Breaking News

ಬಿಜಾಪುರ

ಬೈಕ್ ಮುಖಾಮುಖಿ: ಮೂವರ ಸಾವು, ಎಲ್ಲಿ?

ವಿಜಯಪುರ: ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ರೆ. ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಎರಡೂ ಬೈಕ್​ಗಳು ಹೊತ್ತಿ ಉರಿದಿವೆ. ಮೃತರಿಗೆ ತಲೆಗೆ ಮಾತ್ರ ಗಾಯವಾಗಿದ್ದು, ಬೈಕ್ ಗಳು ಭಸ್ಮವಾಗಿವೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ

ವಿಜಯಪುರ:  ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಟಾಪ್ ನರ್ಸ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.   ನಸುಕಿನ ಜಾವ 5 ಗಂಟೆ ಸುಮಾರಿಗೆ ಆ್ಯಂಬುಲೆನ್ಸ್​​ ಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಇಎಂಟಿ  ಸ್ಟಾಪ್ ನರ್ಸ್ ತುಳಸಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ …

Read More »

ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು: ನಟಿ, ರಾಜಕಾರಣಿ ತಾರಾ

ಬೆಂಗಳೂರು: ನಮ್ಮನ್ನ ಅನುಸರಿಸುವವರು ಇದ್ದಾರೆ. ಹೀಗಾಗಿ ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು ಎಂದು ನಟಿ, ರಾಜಕಾರಣಿ ತಾರಾ ಪ್ರಶ್ನಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಯಾಂಡಲ್ ವುಡ್ ಡ್ರಗ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತ ದೇವರಿಗೆ ನಮಸ್ಕಾರ ಮಾಡಿದೆ. ನಾನು ಸಿಎಂಗೆ ಇಂದು ಸಲಹೆ ನೀಡುವೆ. ನಾವೆಲ್ಲರೂ ಎಲ್ಲ ಬೆಳವಣಿಗೆ ವೀಕ್ಷಿಸುತ್ತಿದ್ದೀವಿ ಎಂದರು. ಡ್ರಗ್ಸ್ ವಿಚಾರ ನಮ್ಮ ರಂಗಕ್ಕೆ …

Read More »

ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಬರ್ಬರ ಹತ್ಯೆ

ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಬರ್ಬರವಾಗಿ ಹತ್ಯೆಗೈದು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿದ್ದ ಐಸಿಐಸಿಐ ಬ್ಯಾಂಕ್‍ನ ಎಟಿಎಂನಲ್ಲಿ ಈ ಘಟನೆ ನಡೆದಿದೆ. ರಾಹುಲ್ ರಾಠೋಡ್ (22) ಕೊಲೆಯಾದ ಯುವಕ. ಈತ ಜಿಲ್ಲೆಯ ಮದಬಾವಿ ತಾಂಡಾ ನಿವಾಸಿಯಾಗಿದ್ದು, ಐಸಿಐಸಿಐ ಬ್ಯಾಂಕ್ ಎಟಿಎಂನ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಮೂವರು ಸೋಮವಾರ ರಾತ್ರಿ ಸುತ್ತಿಗೆಯಿಂದ …

Read More »

ಡಾ. ಅಂಬೇಡ್ಕರ್ ಹೆಸರು‌ ಸ್ಮರಿಸದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ತರಾಟೆಗೆ ತೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹೆಸರು‌ ಸ್ಮರಿಸದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ಶನಿವಾರ ನಡೆಯಿತು. ಅಕ್ಕನ ವಿವಿಯಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವೆ ನೀಡಿದ ಸಂದೇಶದಲ್ಲಿ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸಲಿಲ್ಲ. ಇದರಿಂದಾಗಿ ಕುಪಿತಗೊಂಡ ಅಡಿವೆಪ್ಪ ಸಾಲಗಲ್ ಸಚಿವೆ ಭಾಷಣ ಮುಗಿಸಿ ಸ್ಥಳಕ್ಕೆ ಬಂದು ಕುಳಿತುಕೊಳ್ಳುತ್ತಿದ್ದಂತೆಯೇ ತೀವ್ರ ತರಾಟೆಗೆ ತೆಗೆದುಕೊಂಡರು. …

Read More »

ಆಲಮಟ್ಟಿ, ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ

ವಿಜಯಪುರ/ ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ‌ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಳವಾಗಿದ್ದು 26 ಗೇಟ್ ಗಳ ಪೈಕಿ 22 ಗೇಟ್ ಗಳ ಮೂಲಕ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.1.47 ಲಕ್ಷ ಕ್ಯುಸೆಕ್‌ ಒಳ ಹರಿವು ದಾಖಲಾಗಿದ್ದು,1.50 ಲಕ್ಷ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಜಿಲ್ಲಾಡಳಿತ …

Read More »

ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆತನ ಕುಟುಂಬದ ಜೊತೆ ಯಾರು ಸಂಪರ್ಕ ಇಟ್ಟುಕೊಳ್ಳಬಾರದು. ಅವರ ಮನೆಗೆ ಪೇಪರ್, ತರಕಾರಿ, ಅಗತ್ಯ ವಸ್ತು ಪೂರೈಕೆ ಮಾಡಬಾರದೆಂದು ಕೆಲವು ಸ್ಥಳೀಯರು ತಕರಾರು ತೆಗೆದಿದ್ದಾರೆ. ಮನೆ ಕೆಲಸಗಾರರಿಗೆ ಕೆಲಸಕ್ಕೆ ಬರದಂತೆ ಅಡಚಣೆ ಉಂಟು ಮಾಡಿ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. …

Read More »

ತಡರಾತ್ರಿ ರೌಡಿಶೀಟರ್‌ನ ಬರ್ಬರ ಕೊಲೆ…….

ವಿಜಯಪುರ: ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ (28) ಕೊಲೆಯಾದ ರೌಡಿಶೀಟರ್. ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಆದರ್ಶನಗರ …

Read More »

ಹುಟ್ಟುಹಬ್ಬದ ದಿನವೇ ಭೀಮಾತೀರದ ನಟೋರಿಯಸ್ ಅರೆಸ್ಟ್

ವಿಜಯಪುರ: ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್ ಹುಟ್ಟುಹಬ್ಬದ ದಿನದಂದೆ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ಉದ್ಯಮಿಗೆ 5 ಕೋಟಿ ನಗದು ಅಥವಾ 3 ಕೆ.ಜಿ. ಚಿನ್ನಕ್ಕೆ ಬೇಡಿಕೆ ಇಟ್ಟಿದ ಆರೋಪದಡಿ ಬಂಧನವಾಗಿದ್ದಾನೆ. ಚಿನ್ನಾಭರಣದ ವ್ಯಾಪಾರಿಯಾಗಿರುವ ನಾಮದೇವ್ ಡಾಂಗೆ ಎಂಬವರಿಗೆ ಬೇಡಿಕೆ ಇಟ್ಟಿದ್ದನು. 5 ಕೋಟಿ ಕೊಡದೇ ಇದ್ರೇ ಕಾಲು, ತಲೆ ಕಟ್ ಮಾಡ್ತೀನಿ. ಯಾರಿಗಾದ್ರೂ ಹೇಳಿದ್ರೆ ಮನೆಗೆ ಹೊಕ್ಕು ತಲೆಗೆ ಗುಂಡು ಹೊಡೆಯುತ್ತೇನೆಂದು ಧಮ್ಕಿ ಹಾಕಿದ್ದನು. ಇನ್ನು ಈ …

Read More »

ರಾತ್ರಿ ರಕ್ತ ತರುವಂತೆ ಹೇಳಿ ಬೆಳಗ್ಗೆ ಸಾವಿನ ಸುದ್ದಿ ತಿಳಿಸಿದ್ರು’- ವೈದ್ಯರ ವಿರುದ್ಧ ಕಿಡಿ

ವಿಜಯಪುರ: ಹೆರಿಗೆ ಸಮಯದಲ್ಲಿ ತಾಯಿ-ಮಗು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹೆರಿಗೆಗೆಂದು ಕವಿತಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ನಾರ್ಮಲ್ ಡೆಲಿವರಿಯಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ತಡರಾತ್ರಿ ರಕ್ತ ತೆಗೆದುಕೊಂಡು ಬರಲು ವೈದ್ಯರು ಸೂಚಿಸಿದ್ದಾರೆ. ಆದರೆ ಬೆಳಗ್ಗೆ ಸಾವಿನ ವಿಚಾರವನ್ನೇ ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ ಹಾಗೂ ಮಗುವಿನ …

Read More »