Breaking News
Home / ಜಿಲ್ಲೆ / ಬಿಜಾಪುರ (page 7)

ಬಿಜಾಪುರ

ಅಥಣಿಯಲ್ಲಿ ಸೆರೆಸಿಕ್ಕ ಅಪರೂಪದ ಪುನುಗು ಬೆಕ್ಕು

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿ ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ, ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ಎಂದು ತಿಳಿಸಿದ್ದಾರೆ. ಇ ದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಾದೇವ ಹೊನ್ನೊಳ್ಳಿ ಎಂಬುವವ ಹೊಲದಲ್ಲಿ ಪುನುಗು ಬೆಕ್ಕು ಹಿಡಿದು ಕೋಳಿಯ ಬೋನಿನಲ್ಲಿ ಇರಿಸಲಾಗಿತ್ತು. ಸ್ಥಳಕ್ಕೆ …

Read More »

ರೈಲು ಢಿಕ್ಕಿ ಹೊಡೆದು 96 ಕುರಿಗಳ ದಾರುಣ ಸಾವು : ರೈಲು ಹಳಿ ದಾಟುವ ವೇಳೆ ಘಟನೆ

ಕೊಲ್ಹಾರ (ವಿಜಯಪುರ) : ಜಿಲ್ಲೆಯ ಕೊಲ್ಹಾರ ತಾಲೂಕಿಕ ಮಸೂತಿ-ಕೂಡಗಿ ಮಧ್ಯೆ ಗದಗ-ವಿಜಯಪೂರ ರೈಲ್ವೆ ಮಾರ್ಗದಲ್ಲಿ ರೈಲು ಡಿಕ್ಕಿಯಾಗಿ ಸುಮಾರು 96 ಕುರಿಗಳು ಸಾವನ್ನಪ್ಪಿರುವ ಘಟಣೆ ಜರುಗಿದೆ. ಶನಿವಾರ ಸಂಜೆ ಸುರಿಯುತ್ತಿದ್ದ ಮಳೆ ಸಂದರ್ಭದಲ್ಲಿ ಸೇತುವೆ ಕೆಳಗಡೆ ಮಳೆಯಿಂದ ರಕ್ಷಣೆಗೆ ನಿಂತಿದ್ದ ಕುರಿಗಾರರು ಒಂದು ರೈಲು ಸಂಚರಿಸಿದ ಬಳಿಕ ಕುರಿಗಳನ್ನು ರೈಲ್ವೇ ಹಳಿ ದಾಟಿಸುವ ಸಂದರ್ಭದಲ್ಲಿ ಮತ್ತೊಂದು (ಗದಗ-ಮುಂಬೈ) ರೈಲು ಹಾಯ್ದು ಈ ದುರ್ಘಟನೆ ಸಂಭವಿಸಿದೆ.   ವೇಗವಾಗಿ ಚಲಿಸುತ್ತಿರುವ ರೈಲಿನ ರಬಸಕ್ಕೆ …

Read More »

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ವಿಜಯಪುರ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾದ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಜಿಲ್ಲೆಯ ಸಿಂದಗಿ ತಾಲೂಕಿನ‌ ಹಂದಿಗನೂರ ಗ್ರಾಮದಲ್ಲಿ ಜರುಗಿದೆ. ಮಕ್ಕಳನ್ನು ಮೊದಲು ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿಯನ್ನು ಆರು ತಿಂಗಳಿಂದ ಮಾನಸಿಕ‌ ಖಿನ್ನತೆಯಿಂದ ಬಳಲುತ್ತಿದ್ದ ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ (32) ಎಂದು ಗುರುತಿಸಲಾಗಿದೆ. 1 ಹಾಗೂ 3 ವರ್ಷದ ಮಕ್ಕಳು ತಾಯಿಯಿಂದ ಜೀವ ಕಳೆದುಕೊಂಡ ನತದೃಷ್ಟರು. …

Read More »

ಇದು ಸಿದ್ದರಾಮೋತ್ಸವ ಅಲ್ಲ, ಮನೆಗೆ ಹೋಗುವ ಉತ್ಸವ-.:ಯತ್ನಾಳ

ಬಾಗಲಕೋಟೆ: ಸಿದ್ದರಾಮೋತ್ಸವ ಬದಲಾಗಿ ಸಿದ್ದರಾಮ ಉರಿಸೋ ಉತ್ಸವ ಮಾಡಬೇಕಿತ್ತು. ಉತ್ಸವ, ಭಂಡಾರ, ಕೇಸರಿ ಹಚ್ಚಿಕೊಳ್ಳೋದು ಅಂದ್ರೆ ಅವರಿಗೆ ಅಲರ್ಜಿ ಆಗುತ್ತದೆ. ಅದೇ ಹಾಲುಮತ ಪೇಟ ಹಾಕಿಕೊಂಡು ಕುಂಕುಮ ಹಚ್ಚಿಕೊಂಡ್ರೆ ಅದು ಸಿದ್ದರಾಮೋತ್ಸವ ಆಗುತ್ತದೆ. ನಮಾಜ್ ಟೋಪಿ ಹಾಕಿಕೊಳ್ತಾರೆ, ಆದ್ರೆ ಕೇಸರಿ ಬಂದರೆ ನೂಕ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ವ್ಯಂಗ್ಯವಾಡಿದರು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದ್ಯಾವ ಉತ್ಸವರಿ, ಇದು ಕೊನೆಯದ್ದು, ಇದು ಸಿದ್ದರಾಮೋತ್ಸವ ಅಲ್ಲ, ಮನೆಗೆ …

Read More »

ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ

ವಿಜಯಪುರ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ(rain)ಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ತವಾಗಿದೆ. ಜೊತೆಗೆ ಹಲವೆಡೆ ರೆಡ್​, ಯೊಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಆದರೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಂದು ಹನಿ ಮಳೆ ಕೂಡ ಆಗಿಲ್ಲ. ಮಳೆಯಿಲ್ಲದೆ ಜನರು ಕಂಗಾಲಾಗಿದ್ದು, ವಿಶಿಷ್ಟ ಆಚರಣೆ ಮೂಲಕ ದೇವರ ಮೊರೆ ಹೋಗುತ್ತಿದ್ದಾರೆ. ಸದ್ಯ ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ಜನರು ವಿಶಿಷ್ಟ ಆಚರಣೆಯೊಂದು ಮಾಡುತ್ತಿದ್ದು, ಈ‌ ಬಗ್ಗೆ ಕೇಳಿದರೆ ಆಶ್ಚರ್ಯವಾಗೋದು‌ ಗ್ಯಾರಂಟಿ. ಸ್ಮಶಾನದಲ್ಲಿ ಹೂತಿದ್ದ ಶವ …

Read More »

ಕಾರ್ ಹಾಗೂಬೈಕ್ ನಡುವೆ ಮುಖಾಮುಖಿ ಡಿಕ್ಕಿ:ಗಂಭೀರ ಗಾಯ

ಬೈಕ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮೀಸಾಳೆ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಎರಡು ವಾಹನಗಳ ಅತೀ ವೇಗವೇ ಕಾರಣ ಎನ್ನಲಾಗಿದೆ ಘಟನೆಯಲ್ಲಿ ಗಾಯಗೊಂಡಿವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Read More »

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರು ಎಲ್ಲಿ ನಿಂತರೂ ಗೆದ್ದು ಬರ್ತಾರೆ. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಒಳ್ಳೆ ಅವಕಾಶ ಸಿಗುತ್ತದೆ. ಭವಿಷ್ಯದಲ್ಲಿ ಬೆಳೆಯುತ್ತಾನೆ ಎಂಬ ವಿಶ್ವಾಸವಿದೆ ಎಂದರು. ಯಡಿಯೂರಪ್ಪ ಮತ್ತು ಕುಟುಂಬವನ್ನು ಬಿಜೆಪಿ ಪಕ್ಕಕ್ಕೆ ಸರಿಸಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ …

Read More »

ಸಿಂದಗಿ ತಾಲೂಕಿನಲ್ಲಿ ಡಬಲ್ ಮರ್ಡರ್ – ಕೌಟುಂಬಿಕ ಕಲಹ ಹಿನ್ನೆಲೆ ಅಕ್ಕ- ತಮ್ಮನ ಬರ್ಬರ ಕೊಲೆ

ಸಿಂದಗಿ(ವಿಜಯಪುರ): ಅಕ್ಕ ಹಾಗೂ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಸದ್ಯ ನಾನಾಗೌಡ ಯರಗಲ್ಲ ಹಾಗೂ ರಾಜಶ್ರೀ ಯರಗಲ್ಲ ಕೊಲೆಯಾದವರಾಗಿದ್ದು,ಶಂಕರಲಿಂಗ ಬಿರಾದಾರ ಹತ್ಯೆಗೈದಿರುವ ಆರೋಪಿ ಎಂದು ತಿಳಿದು ಬಂದಿದೆ.   ಅಂದ ಹಾಗೇ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಕ್ಕನ ಗಂಡ ಶಂಕರಲಿಂಗ ಬಿರಾದಾರ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರು …

Read More »

ಬಡತನದಲ್ಲಿ ಉತ್ತಮ ಅಂಕ ಪಡೆದ ಅಮಿತ್

ವಿಜಯಪುರ: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳ (Students) ಪರೀಕ್ಷಾ ಫಲಿತಾಂಶ (Exam Result) ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ (Education Minister) ಬಿ.ಸಿ. ನಾಗೇಶ್ (B.C. Nagesh) ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ (Girls) ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು (Boys) ಪಾಸ್ (Pass) ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ …

Read More »

ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.   ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »