Breaking News

ಬಿಜಾಪುರ

ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಯಶವಂತರಾಯಗೌಡ ಪಾಟೀಲ

ಇಂಡಿ: ‘ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆ ಆರಂಭಗೊಂಡಿದ್ದು ಪಟ್ಟಣವೂ ಸೇರಿದಂತೆ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ನಗರದಲ್ಲಿ ಕುಡಿಯುವ ನೀರಿನ ಕುರಿತು ಶನಿವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಭೀಮಾ ನದಿಯಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನಾದ್ಯಂತ ಅನೇಕ ಕೆರೆಗಳು …

Read More »

ಮಾದಕವಸ್ತು ಮುಕ್ತ ಭಾರತ ಹಾಗೂ ಅಂಗದಾನ ಜಾಗೃತಿ ವಾಕ್‌ಥಾನ್

ಭಾರತವನ್ನು ಮಾದಕವಸ್ತು ಮುಕ್ತ ರಾಷ್ಟ್ರವನ್ನಾಗಿಸಲು ಮತ್ತು ಅಂಗದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಜಯಪುರದಲ್ಲಿ ವಾಕ್‌ಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ವಿಜಯಪುರ ಜಿಲ್ಲೆಯ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ಈ ಜಾಗೃತಿ ವಾಕ್‌ಥಾನ್ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ ಅವರು ಹಸಿರು ನಿಶಾನೆ ತೋರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ವಾಕ್‌ಥಾನ್, ಅಂಬೇಡ್ಕರ್ ಕ್ರೀಡಾಂಗಣದಲ್ಲಿ …

Read More »

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ ) ಸಮಾವೇಶ ಆಯೋಜನೆ ಮಾಡಲಾಗಿದೆ. ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ …

Read More »

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ

ವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂ.ಗಳ ಆರ್ಥಿಕ ನೆರವಿನ ಮೊತ್ತ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ …

Read More »

ನರೇಗಾ ಬಚಾವ್ ಸಂಗ್ರಾಮ್ ಪ್ರತಿಭಟನೆ; ಕಾಂಗ್ರೆಸ್ ವತಿಯಿಂದ ವಿಜಯಪುರ ನಗರದಲ್ಲಿ ರ್ಯಾಲಿ

ವಿಜಯಪುರ ನಗರ ಮತಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ನರೇಗಾ ಬಚಾವ್ ಸಂಗ್ರಾಮ್’ ಪ್ರತಿಭಟನೆ ನಗರದ ಮಧ್ಯಭಾಗದಲ್ಲಿರುವ ಮಹಾತ್ಮ ಗಾಂಧೀಜಿ ವೃತ್ತದಿಂದ ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಮೀದ ಮುಶ್ರಿಷ್, ಹಲವು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯನ್ನು ಬಿಜೆಪಿ ಸರ್ಕಾರವು ವಿ.ಬಿ.ಜಿ.ರಾಮ ಜಿ ಯೋಜನೆ ಎಂದು ಪರಿವರ್ತಿಸಲು ಮುಂದಾಗಿರುವುದು ಖಂಡನೀಯ …

Read More »

ಇವರ ಸಾಧನೆ ಸಾಲದ ಹೊರೆ ಅಷ್ಟೇ

ವಿಜಯಪುರ: ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 1000 ದಿನ ರಾಜ್ಯ ಸರ್ಕಾರ ಪೂರೈಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಪ್ರತಿನಿತ್ಯ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಒಂದೆ ಕಡೆ ರಾಜ್ಯ ಸೊರಗಿ ಹೋಗಿದೆ. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ …

Read More »

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

ವಿಜಯಪುರ: ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ, ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರನಂತೆ ವಸೂಲಿಗೆ ನಿಂತಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಯತೀಂದ್ರ ಕೂಡ ವಸೂಲಿ ಕಂಪನಿಯಾಗಿದ್ದಾನೆ. ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ. ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರ ಹಾಗೆ ವಸೂಲಿಗೆ ನಿಂತಿದ್ದಾನೆ. ವಿಜಯೇಂದ್ರ ಕಡೆ ರಾತ್ರಿ ಟ್ರೇನಿಂಗ್ ತೆಗೆದುಕೊಳ್ಳುತ್ತಾನಂತೆ. ಹೇಗೆ …

Read More »

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ

ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಬಲರಾಮ ಅವರಿಗೆ ಚಿಕಿತ್ಸೆ …

Read More »

ಖಾಸಗಿ ವಿಮಾನ ಪತನವಾದ ಜಮೀನು ಮಾಲೀಕರ ಗೋಳಾಟ – 5 ಲಕ್ಷ ರೂ. ಪರಿಹಾರಕ್ಕೆ ಮನವಿ

ವಿಜಯಪುರ: ವಿಮಾನ ಪತನಗೊಂಡು ಎರಡು ದಿನ ಕಳೆದರೂ ಕೂಡ ಜಮೀನಿನಿಂದ ವಿಮಾನ ತೆಗೆದಿಲ್ಲ. ದುರಂತ ನೋಡಲು ಬಂದ ಜನರು ಜಮೀನಿನಲ್ಲಿದ್ದ ಕಬ್ಬು ತುಳಿದು ಹಾಳು ಮಾಡಿದ್ದಾರೆ. ಅಂದಾಜು 5 ಲಕ್ಷ ರೂ. ಪರಿಹಾರ ನೀಡಿ ಎಂದು ಜಮೀನು ಮಾಲೀಕ ನಿಂಗಪ್ಪ ಅವರು ಅಳಲು ತೋಡಿಕೊಂಡಿದ್ದಾರೆ. ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ರೈತ ನಿಂಬಣ್ಣ ಎಂಬುವವರ ಜಮೀನಿನಲ್ಲಿ ಖಾಸಗಿ ವಿಮಾನ ಪತನ ಆಗಿದೆ. ವಿಮಾನ …

Read More »

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು  ಗ್ರಾಮದಲ್ಲಿ ಜೆಟ್ ವಿಮಾನವೊಂದು  ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ …

Read More »