Breaking News

ಬಿಜಾಪುರ

ನಟ ಅಪ್ಪು ನಿಧನ ಹಿನ್ನಲೆ ವಿಜಯಪುರ ಸಿನಿಮಾ ಮಂದಿರಗಳಲ್ಲಿ ಶೃದ್ದಾಂಜಲಿ ಕಾರ್ಯಕ್ರಮ ನಡೆಯಿತು.

ವಿಜಯಪುರ: ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು. ಅಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಡಿ ನಮನ ಸಲ್ಲಿಸಿದ ಅಭಿಮಾನಿಗಳು, ಸಿನಿಮಾ ಮಂದಿರ ಮಾಲಿಕರು, ಸಿಬ್ಬಂದಿ ವರ್ಗದವರು ಶ್ರದ್ಧಾಂಜಲಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಚಿತ್ರಪ್ರದರ್ಶಕ ಸಂಘದಿಂದ ಹಮ್ಮಿಕೊಳ್ಳಲಾಗಿರುವ ಶೃದ್ಧಾಂಜಲಿ ಕಾರ್ಯಕ್ರಮವು ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ ನಮನ ಸಲ್ಲಿಸಿ ಕ್ಯಾಂಡಲ್ ಬೆಳಗಿ ಅಪ್ಪುವಿಗೆ ಅಭಿಮಾನಿಗಳು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು. ಲಕ್ಷ್ಮೀ ಚಿತ್ರಮಂದಿರದಲ್ಲಿ ಭಜರಂಗಿ 2 ಚಿತ್ರ ವೀಕ್ಷಿಸಲು …

Read More »

ಬಿಜೆಪಿ ಆಡಳಿತ ಯಂತ್ರದ ದುರ್ಬಳಕೆಯಿಂದ ಕಾಂಗ್ರೆಸ್ ಸೋಲು: ಶಿವಾನಂದ ಪಾಟೀಲ

ವಿಜಯಪುರ: ದುಡ್ಡು ಹಂಚಿ ಗೆದ್ದಿರುವ ಚುನಾವಣೆ ಇದು. ದುಡ್ಡು ಪ್ರಭಾವ ಬೀರಿದೆ. ಆಡಳಿತ ಯಂತ್ರದ ದುರ್ಬಳಕೆ ಮಾಡಿಕೊಂಡು ಬಿಜೆಪಿ ಗೆಲುವು ಸಾಧಿಸಿದೆ ಎಂದು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ. ಸಿಂದಗಿ ಉಪ ಚುನಾವಣೆ ಫಲಿತಾಂಶದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿ ಕ್ಷೇತ್ರದಲ್ಲಿ ಅಧಿಕಾರದ ದುರ್ಬಳಕೆ, ಹಣ ಬಲವನ್ನೆಲ್ಲ ಮೀರಿ ಕಾಂಗ್ರೆಸ್ ಪರ ಮತ ಹಾಕಿದ ಕ್ಷೇತ್ರದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.   ಸಿಂದಗಿ …

Read More »

ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಬಗ್ಗೆ ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ!

ವಿಜಯಪುರ, ಅ. 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಇಲ್ಲವಾ? ಯಾಕೆಂದರೆ ಹೇಳುವ ಮೂಲಕ ಪರೋಕ್ಷ ವಾಗ್ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉಪ ಚುನಾವಣೆ ಅತ್ಯಂತ ಪ್ರತಿಷ್ಠೆಯ ವಿಷಯವಾಗಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎದುರಾಗಿರುವ ಸವಾಲು ಎದುರಿಸಲು ಉಪ ಸಮರ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ಮಾಡುತ್ತಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ …

Read More »

ಕೇವಲ ₹500 ರೂ. ಹಣಕ್ಕಾಗಿ ವ್ಯಕ್ತಿ ಕೊಲೆ ಮಾಡಿ ಪರಾರಿಯಾದ ಖತರ್ನಾಕ್​​ ಗ್ಯಾಂಗ್​​..!

ವಿಜಯಪುರ: ಕೇವಲ ₹5,00 ರೂಪಾಯಿಗಾಗಿ ನಾಲ್ಕು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಹತ್ಯೆಗೈದು ಪರಾರಿಯಾಗಿದೆ. ವಿಜಯಪುರದ ಜಾಡರ ಓಣಿಯಲ್ಲಿ ಘಟನೆ ನಡೆದಿದ್ದು, ನಿವಾಸಿ ಭೀಮ್ಸಿ ಪಾತ್ರೋಟಿ ಮೃತ ದುರ್ದೈವಿ ಎನ್ನಲಾಗಿದೆ. ನಾಲ್ವರು ಸೇರಿಕೊಂಡು ಭೀಮ್ಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

Read More »

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

ಮುದ್ದೇಬಿಹಾಳ: ಮಿಣಜಗಿ, ಹೂವಿನ ಹಿಪ್ಪರಗಿ ಭಾಗದಿಂದ ತಾಳಿಕೋಟೆ ಪ್ರವೇಶಿಸುವ ಡೋಣಿ ನದಿಯ ಮೇಲಿನ ದಶಕಗಳಷ್ಟು ಹಳೇಯದಾದ ಸೇತುವೆಯ ಅಂದಾಜು 15 ಮೀಟರ್ನಷ್ಟು ಭಾಗ ಕುಸಿಯತೊಡಗಿದ್ದು, ಅದರ ಮುಂದಿನ ಭಾಗವೂ ನಿಧಾನವಾಗಿ ಕುಸಿಯತೊಡಗಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಭವನೀಯ ಅನಾಹುತ ತಪ್ಪಿಸಲು ಸೇತುವೆಯ ಮೇಲೆ ಸಂಚಾರವನ್ನು ಸೋಮವಾರ ಸಂಜೆಯಿಂದಲೇ ಬಂದ್ ಮಾಡಲಾಗಿದೆ. ಇದರಿಂದಾಗಿ ಮುದ್ದೇಬಿಹಾಳ, ಹೂವಿನ ಹಿಪ್ಪರಗಿ ಮತ್ತು ಮಿಣಜಗಿ ಭಾಗದಿಂದ ತಾಳಿಕೋಟೆ ಪ್ರವೇಶ ಬಂದ್ ಆಗಿದೆ. ಸ್ಥಳಕ್ಕೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ …

Read More »

ಅಕ್ರಮ ಗಾಂಜಾ ಬೆಳೆ ಜಪ್ತಿ: ಓರ್ವನ ಬಂಧನ

ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯ ತೇರದಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 13 ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿರುವ ತೇರದಾಳ ಪೊಲೀಸರು ಓರ್ವ ಜಮೀನು ಸಾಗುವಳಿದಾರನನ್ನು ಬಂಧಿಸಿರುವ ಘಟನೆ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜುಗಲಾಸಾರ, ಜಮಖಂಡಿ ಡಿವಾಯ್ ಎಸ್ ಪಿ ಎಂ. ಪಾಂಡುರಂಗಯ್ಯ ಅವರ ಮಾರ್ಗದರ್ಶನದಲ್ಲಿ ರಬಕವಿ-ಬನಹಟ್ಟಿ ತಹಶಿಲ್ದಾರರ ಸಂಜಯ ಇಂಗಳೆ …

Read More »

ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ

ವಿಜಯಪುರ: ನಗರದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದೆ. ಯಾರೋ ಬೈಕ್‍ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮ ಬೈಕ್ ಮೇಲಿಂದ ಬಿದ್ದು, ಗಾಯಗೊಂಡು ಯುವಕ, ಯುವತಿ ಒದ್ದಾಡಿದ್ದಾರೆ. ಅಲ್ಲದೆ ಸಹಾಯಕ್ಕಾಗಿ ಅಂಗಲಾಚಿದ ಹೃದಯವಿದ್ರಾವಕ ಘಟನೆ ನಡೆದಿದೆ.   ನಗರದ ಜುಮನಾಳ ರಸ್ತೆಯ ದದಾಮಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಕಾಪಾಡುವಂತೆ ಯುವಕ, ಯುವತಿ ಅಂಗಲಾಚುತ್ತಿದ್ದ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಒದ್ದಾಡುತ್ತ, ಕಾಪಾಡಿ ಎಂದು ಬೈಕ್ ಸವಾರರಾದ ಸಚಿನ್, ಸುಜಾತಾ …

Read More »

ವಿಜಯಪುರ : ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ವಿಜಯಪುರ : ರೇವಣಸಿದ್ಧೇಶರ ಏತ ನೀರಾವರಿ ಸೇರಿದಂತೆ ಇಂಡಿ ಕ್ಷೇತ್ರದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆಗ್ರಹಿಸಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಬಳಿ ಜೆಡಿಎಸ್ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ- 50 ಸಂಚಾರ ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ಬಿ.ಡಿ.ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಗಾರರು ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಬೇಕು, ಇಂಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸೋ ಕಾಮಗಾರಿಗೆ …

Read More »

ಮಾತೃವಂದನಾ: ಗರ್ಭಿಣಿ, ಬಾಣಂತಿಯರಿಗೆ ವರದಾನ

ವಿಜಯಪುರ: ಗರ್ಭಿಣಿ, ಬಾಣಂತಿಯರ ಆರೋಗ್ಯ ಕಾಪಾಡಲು ಹಾಗೂ ಅಪೌಷ್ಟಿಕತೆ, ರಕ್ತಹೀನತೆ, ಶಿಶುಮರಣ, ಬಾಣಂತಿ ಮರಣ ನಿಯಂತ್ರಿಸಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯು ಮಹಿಳೆಯರಿಗೆ ವರದಾನವಾಗಿದೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಹೇಳಿದರು. ನಗರದ ಜಿಲ್ಲಾ ಸ್ತ್ರೀಶಕ್ತಿ ಭವನದಲ್ಲಿ ಏರ್ಪಡಿಸಿದ್ದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮಾತೃವಂದನ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಮಾತೃ …

Read More »

ವಿರಕ್ತಮಠದ ಪೀಠಾಧಿಕಾರಿಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ಸಿಂದಗಿ ಪಟ್ಟಣದ ವಿರಕ್ತಮಠದ ಪೀಠಾಧಿಕಾರಿಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ (58) ಭಾನುವಾರ ಬೆಳಿಗ್ಗೆ ಲಿಂಗ್ಯೆಕ್ಯರಾದರು. ಸುದೀರ್ಘ ಪರಂಪರೆ ಹೊಂದಿದ ವಿರಕ್ತಮಠದ 18 ನೇ ಪೀಠಾಧಿಕಾರಿಗಳಾಗಿದ್ದರು. 1985 ರಲ್ಲಿ ಶ್ರೀಗಳ ಪಟ್ಟಾಧಿಕಾರ ಅದ್ದೂರಿಯಾಗಿ ನಡೆದಿತ್ತು. ತಪಸ್ವಿಗಳು, ಮಾತೃಹೃದಯಿಗಳಾಗಿದ್ದರು. ಈ ಭಾಗದಲ್ಲಿ ಅಪಾರ ಭಕ್ತರು ಶ್ರೀಮಠದ ಶಿಷ್ಯರಾಗಿದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಭಾನುವಾರ ಸಂಜೆ ಶ್ರೀಮಠದ ಆವರಣದಲ್ಲಿ ವಿರಕ್ತ ಸಂಪ್ರದಾಯದಂತೆ ನೆರವೇರಲಿದೆ.

Read More »