Breaking News

ಬಿಜಾಪುರ

ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.   ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ …

Read More »

ಅಳಿವಿನಂಚಿಗೆ ಗೊರವರ ಕುಣಿತ; ಈ ಕಲೆಯಿಂದ ದೂರವಾದ ಯುವ ಸಮುದಾಯ

ವಿಜಯಪುರ(ದೇವನಹಳ್ಳಿ): ಜಾನಪದ ನೃತ್ಯಗಳಲ್ಲಿ ಗೊರವರ ಕುಣಿತವೂ ಒಂದು. ಆದರೆ, ಈಚೆಗೆ ಕಣ್ಮರೆಯಾಗುತ್ತಿದೆ. ಯುವ ಸಮುದಾಯ ಈ ಕಲೆಯಿಂದ ದೂರ ಉಳಿದಿದೆ. ಶ್ರೀಮಂತ ಕಲೆಯೊಂದು ಅಳಿವಿನಂಚಿನಲ್ಲಿದೆ ಎಂದು ಕಲಾವಿದ ಕೃಷ್ಣಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ‘ನಮ್ಮ ಹಿರಿಯರಿಂದ ಸಾಂಪ್ರದಾಯಿಕವಾಗಿ ಬಂದಿರುವ ಗೊರವರ ಕುಣಿತ ಆಧುನಿಕ ಸೆಳೆತಕ್ಕೆ ಸಿಲುಕಿದೆ. ನಮ್ಮ ತಲೆಮಾರಿಗೆ ಅಂತ್ಯವಾಗುವ ಆತಂಕವಿದೆ. ಯುವಕರು ಈ ನೃತ್ಯ ಮಾಡಲು ಮುಂದೆ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ. 9ರಿಂದ 12 ಮಂದಿ ತಂಡ ಕಟ್ಟಿಕೊಂಡು ಏಳುಕೋಟಿ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸೀನಿಯರ್ ಇದ್ದೀನಿ; ಎಂಬಿ ಪಾಟೀಲ್

ವಿಜಯಪುರ: ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾರೆ, ಸಿಎಂ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆ ‌ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರದ ಕುರಿತು ಯಾವುದೇ ಹುರಳಿಲ್ಲ, ಪಾತ್ರವಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರಿಗೆ ಹಾಗಾಗುತ್ತೆ ಹೀಗಾಗುತ್ತೆ ಎಂದು ಯಾರಾದ್ರೂ ತಿಳಿದುಕೊಂಡಿದ್ದರೆ ಅದು ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್‌ನ …

Read More »

ನಕಲಿ ವಿದ್ಯಾರ್ಥಿಗಳ ಹೆಸರಲ್ಲಿ ಹಣ ದುರುಪಯೋಗ: ತನಿಖೆಗೆ ಜಿ.ಪಂ ಸಿಇಒ ಆದೇಶ

ವಿಜಯಪುರ: 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಕೊಡುವ ₹20 ಸಾವಿರ ನಗದು ಯೋಜನೆಯ ಹಣವನ್ನು ಇಲಾಖೆ ಸಿಬ್ಬಂದಿ ನುಂಗಿ ಹಾಕಿರುವ ಪ್ರಕರಣದ ತನಿಖೆಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್‌ ಆದೇಶಿಸಿದ್ದಾರೆ.   ‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟವಾದ ‘ನಕಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಹಣ ಗುಳುಂ!’ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ …

Read More »

ಸಮುದಾಯದ ಹೋರಾಟಕ್ಕೆ ಶಾಸಕರು, ಸರ್ಕಾರ ಬೆಂಬಲಿಸುತ್ತಿಲ್ಲ: ಬಸವಜಯಶ್ರೀ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ 7ನೇ ಹಂತದ ಹೋರಾಟಕ್ಕಾಗಿ ಸೆ.22 ರಂದು ಬೆಳಗಾವಿಯಲ್ಲಿ ವಕೀಲರ ಸಭೆ ಆಯೋಜಿಸಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರುವರೆ ವರ್ಷದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸಿದ್ದೇವೆ. ಭವಿಷ್ಯದಲ್ಲಿ ನಮ್ಮ ಹೋರಾಟ ತೀವ್ರತೆ ಪಡೆಯಲಿದೆ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ …

Read More »

ಓಲೈಕೆ ಮಾಡಿದರೆ ಬಾಂಗ್ಲಾದಂತೆ ನಮ್ಮಲ್ಲೂ ದೇವಸ್ಥಾನಕ್ಕೆ ಬೆಂಕಿ: ಯತ್ನಾಳ್

ವಿಜಯಪುರ :‘ಮುಸ್ಲಿಂ ಓಲೈಕೆಯಿಂದ, ನಿಮ್ಮ ದೇವರ ಗುಡೀನೆ ಉಳಿಯೋದಿಲ್ಲ. ಯಾವ ದೇವರಿಗೆ ಹೋಗಿ ಕೈ ಮುಗಿಯುವವರು ಇದ್ದೀರಾ. ಬಾಂಗ್ಲಾದಲ್ಲಿ ಏನಾಯ್ತು? ಸ್ವಾಮಿ ನಾರಾಯಣ ಟೆಂಪಲ್ 2 ಸಾವಿರ ಕೋಟಿ ರೂಪಾಯಿ ದೇವಸ್ಥಾನ, ಮುಸ್ಲಿಮರಿಗೆಗೆ ಅಲ್ಲಿ ಅನ್ನ ಹಾಕಿದರೂ ಅವರು ದೇವಸ್ಥಾನಕ್ಕೆ ಬೆಂಕಿ ಹಚ್ಚಿದರು, ನಾನೇನು ಸುಳ್ಳು ಹೇಳುತ್ತಿಲ್ಲ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿ ಕಾರಿದ್ದಾರೆ.   ಗುರುವಾರ ನಗರದಲ್ಲಿ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಶ್ಚಂದ್ರ ಬೋಸ್ …

Read More »

ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ

ವಿಜಯಪುರ: ಆಸ್ತಿ ವಿವಾದದ ಕಾರಣಕ್ಕೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದು, ವೃದ್ಧನ ಮೇಲೆ ಕುಳಿತು ಮನಬಂದಂತೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ನಾಲತವಾಡ-ನಾರಾಯಣಪುರ ಬಳಿಯ ವೀರೇಶನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಮ್ಮ ಲೊಟಗೇರಿ ಹಾಗೂ ಸಣ್ಣಹನುಮಂತ ಲೊಟಗೇರಿ ಎಂಬುವವರ ಮೇಲೆ ಅಮಾನವೀಯ ರೀತಿಯಲ್ಲಿ ಸಂಬಂಧಿಗಳೇ ಹಲ್ಲೆ ಮಾಡಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ದೇವಮ್ಮ ಅವರ ತಲೆಗೂದಲು ಹಿಡಿದು ಎಳೆದಾಡಿದ್ದರೆ, ಇನ್ನೋರ್ವ ವ್ಯಕ್ತಿ …

Read More »

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

ವಿಜಯಪುರ: ಕಳೆದ ವರ್ಷ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕನ ಜೀವ ಪಡೆದ ದುರಂತ ಘಟನೆ ಮಾಸುವ ಮುನ್ನವೇ ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಸುದೈವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ …

Read More »

ಜಮಖಂಡಿ ತಾಲ್ಲೂಕಿಗೆ ಹಿಪ್ಪರಗಿ ಮರುಸೇರ್ಪಡೆ

ಜಮಖಂಡಿ: ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆಯ ಬಳಿಕ ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸೇರ್ಪಡೆಯಾಗಿದ್ದ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಭೂಮಾಪನ) ಎಸ್. ಗುರುಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ.   ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ಜೂನ್‌ 14 ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಜೂನ್‌ 24ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಅಧಿಸೂಚನೆ ಮಾಹಿತಿಯನ್ನು ಅಗತ್ಯ ಕ್ರಮದ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು …

Read More »

ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ

ವಿಜಯಪುರ,: ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದನಗರದಸಿದ್ದೇಶ್ವರ ಜಾತ್ರಾ‌ ಮಹೋತ್ಸವ (Siddheshwar Fair) ನಡೆಸಿರಲಿಲ್ಲ. ಇದೀಗ ಜನವರಿ 12 ರಿಂದ ಜಾತ್ರೆ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ. ಜಾತ್ರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಾತ್ರಾ‌ ಉತ್ಸವ ಸಮೀತಿ ಅಧ್ಯಕ್ಷ ಗುರು ಗಚ್ಚಿನಮಠ, ಜನೇವರಿ 12 ರಂದು ಗೋಮಾತೆ ಪೂಜೆ ಹಾಗೂ ನಂದಿಧ್ವಜಗಳ ಮೆರವಣಿಗೆ …

Read More »