Breaking News

ಬಾಗಲಕೋಟೆ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ

ಅವ್ರು 58 ವರ್ಷದ ಹಿಂದೆ ಮದುವೆಯಾಗಿದ್ದ ವೃದ್ಧ ದಂಪತಿಗಳು. ಸತಿ-ಪತಿಯ ಪ್ರೀತಿಯ ದಾಂಪತ್ಯ ಬದುಕು ಆ ಗ್ರಾಮದ ಇತರರಿಗೆ ಮಾದರಿಯಾಗಿತ್ತು. ನಿನ್ನೆ ಎದೆ ನೂವು ಅಂತಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ರು.ಮನೆಗೆ ಮೃತನ ಶವ ತಂದು ಪೂಜೆ ಮಾಡ್ತಿದ್ದ ವೇಳೆ ಪತ್ನಿ ಕೂಡಾ ಕುಸಿದು ಬಿದ್ದು ಆಸ್ಪತ್ರೆ ತಲುಪುವಷ್ಠರಲ್ಲಿ ಸಾವನ್ನಪ್ಪಿದ್ದಾಳೆ. 58 ವರ್ಷದ ದಾಂಪತ್ಯ ಬದುಕಿಗೆ ವಿದಾಯ ಹೇಳಿದ ವೃದ್ಧ ದಂಪತಿಗಳು. ಮತ್ತೊಂದೆಡೆ ಸಾವಿನ್ನೂ ಒಂದಾಗಿ ಇಹಲೋಕ …

Read More »

ಕಳ್ಳಬಟ್ಟಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿಕೆ

ಬಾಗಲಕೋಟೆ: ಕಳ್ಳಬಟ್ಟಿ ಸಾರಾಯಿ ತಯಾರಿ, ಸಾಗಾಟ ಮತ್ತು ಮಾರಾಟ ಸಂಪೂರ್ಣವಾಗಿ ತಡೆಗಟ್ಟಲು ಪರಿಣಾಮಕಾರಿಯಾಗಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಎಂ.ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ  ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆಗೆ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಕಾರ್ಯಾಚರಣೆ, ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಅನುಮಾನಾಸ್ಪದ  ಕಳ್ಳಬಟ್ಟಿ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ …

Read More »

ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಮಸೀದಿಯಲ್ಲಿ ಇದ್ದರವರೆಲ್ಲರ ಮೇಲೂ ಪ್ರಕರಣ ದಾಖಲಿಸಿ

ಬಾಗಲಕೋಟೆ: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ ವೇಳೆ ಪಂಕಾ ಮಸೀದಿಯಲ್ಲಿ ಇದ್ದವರೆಲ್ಲರ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಉತ್ತರ ಪ್ರಾಂತ ಸಹ ಸಂಚಾಲಕ ಶ್ರೀಕಾಂತ ಹೊಸಕೆರೆ ಆಗ್ರಹಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಯಲ್ಲಿ ಸೇರಲು ಅಷ್ಟೊಂದು ಜನರಿಗೆ ಅವಕಾಶ ಮಾಡಿಕೊಟ್ಟ ಪಂಕಾ ಮಸೀದಿಯ ಕಮಿಟಿಯವರೆಲ್ಲರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಬೇಕು. ಆ ಮಸೀದಿಯಲ್ಲಿ ಸೇರುವವರಿಂದಲೇ ಈ ಹಿಂದೆಯೂ …

Read More »

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಬಾಗಲಕೋಟೆ: ಶಿವಾಜಿ ಜಯಂತಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಕೊತ್ತಲೇಶ್ವರ ದೇವಸ್ಥಾನ ಹಾಗೂ ಪಂಕಾ ಮಸೀದಿ ಆವರಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಬೆನ್ನಲ್ಲೇ ಹಿಂದೂ ಸರ್ವ ಸಮಾಜದ ಮುಖಂಡರು ಭಾನುವಾರ (ಫೆ.22) ನಡೆಸಿದ ಸಭೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ ಆಚರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಬಾಗಲಕೋಟೆ ಶಿವಾನುಭವ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಫೆ.26 ರಂದು ಶಿವಾಜಿ …

Read More »

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

ಬಾಗಲಕೋಟೆ: ಕಲ್ಲು ತೂರಾಟದಲ್ಲಿ ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರಾಗಿದ್ದು ಅವರನ್ನು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಮುಸ್ಲಿಮ್‌ ಮುಖಂಡರು ಮನವಿ ಮಾಡಿದ್ದಾರೆ. ಶುಕ್ರವಾರ ನಡೆದ ಶಾಂತಿ ಸಭೆಗೆ ಮುಸ್ಲಿಮರು ಗೈರಾಗಿದ್ದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ ನವನಗರದ ಜಿಲ್ಲಾಡಳಿತ ಭವನದಲ್ಲಿ ಉಸ್ತುವಾರಿ ಸಚಿವ ತಿಮ್ಮಾಪೂರ ನೇತೃತ್ವದಲ್ಲಿ ಮತ್ತೆ ಶಾಂತಿ ಸಭೆಯನ್ನು ಆಯೋಜಿಸಿತ್ತು. ಆದರೆ ಇಂದಿನ ಸಭೆಗೆ ಹಿಂದೂ ಮುಖಂಡರು ಹಾಜರಾಗಿರಲಿಲ್ಲ. ಈ ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರ ಭಾಗಿಯಾಗಿ ತಮ್ಮ ಅಹವಾಲುಗಳನ್ನ …

Read More »

ಬಾಗಲಕೋಟೆಯಲ್ಲಿ ಪರಿಸ್ಥಿತಿ ಪೂರ್ಣ ನಿಯಂತ್ರಣಕ್ಕೆ ಬಂದಿದೆ: ಡಾ.ಪರಮೇಶ್ವರ್‌

ಬೆಂಗಳೂರು: ‘ಬಾಗಲಕೋಟೆಯಲ್ಲಿ ಮೆರವಣಿಗೆ ಬಗ್ಗೆ ಸ್ಥಳೀಯವಾಗಿ ನೋಡಿಕೊಂಡು ತೀರ್ಮಾನ ಮಾಡುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಗಲಕೋಟೆ ಈಗ ಶಾಂತವಾಗಿದೆ‌. ಪೊಲೀಸ್ ತಕ್ಷಣ ಕಾರ್ಯಪ್ರವೃತ್ತರಾಗಿದ್ದರಿಂದ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಮೆರವಣಿಗೆ ಬಗ್ಗೆ ಸ್ಥಳೀಯವಾಗಿ ನೋಡಿಕೊಂಡು ತೀರ್ಮಾನ ಮಾಡುವಂತೆ ಸೂಚಿಸಿದ್ದೇನೆ ಎಂದರು. ಹಿರಿಯ ಎಡಿಜಿಪಿಯನ್ನು ಕಳುಹಿಸಿದ್ದೇನೆ. ಸಾಕಷ್ಟು ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ. ಶಾಂತಿಸಭೆ ನಿರ್ದೇಶನ ನೀಡಲಾಗಿದೆ ಎಂದ ಅವರು, ಘಟನೆಯಲ್ಲಿ ಪೊಲೀಸರಿಗೂ …

Read More »

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್​ ಪಲ್ಟಿ ಮಗು ಸೇರಿ ನಾಲ್ವರ ದುರ್ಮರಣ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ …

Read More »

ಬಾಗಲಕೋಟೆಯಲ್ಲಿ ಉದ್ವಿಗ್ನ – ಮುಸ್ಲಿಂ ಮುಖಂಡರು ಗೈರು, ಶಾಂತಿ ಸಭೆ ವಿಫಲ

ಬಾಗಲಕೋಟೆ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಿದ್ದಾರೆ. ಕಿಲ್ಲಾ ಓಣಿಯಲ್ಲಿದ್ದ ಮಸೀದಿಯಿಂದಲೇ ಕಲ್ಲು-ಚಪ್ಪಲಿ ತೂರಿ ಬಂದಿದ್ದು, ಭದ್ರತೆಗೆ ನಿಂತಿದ್ದ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಅವರ ಮೇಲೆ ಬಿದ್ದಿದೆ. ಅಲ್ಲದೆ, ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬಾತನ ತಲೆಗೆ ಕಲ್ಲುಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಸ್ಲಿಂ ಯುವಕರ ಪುಂಡಾಟದ ಮಧ್ಯೆ ತರಕಾರಿ ಮಾರುಕಟ್ಟೆ ಬಳಿ ತಳ್ಳೋಗಾಡಿಗಳಿಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ರು. …

Read More »

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

ರಾಯಚೂರು: ಬಾಗಲಕೋಟೆಯಲ್ಲಿ  ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ  ನಡೆದಿದೆ. ನಿಮ್ಮ ಸರ್ಕಾರ ಬಂದಾಗಲೇ ಯಾಕೇ ಹೀಗಾಗುತ್ತೆ ಎಂದು ಕಾಂಗ್ರೆಸ್‌ ನಾಯಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಯಚೂರಿನ  ಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದರು. ಈ ವೇಳೆ, ಬಾಂಬ್ ಹಾಕಿದವರನ್ನು ಬ್ರದರ್ಸ್ ಅಂತೀರಿ. ಗಣೇಶನ ವಿಗ್ರಹಕ್ಕೂ ಮಸೀದಿಯಿಂದ ಕಲ್ಲು ಬಿತ್ತು. ಶಿವಾಜಿ ಮೆರವಣಿಗೆಯಲ್ಲೂ ಮಸೀದಿಯಿಂದ ಕಲ್ಲು ಬೀಳುತ್ತೆ. ಕಲ್ಲು ಹೊಡೆದವರನ್ನ ಅರೆಸ್ಟ್ ಮಾಡೊದಿಲ್ಲ. ಅಕ್ರಮ ಮಸೀದಿ ಎಂದವರ ಮೇಲೆ …

Read More »

ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ಬಾಗಲಕೋಟೆ: ನಿಷೇಧಾಜ್ಞೆಯ ನಡುವೆಯೂ ಬಾಗಲಕೋಟೆಯ  ಕಿಲ್ಲಾ ಓಣಿಯಲ್ಲಿ ಕಲ್ಲು ತೂರಾಟ  ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್‌ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿನ್ನು ಖಂಡಿಸಿ ಇಂದು ಕೊತ್ತಲೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಭೆ ನಡೆಸುತ್ತಿದ್ದರು. ಸಭೆಯಲ್ಲಿ ಕೇವಲ 8 ಮಂದಿಯಲ್ಲ ಬಹಳಷ್ಟು ಮಂದಿ ಕಲ್ಲು ಎಸೆದಿದ್ದಾರೆ. ಆ ಯುವಕರನ್ನು ಬಂಧಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸಭೆಯಲ್ಲಿ ನಿರ್ಧಾರ ಮಾಡಿದಂತೆ ಹಿಂದೂ ಮುಖಂಡರು …

Read More »