ಅನಾರೋಗ್ಯದಿಂದ ಶುಕ್ರವಾರ ಮಧ್ಯಾಹ್ನ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಇತ್ತ ಮಗನ ಸಾವಿನ ಸುದ್ದಿ ತಿಳಿದು ದುಃಖಕ್ಕೀಡಾಗಿದ್ದ ಅವರ ತಾಯಿ ಶಾವಕ್ಕ ದುರ್ವೆ(90) ಶುಕ್ರವಾರ ಸಂಜೆ 6.30ರ ಸುಮಾರಿಗೆ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ.
Read More »ಮಿಸ್ಟರ್ ಸವದಿ ಕಾಂಗ್ರೆಸ್ ಕಾರ್ಯಕರ್ತರ ಸುದ್ದಿಗೆ ಬರಬೇಡಿ: ಮಾಜಿ ಸಚಿವೆ ಉಮಾಶ್ರೀ ಕಿಡಿ
ರಬಕವಿ-ಬನಹಟ್ಟಿ: ಮಿಸ್ಟರ್ ಸಿದ್ದು ಸವದಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ನಾಯಕರ ಸುದ್ದಿಗೆ ಬಂದರೆ, ಪ್ರಕರಣ ದಾಖಲೆ ಮಾಡಿದರೆ ಅವರ ಭಾವನೆಗಳಿಗೆ ಉರಿ ಹಚ್ಚಿದರೆ ಇಡೀ ತೇರದಾಳ ಕಾಂಗ್ರೆಸ್ ಹೊತ್ತಿ ಉರಿಯುತ್ತಿದೆ ಎಚ್ಚರವಿರಲಿ ಎಂದು ಮಾಜಿ ಸಚಿವೆ ಉಮಾಶ್ರೀ ಬಿಜೆಪಿ ಶಾಸಕ ಸಿದ್ದು ಸವದಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ. ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಶಾಸಕ ಸಿದ್ದು ಸವದಿಯವರು ಧಾರವಾಡ, ಬೆಳಗಾವಿ, ರಾಮದುರ್ಗ ಸೇರಿದಂತೆ …
Read More »ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್
ಬಾಗಲಕೋಟೆ: ‘ನನ್ನದು ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿಯಲ್ಲಿರುವ ಹಿಂದೂ ದ್ರೋಹಿಗಳು, ಅದರ ತತ್ವ, ಸಿದ್ಧಾಂತ ಹಾಳು ಮಾಡಿದವರ ವಿರುದ್ಧ ಹೋರಾಟ’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಕಳದಲ್ಲಿ ಗೆದ್ದರೂ ಬಿಜೆಪಿಯನ್ನೇ ಬೆಂಬಲಿಸುತ್ತೇನೆ. ಆದರೆ ಡೋಂಗಿ ಹಿಂದುತ್ವವಾದಿಗಳಿಗೆ ಬುದ್ಧಿ ಕಲಿಸಲು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದರು. ‘ನನಗೆ ಬಾಗಲಕೋಟೆ ಮತ್ತು ಕಾರ್ಕಳದಿಂದ ಸ್ಪರ್ಧಿಸಲು ಬೇಡಿಕೆ ಇತ್ತು. ಕಾರ್ಕಳವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಕಾರ್ಕಳದಲ್ಲಿ …
Read More »