Home / ಜಿಲ್ಲೆ / ಬಿಜಾಪುರ (page 10)

ಬಿಜಾಪುರ

ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ. ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, …

Read More »

ಅರುಣ್ ಸಿಂಗ್ ಭೇಟಿ ಮಾಡುವವರ ಲಿಸ್ಟ್ ನ್ನು ಹಂಚಿಕೊಂಡ ಯತ್ನಾಳ್

ವಿಜಯಪುರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಿಎಂ ಬದಲಾವಣೆಯ ಕುರಿತು ಪರ, ವಿರೋಧ ಚರ್ಚೆ ಕೂಡ ನಡೆದಿದೆ. ಇದರ ಮಧ್ಯೆ ನಾಯಕತ್ವ ಬದಲಾವಣೆ ಕುರಿತು ಮಾತನಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೈಲೆಂಟಾಗಿದ್ದು, ಯಾರ ಕೈಗೂ ಸಿಗುತ್ತಿಲ್ಲ. ಇದೆಲ್ಲದರ ಮಧ್ಯೆ ಇಂದು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಅರುಣ್ ಸಿಂಗ್ ಭೇಟಿಗೆ ಅವಕಾಶ ಕೇಳಿಲ್ಲ ಎಂದಿದ್ದಾರೆ. ಈ ಕುರಿತು ಫೆಸ್ಬುಕ್‍ನಲ್ಲಿ ಪೋಸ್ಟ್ …

Read More »

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ. ನಾಯಕತ್ವ ಬದಲಾವಣೆ …

Read More »

ಮದುವೆ ಮಾಡಿಸುತ್ತೇನೆ ಎಂದು ಕರೆದೊಯ್ದು ಬಾಲಕಿ ಕೊಂದ ಸೋದರಮಾವ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಕೆಳಗೆ ಇತ್ತೀಚೆಗೆ ಪತ್ತೆಯಾದ ಯುವತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೋದರಮಾವನನ್ನು ಬಂಧಿಸಿದ್ದಾರೆ. ಜೂನ್​​​​​ 9 ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್​​​ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಮಲ್ಲಪ್ಪ ಬಿಲ್ಲಾಡ (17) ಎಂಬ ಯುವತಿ ಹತ್ಯೆ ಪ್ರಕರಣದಲ್ಲಿ ಸೋದರಮಾವ ಸಿದ್ರಾಮಪ್ಪ ಕಲ್ಲಪ್ಪ ಅವಟಿ (43) ಬಂಧಿಸಲಾಗಿದೆ. ಕೊಲೆಯಾದ ದಿನದಿಂದ ದೇವರಹಿಪ್ಪರಗಿಯ ಮಲ್ಲಯ್ಯನ …

Read More »

ವಿಜಯಪುರ: ಶಿಕ್ಷಕನ ಅರಸಿ ಬಂದ ಒಂಬತ್ತು ಸರ್ಕಾರಿ ನೌಕರಿ!

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸೋದು ಕಷ್ಟ. ಅದರಲ್ಲೂ ಅದೃಷ್ಟ ಚೆನ್ನಾಗಿರಬೇಕು ಎಂಬ ಪರಿಸ್ಥಿತಿ ಇದೆ. ಆದರೆ, ಇಲ್ಲೊಬ್ಬ ಪ್ರತಿಭಾನ್ವಿತರೊಬ್ಬರಿಗೆ ಇದುವರೆಗೆ ಒಂದಲ್ಲ, ಎರಡಲ್ಲ, ಬರಬ್ಬೊರಿ ಒಂಬತ್ತು ವಿವಿಧ ಸರ್ಕಾರಿ ನೌಕರಿ ಅರಸಿ ಬಂದಿವೆ! ಹೌದು, ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ಕೃಷಿಕರಾದ ಮಲ್ಕಪ್ಪ ಹಳೇಮನಿ ಮತ್ತು ಬಸಮ್ಮ ದಂಪತಿ ಪುತ್ರ ಮಹೇಶ ಹಳೇಮನಿ ಅವರು ಇದುವರೆಗೆ ಬರೆದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತೇರ್ಗಡೆಯಾಗಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. …

Read More »

ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …

Read More »

ಕುರ್ಚಿ ಉಳಿಸಿಕೊಳ್ಳಲು ಲಾಕ್‌ಡೌನ್ ದುರ್ಬಳಕೆ ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಸ್ವಾರ್ಥಕ್ಕಾಗಿ ಕೋವಿಡ್ ಲಾಕ್‌ಡೌನ್ ದುರ್ಬಳಕೆ ಆಗದಿರಲಿ. ರೋಗ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಹಿಂಪಡೆಯಬೇಕು ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಲಾಕ್‌ಡೌನ್ ಜೂನ್ 7ಕ್ಕೆ ಕೊನೆಗೊಳ್ಳಲಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ …

Read More »

ಬೆಳೆದ ಬಾಳೆಗೆ ಸಿಗದ ಬೆಲೆ: ಉಚಿತವಾಗಿ ಹಂಚಿದ ಎಂ.ಬಿ.ಪಾಟೀಲ ಅಭಿಮಾನಿ ರೈತ

ವಿಜಯಪುರ: ಕೋವಿಡ್ ಸಂಕಷ್ಟದ ಕಾರಣಕ್ಕೆ ತಾವು ಬೆಳೆದ ಬಾಳೆಗೆ ಮಾರುಕಟ್ಟೆ ಸಿಗದಿದ್ದಾಗ ತಿಪ್ಪೆಗೆ ಸುರಿಯದೇ, ಹಣ್ಣನ್ನು ಹಳ್ಳಿಗಳಲ್ಲಿ ಹಂಚುವ ಮೂಲಕ ತಮ್ಮ ಕ್ಷೇತ್ರದ ಶಾಸಕರ ಸೇವೆಗೆ ಕೃತಜ್ಞತೆ ಸಲ್ಲಿಸಿ ರೈತರೊಬ್ಬರು ಮಾದರಿ ಆಗಿದ್ದಾರೆ. ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್ ಗ್ರಾಮದ ರೈತ ಬಸವರಾಜ ಕಾತ್ರಾಳ ಕ್ಷೇತ್ರದ ಶಾಸಕರಾದ ಎಂ.ಬಿ.ಪಾಟೀಲ ಅವರ ಅಪ್ಪಟ ಅಭಿಮಾನಿ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾವು ಲಕ್ಷಾಂತರ ರೂ. ಬಂಡವಾಳ ಹಾಕಿ, ಶ್ರಮ ವಹಿಸಿ 3 ಎಕರೆ …

Read More »

ಅಪರಿಪೂರ್ಣ ಪ್ಯಾಕೇಜ್: ಸಂಗಮೇಶ ಬಬಲೇಶ್ವರ

ವಿಜಯಪುರ: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕ, ಅಪರಿಪೂರ್ಣ ಹಾಗೂ ನಿಜವಾಗಿ ತೊಂದರೆಗೊಳಗಾದ ಎಲ್ಲರನ್ನೂ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಕೋವಿಡ್‌ನಿಂದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗಾಗಿ ಪ್ಯಾಕೇಜ್‌ನಲ್ಲಿ ನೇರವು ಘೋಷಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ದೆಹಲಿ ರಾಜ್ಯ ಸರ್ಕಾರದ ಮಾದರಿಯಲ್ಲಿ ಅನಾಥ ಮಕ್ಕಳ ಬಾಳಿಗೆ ಬೆಳಕು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು …

Read More »

ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಶೀಘ್ರವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಆರೋಗ್ಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ …

Read More »