ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಕೆಳಗೆ ಇತ್ತೀಚೆಗೆ ಪತ್ತೆಯಾದ ಯುವತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೋದರಮಾವನನ್ನು ಬಂಧಿಸಿದ್ದಾರೆ. ಜೂನ್ 9 ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಮಲ್ಲಪ್ಪ ಬಿಲ್ಲಾಡ (17) ಎಂಬ ಯುವತಿ ಹತ್ಯೆ ಪ್ರಕರಣದಲ್ಲಿ ಸೋದರಮಾವ ಸಿದ್ರಾಮಪ್ಪ ಕಲ್ಲಪ್ಪ ಅವಟಿ (43) ಬಂಧಿಸಲಾಗಿದೆ. ಕೊಲೆಯಾದ ದಿನದಿಂದ ದೇವರಹಿಪ್ಪರಗಿಯ ಮಲ್ಲಯ್ಯನ …
Read More »ವಿಜಯಪುರ: ಶಿಕ್ಷಕನ ಅರಸಿ ಬಂದ ಒಂಬತ್ತು ಸರ್ಕಾರಿ ನೌಕರಿ!
ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸೋದು ಕಷ್ಟ. ಅದರಲ್ಲೂ ಅದೃಷ್ಟ ಚೆನ್ನಾಗಿರಬೇಕು ಎಂಬ ಪರಿಸ್ಥಿತಿ ಇದೆ. ಆದರೆ, ಇಲ್ಲೊಬ್ಬ ಪ್ರತಿಭಾನ್ವಿತರೊಬ್ಬರಿಗೆ ಇದುವರೆಗೆ ಒಂದಲ್ಲ, ಎರಡಲ್ಲ, ಬರಬ್ಬೊರಿ ಒಂಬತ್ತು ವಿವಿಧ ಸರ್ಕಾರಿ ನೌಕರಿ ಅರಸಿ ಬಂದಿವೆ! ಹೌದು, ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ಕೃಷಿಕರಾದ ಮಲ್ಕಪ್ಪ ಹಳೇಮನಿ ಮತ್ತು ಬಸಮ್ಮ ದಂಪತಿ ಪುತ್ರ ಮಹೇಶ ಹಳೇಮನಿ ಅವರು ಇದುವರೆಗೆ ಬರೆದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತೇರ್ಗಡೆಯಾಗಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. …
Read More »ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ
ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …
Read More »ಕುರ್ಚಿ ಉಳಿಸಿಕೊಳ್ಳಲು ಲಾಕ್‌ಡೌನ್ ದುರ್ಬಳಕೆ ಬೇಡ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಸ್ವಾರ್ಥಕ್ಕಾಗಿ ಕೋವಿಡ್ ಲಾಕ್‌ಡೌನ್ ದುರ್ಬಳಕೆ ಆಗದಿರಲಿ. ರೋಗ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಹಿಂಪಡೆಯಬೇಕು ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಲಾಕ್‌ಡೌನ್ ಜೂನ್ 7ಕ್ಕೆ ಕೊನೆಗೊಳ್ಳಲಿದ್ದು, ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ …
Read More »ಬೆಳೆದ ಬಾಳೆಗೆ ಸಿಗದ ಬೆಲೆ: ಉಚಿತವಾಗಿ ಹಂಚಿದ ಎಂ.ಬಿ.ಪಾಟೀಲ ಅಭಿಮಾನಿ ರೈತ
ವಿಜಯಪುರ: ಕೋವಿಡ್ ಸಂಕಷ್ಟದ ಕಾರಣಕ್ಕೆ ತಾವು ಬೆಳೆದ ಬಾಳೆಗೆ ಮಾರುಕಟ್ಟೆ ಸಿಗದಿದ್ದಾಗ ತಿಪ್ಪೆಗೆ ಸುರಿಯದೇ, ಹಣ್ಣನ್ನು ಹಳ್ಳಿಗಳಲ್ಲಿ ಹಂಚುವ ಮೂಲಕ ತಮ್ಮ ಕ್ಷೇತ್ರದ ಶಾಸಕರ ಸೇವೆಗೆ ಕೃತಜ್ಞತೆ ಸಲ್ಲಿಸಿ ರೈತರೊಬ್ಬರು ಮಾದರಿ ಆಗಿದ್ದಾರೆ. ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್ ಗ್ರಾಮದ ರೈತ ಬಸವರಾಜ ಕಾತ್ರಾಳ ಕ್ಷೇತ್ರದ ಶಾಸಕರಾದ ಎಂ.ಬಿ.ಪಾಟೀಲ ಅವರ ಅಪ್ಪಟ ಅಭಿಮಾನಿ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾವು ಲಕ್ಷಾಂತರ ರೂ. ಬಂಡವಾಳ ಹಾಕಿ, ಶ್ರಮ ವಹಿಸಿ 3 ಎಕರೆ …
Read More »ಅಪರಿಪೂರ್ಣ ಪ್ಯಾಕೇಜ್: ಸಂಗಮೇಶ ಬಬಲೇಶ್ವರ
ವಿಜಯಪುರ: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಅವೈಜ್ಞಾನಿಕ, ಅಪರಿಪೂರ್ಣ ಹಾಗೂ ನಿಜವಾಗಿ ತೊಂದರೆಗೊಳಗಾದ ಎಲ್ಲರನ್ನೂ ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಕೋವಿಡ್‌ನಿಂದ ತಂದೆ, ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗಾಗಿ ಪ್ಯಾಕೇಜ್‌ನಲ್ಲಿ ನೇರವು ಘೋಷಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ದೆಹಲಿ ರಾಜ್ಯ ಸರ್ಕಾರದ ಮಾದರಿಯಲ್ಲಿ ಅನಾಥ ಮಕ್ಕಳ ಬಾಳಿಗೆ ಬೆಳಕು ನೀಡುವ ಪ್ರಯತ್ನ ಮಾಡಬೇಕು ಎಂದು ಅವರು …
Read More »ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಬೆಂಗಳೂರು: ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಶೀಘ್ರವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಆರೋಗ್ಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ …
Read More »ನಕಲಿ ವೈದ್ಯರಿಂದ ಊರು ತುಂಬಾ ಹರಡಿತು ಕೊರೋನ ಸೋಂಕು!!!
ವಿಜಯನಗರ: ಕರೊನಾ ನಗರಗಳಿಗೆ ಮಾತ್ರ ಸೀಮಿತವಾಗದೆ ಹಳ್ಳಿ ಹಳ್ಳಿಗೂ ಹಬ್ಬಲಾರಂಭಿಸಿದೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಲವರು ವೈದ್ಯರಂತೆ ನಾಟಕವಾಡಿ ಜನಸಾಮಾನ್ಯರಿಂದ ಹಣ ಲೂಟಿ ಮಾಡುವ ಕೆಲಸಕ್ಕೂ ಮುಂದಾಗಿದ್ದಾರೆ. ಅದೇ ರೀತಿಯ ಘಟನೆ ವಿಜಯನಗರ ಜಿಲ್ಲೆಯಲ್ಲೂ ನಡೆದಿದ್ದು, ಗ್ರಾಮವನ್ನೇ ಸೀಲ್ಡೌನ್ ಮಾಡುವಂತಹ ಸ್ಥಿತಿ ಬಂದೊದಗಿದೆ. ಹೌದು! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಕೆಲ ನಕಲಿ ಡಾಕ್ಟರ್ಗಳು ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಕರೊನಾ ಲಕ್ಷಣವಿರುವ …
Read More »ಕೋವಿಡ್-19 ಆನ್ ಡ್ಯೂಟಿ ಸೌಲಭ್ಯ ದುರ್ಬಳಕೆ; ಆಚಾರ್ಯರಿಂದ ಕಾರು ಸೀಜ್
ವಿಜಯಪುರ: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿ ಪೊಲೀಸರು ಎಲ್ಲೆಡೆ ನಾಕಾ ಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ. ಇಷ್ಟಾಗಿಯೂ ಕೆಲವು ಮಂದಿ ಕಾನೂನು ಹಾಗೂ ಕಟ್ಟುನಿಟ್ಟು ನಿಯಮಗಳನ್ನು ತಪ್ಪಿಸಿ ಓಡಾಡಲು ಪ್ರಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆಗಳು ಕೇಳಿಬರುತ್ತಿವೆ. ಇಂತಹದ್ದೇ ಮತ್ತೊಂದು ವಿಜಯಪುರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅರ್ಜೆಂಟ್ ಕೋವಿಡ್-19 ಆನ್ ಡ್ಯೂಟಿ’ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ಅರ್ಚಕರನ್ನು ಕರೆದೊಯ್ಯುತ್ತಿದ್ದ ಕಾರು ಕಂಡುಬಂದಿದ್ದು, ಅದನ್ನು …
Read More »ವಿಜಯಪುರ: ‘ಬಿಎಲ್ ಡಿಇ’ ಆಸ್ಪತ್ರೆಗೆ ರೆಮಿಡಿಸಿವರ್ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ಎಂ.ಬಿ ಪಾಟೀಲ್ ವಾಗ್ದಾಳಿ
ವಿಜಯಪುರ: ತನ್ನ ಮಾಲಿಕತ್ವದ 500 ಕೋವಿಡ್ ಬೆಡ್ ಗಳ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಶೇಕಡ 70% ಕಡಿತಗೊಳಿಸಿ ಕಡಿಮೆ ವೆಚ್ಚದಲ್ಲಿ ನಿರ್ವಹಣೆ ಮಾಡಿ ಮಾನವೀಯತೆ ಮೆರೆದ ಮಾಜಿ ಗೃಹಸಚಿವ ಎಂ.ಬಿ ಪಾಟೀಲ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ ಮನವಿ ಸಲ್ಲಿಸಿದರೂ ಸರಿಯಾದ ಪ್ರಮಾಣದಲ್ಲಿ ರೆಮಿಡಿಸಿವರ್ ಔಷಧವನ್ನು ನೀಡದೇ, ಬೇಡಿಕೆಗೆ ಸರಿಯಾಗಿ ಸ್ಪಂದಿಸದೇ ಅಸಡ್ಡೆ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, …
Read More »