ವಿಜಯಪುರ, (ಫೆಬ್ರವರಿ 12): ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ನಡೆದಿದೆ. ಆಟೋದಲ್ಲಿ ಬಂದಿದ್ದ ನಾಲ್ಕೈದು ದಾಳಿಕೋರರು, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿರೋ, ಹಂತಕರ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಾಗಪ್ಪ ಕೊಲೆ ವಕೀಲ ರವಿ …
Read More »ತೀವ್ರ ಕೂತುಹಲ ಕೆರಳಿಸಿದ ಬಿಜೆಪಿ ನೊಟೀಸ್: ಯತ್ನಾಳರ ಮುಂದಿನ ನಡೆ ಏನು?
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಆದ್ರೆ ನೊಟೀಸ್ ತಲುಪಿಲ್ಲಾ ಎಂದು ಶಾಸಕ ಯತ್ನಾಳ ವರಾತ ತೆಗೆದಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣವನ್ನು ಮಣಿಸಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ …
Read More »ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಪ್ರತಿಭಟನೆ
ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ …
Read More »ಖೋಟಾನೋಟು ಚಲಾವಣೆ: ನಾಲ್ವರ ಬಂಧನ
ಖೋಟಾನೋಟು ಚಲಾವಣೆ: ನಾಲ್ವರ ಬಂಧನ : ವಿಜಯಪುರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ …
Read More »ಬಸವನಾಡು ವಿಜಯಪುರ ಜಿಲ್ಲೆ ಐತಿಹಾಸಿಕವಾಗಿ, ತೋಟಗಾರಿಕೆ ಬೆಳೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ.
ಬಸವನಾಡು ವಿಜಯಪುರ ಜಿಲ್ಲೆ ಐತಿಹಾಸಿಕವಾಗಿ, ತೋಟಗಾರಿಕೆ ಬೆಳೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇದರೆಲ್ಲರ ನಡುವೆ ಇಲ್ಲಿಯ ಕೆಲ ಸಾಧಕರು ಸೈಕ್ಲಿಂಗ್, ಕ್ರಿಕೆಟ್ ಮತ್ತಿತರರ ವಿಭಾಗಗಳಲ್ಲಿ ಸಾಧನೆ ಮಾಡೋದರ ಜೊತೆಗೆ ಬಸವನಾಡಿಗೆ ಕೀರ್ತಿ ತಂದಿದ್ದಾರೆ. ಇದೀಗ ಜಿಲ್ಲೆಯ ಯುವತಿ ಯೊರ್ವಳು ಮಾಡಿದ ಸಾಧನೆ ವಿಜಯಪುರ ಜಿಲ್ಲೆಯ ಗರಿ ಹೆಚ್ಚಿಸಿದೆ. ಚಿಕ್ಕ ವಯಸ್ಸಿನಲ್ಲೇ ಅಭೂತಪೂರ್ವ ಯಶಸ್ಸು ಪಡೆದು ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾಳೆ. : ಸಾಧಿಸುವ ಛಲ, ಹಿಂದೆ ಪ್ರೋತ್ಸಾಹ ವಿದ್ದರೆ ಏನೆಲ್ಲಾ …
Read More »ಯತ್ನಾಳ್ ವಿರುದ್ಧ 5 ಕೋಟಿ ರೂ.ಮಾನನಷ್ಟ ಕೇಸ್: ಇಬ್ರಾಹಿಂ
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿ.ಎಂ. ಇಬ್ರಾಹಿಂ ವಕ್ಫ್ ಆಸ್ತಿ ತಿಂದಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ. ನಾನು ಈಗಾಗಲೇ ವಕೀಲರ ಮೂಲಕ ನೋಟಿಸ್ ಕೊಟ್ಟು 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುತ್ತಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಯತ್ನಾಳ್ ಅವರೇ ನಾನು ಯಾವ ಊರಿನಲ್ಲಿ ವಕ್ಫ್ ಆಸ್ತಿ ತಿಂದಿದ್ದೀನಿ? ಎಷ್ಟು ಆಸ್ತಿ? …
Read More »ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ …
Read More »ವಕ್ಫ್ ಆಸ್ತಿ ವಿವಾದ: ರೈತರಿಂದ ಅಹೋರಾತ್ರಿ ಧರಣಿ
ವಿಜಯಪುರ: ಜಿಲ್ಲೆಯ ರೈತರ ಜಮೀನಿನ ಉತಾರೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ರಾತ್ರಿ ದೀಪಗಳನ್ನು ಬೆಳಗಿಸಿ, ಪ್ರತಿಭಟನೆ ನಡೆಸುವ ಮೂಲಕ ಆಹೋರಾತ್ರಿ ಧರಣಿ ಕೈಗೊಂಡರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿಗಳ ಕಚೇರಿಗೆ ಸಂಜೆ ಆಗಮಿಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮ್ಮದ್ ಅವರ …
Read More »ಯತ್ನಾಳ್ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯು ಆಸ್ತಿ ವಶಕ್ಕಾಗಿ ರೈತರಿಗೆ ನೋಟಿಸ್ ನೀಡಿರುವ ಸಂಬಂಧ ಅಲ್ಲಿಗೆ ಭೇಟಿ ನೀಡಿ ನೊಂದ ರೈತರ ಅಹವಾಲು ಆಲಿಸುವ ಬಿಜೆಪಿ ತಂಡದ ಬಗ್ಗೆ ಅದೇ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ ಬೆನ್ನಲ್ಲೇ, ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ರಚಿಸಿದ್ದ ತಂಡವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪುನಾರಚನೆ ಮಾಡಿದ್ದಾರೆ. ಈಗಾಗಲೇ ಇರುವ ಸದಸ್ಯರ ಜೊತೆಗೆ ಸಂಸದ ರಮೇಶ್ ಜಿಗಜಿಣಗಿ, ಶಾಸಕ …
Read More »ವಕ್ಫ್ ಬೋರ್ಡ್-ರೈತರ ಜಟಾಪಟಿ, ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ
ವಿಜಯಪುರ ಜಿಲ್ಲೆಯಲ್ಲಿನ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದು, ಹಲವು ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡಿದ್ದ ಭೂಮಿಯು ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂದು ನೋಟಿಸ್‌ನಲ್ಲಿ ತಿಳಿಸಿದೆ. ಇದೇ ವಿಚಾರವಾಗಿ ವಕ್ಫ್ ಹಾಗೂ ರೈತರ ನಡುವೆ ಜಟಾಪಟಿ ಮುಂದುವರಿದಿದೆ. ಮತ್ತೊಂದೆಡೆ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ …
Read More »