Breaking News
Home / ಜಿಲ್ಲೆ / ಬಿಜಾಪುರ (page 4)

ಬಿಜಾಪುರ

ಮೊಸಳೆ ಕಂಡು ಶಾಕ್ ಆದ ಜನ

ಬೃಹತ್ ಮೊಸಳೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಎದುರಿನ ಚಿನಿವಾಲರ ಖಾಲಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆ ಆಗಿದೆ. ಬಾವಿ ಒಂದರಲ್ಲಿ ಬೃಹತ್ ಆಕಾರದ ಮೊಸಳೆ ಹಲವಾರು ದಿನಗಳಿಂದ ವಾಸಿಸುತ್ತಿದೆ‌ ಅಲ್ಲದೇ, ಹಲವು ಬಾರಿ ಅರಣ್ಯ ಇಲಾಖೆಯವರಿಗೆ ಹೇಳಿದರು ಪ್ರಯೋಜನ ಆಗಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಸಮಸ್ಯೆ ಆಗುವ ಮುನ್ನವೇ ಮೊಸಳೆ ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More »

ಮಹಾರಾಷ್ಟ್ರದ ಪ್ರತಿಭಾವಂತ ಬಡ ವಿದ್ಯಾರ್ಥಿಗೆ ಎಂ.ಬಿ.ಪಾಟೀಲ್ ನೆರವು

ವಿಜಯಪುರ : ಆರ್ಥಿಕ ಸಂಕಷ್ಟದಿಂದ ವೈದ್ಯಕೀಯ ಪ್ರವೇಶ ಸಿಕ್ಕರೂ ಪ್ರವೇಶ ಪಡೆಯಲಾಗದ ಮತ್ತೋರ್ವ ವಿದ್ಯಾರ್ಥಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆರ್ಥಿಕ ನೆರವು ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನೆಲೆಸಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗೆ ಭಾಷಾ ಸಂಕುಚಿತತೆ ಎಲ್ಲೆ ಮೀರಿ ಮಾನವೀಯತೆ ಮೆರೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ನೆಲೆಸಿರುವ ವಿದ್ಯಾರ್ಥಿ ಯಲ್ಲಾಲಿಂಗ ಭೀಮರಾಯ ಜೈನಾಪುರ ಮೂಲತ ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಮುಚ್ಚಂಡಿ ಗ್ರಾಮದವರು. …

Read More »

ಕೊರೆಯುವ ಚಳಿಗೆ ವೃದ್ಧ ಬಲಿ

ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ. ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಗುಜರಾತ್ ಫಲಿತಾಂಶ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ: ಜಿಗಜಿಣಗಿ

ವಿಜಯಪುರ : ಗುಜರಾತ್ ವಿಧಾನಸಭಾ ಚುನಾವಣೆ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಭವಿಷ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ ಎಂದು ಮಾಜಿ ಕೇಂದ್ರ ಸಚಿವ, ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.   ಗುರುವಾರ ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಂಸದ ಜಿಗಜಿಣಗಿ ಪ್ರತಿಕ್ರಿಯಿಸಿ, ಗುಜರಾತ್ ನಲ್ಲಿ ಸ್ಪಷ್ಟ ಅದ್ವಿತೀಯ ಬಹುಮತ ಮಾತ್ರವಲ್ಲ ಐತಿಹಾಸಿಕ ಗೆಲುವು ಸಾಧಿಸಿದೆ. ಕೆಲವೇ ತಿಂಗಳಲ್ಲಿ ರಾಜ್ಯದಲ್ಲೂ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ …

Read More »

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು …

Read More »

ಕ್ರಿಕೆಟ್ ತಾರೆ ರಾಜೇಶ್ವರಿ ಗಾಯಕವಾಡಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ: ಮಹಿಳಾ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ವಿಜಯಪುರದ ಹೆಮ್ಮೆಯ ಕ್ರೀಡಾಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.   ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜೇಶ್ವರಿ ಗಾಯಕವಾಡ ಅವರಿಗೆ ಎಸ್.ಪಿ.ಎಸ್.ಯು ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರಿಗೆ ಈ ಗೌರವ ಡಾಕ್ಟರೇಟ್ ದೊರೆತಿದೆ.

Read More »

ಸಚಿವ ಸಂಪುಟ ವಿಸ್ತರಣೆ ಆಗಲಿ, ಬಿಡಲಿ ನಾನಂತೂ ಅದರಲ್ಲಿ ಇಲ್ಲ ಎಂದ ಯತ್ನಾಳ್

ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಪುಟ ವಿಸ್ತರಣೆ ಆಗಲಿ, ಬಿಡಲಿ ಅದರಲ್ಲಿ ನಾನಂತೂ ಇಲ್ಲ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನನಗೆ ಕರೆ ಮಾಡಿದ್ದರು. ಡಿಸೆಂಬರ್ ನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಈ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಲಾಗುತ್ತದೆ. ವಿಜಯಪುರ ಮಹಾನಗರ ಪಾಲಿಕೆಗೆ ಹೆಚ್ಚುವರಿ 100 ಕೋಟಿ …

Read More »

ಭಾರಿ ಮಳೆಗೆ ಉಕ್ಕಿ ಹರಿಯುತ್ತಿವೆ ಹಳ್ಳಗಳು

ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಉಕ್ಕಿ ಬಂದ ಹಳ್ಳದಿಂದ ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್ ಆಗಿದೆ‌. 108 ವಾಹನ ಅಂಬುಲೆನ್ಸ್ ವಾಹನ ಸಂಚಾರಕ್ಕೂ ಹಳ್ಳ ಅಡ್ಡಿಯಾಗಿದೆ. ಕೆಳ ಹಂತದ ಸೇತುವೆ ಮೇಲೆ ಹಳ್ಳದ ನೀರು ಹರಿಯುತ್ತಿರು ವದರಿಂದ 108 ಸಿಬ್ಬಂದಿ ಪರದಾಡಬೇಕಾದ ಪರಿಸ್ಥಿತಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಘಟನೆ ನಡೆದಿದೆ‌. ಭಾರೀ ಮಳೆಯಿಂದ ಹಳ್ಳದ ನೀರು ತುಂಬಿ …

Read More »

ವಿಜಯಪುರ ಪಾಲಿಕೆ ಚುನಾವಣೆ : ವಾಮಾಚಾರ ಹಾವಳಿ; ಜನರ ಆಕ್ರೋಶ

ವಿಜಯಪುರ: ವಿಜಯಪುರ ಮಹಾನಗರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಈ ಹಂತದಲ್ಲಿ ಮಾಟ-ಮಂತ್ರದ ಕ್ಷುದ್ರ ಚಟುವಟಿಕೆಗಳು ತಲೆ ಎತ್ತಿದ್ದು, ಸಾರ್ವಜನಿಕರನ್ನು ಆತಂಕ ಪಡುವಂತೆ ಮಾಡಿವೆ. ವಾರ್ಡ್ ನಂ. 14 ರಲ್ಲಿ ಬರುವ ನಗರದ ಶಿಖಾರಖಾನೆ ಪ್ರದೇಶದ ಅನಂತಲಕ್ಷ್ಮೀ ಹಾಲ್ ಬಳಿ ಕಿಡಿಗೇಡಿಗಳು ಮಾಟ ಮಂತ್ರ ಮಾಡಿಸಿದಂತೆ ಕುಂಕು, ಅರಿಷಿಣ, ನಿಂಬೆಹಣ್ಣು, ಎಲೆ, ಮೊಟ್ಟೆ, ಹಣ ಸೇರಿದಂತೆ ಹೂವುಗ ಳೊಂದಿಗೆ ಮಾಟ ಮಂತ್ರ ಮಾಡಿ ಎಸೆದಿದ್ದಾರೆ.   ಸದರಿ ವಾರ್ಡ್ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ …

Read More »

ಬ್ರಿಟಿಷರೊಂದಿಗೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನವರು ದೇಶ ಭಕ್ತರಲ್ಲ: ರಾಮಲಿಂಗಾ ರೆಡ್ಡಿ

ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್‍ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು. ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್‍ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್‍ಗೆ ಸೇರಿದವರು ಎಂದರು. ಸ್ವಾತಂತ್ರ್ಯ …

Read More »