Breaking News
Home / ಜಿಲ್ಲೆ / ಬೀದರ್

ಬೀದರ್

ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ : ಸಿಎಂ

ಬೀದರ್ : ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ. ಈಗ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ನೀಡಬೇಕು ಅಂತ ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರಾ? ನೇಹಾ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಅನಗತ್ಯ …

Read More »

ಬೀದರ್: ಎಕಂಬಾ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಬೀದರ್‌: ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ಬೊಲೆರೋ ವಾಹನದಲ್ಲಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ 1.50 ಕೋಟಿ ರೂ.ಮೌಲ್ಯದ ಗಾಂಜಾ ಜಪ್ತಿಯಾಗಿದ್ದು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತೆಲಂಗಾಣದಿಂದ ಬೀದರ್‌ ಮೂಲಕ ಮುಂಬೈಗೆ ಗಾಂಜಾ ಸಾಗಿಸುತ್ತಿದ್ದ ಗ್ಯಾಂಗ್‌ ಇದಾಗಿತ್ತು. ಔರಾದ …

Read More »

ಬೀದರ್: 105 ವರ್ಷ ವಯಸ್ಸಿನ ಅಜ್ಜಿ ಬಾಯಲ್ಲಿ ಮೂಡಿತು ಹೊಸ ಹಲ್ಲು

ಬೀದರ್: ಇತ್ತೀಚಿನ ವರ್ಷಗಳಲ್ಲಿ ನೂರು ವರ್ಷ ಪೂರೈಸುವುದೇ ಅಪರೂಪ. ಅಂಥದ್ದರಲ್ಲಿ, ಶತಾಯುಷಿಯಾದವರಿಗೆ ಹೊಸ ಹಲ್ಲು ಚಿಗುರೊಡೆದರೆ? ಇದೊಂಥರಾ ವಿಶೇಷ ಅಲ್ಲವೇ? ಬೀದರ್ ಜಿಲ್ಲೆಯಲ್ಲೂ ಇಂಥದ್ದೇ ಒಂದು ವಿಶೇಷ ಕಂಡುಬಂದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಶತಾಯುಷಿ ಗಂಗಮ್ಮ ಗುರಪ್ಪ ಕಣ್ಣೂರ್ ಜನವಾಡ್ ಎಂಬ ಅಜ್ಜಿಗೆ ಹೊಸ ಹಲ್ಲು ಮೂಡಿದೆ. ಇಷ್ಟು ಇಳಿ ವಯಸ್ಸಿನಲ್ಲಿ ಹೊಸದಾಗಿ ಹಲ್ಲು ಚಿಗುರೊಡೆದರೆ ಅಂಥವರಿಗೆ ಈ ಭಾಗದಲ್ಲಿ ತೊಟ್ಟಿಲೋತ್ಸವ ಮಾಡಲಾಗುತ್ತದೆ. 105 ವರ್ಷ …

Read More »

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್​ ಪ್ರೇಮಿ

ಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ.     ಶಿವಲೀಲಾ (18) ಕೊಲೆಗೀಡಾಗಿರುವ ಯುವತಿ. ಈಕೆ ಬ್ರೀಮ್ಸ್​ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ …

Read More »

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!

ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ರನ್ನು ಲೋಕಾಯುಕ್ತ ಪೊಲೀಸರು ರೆಡ್​ಹ್ಯಾಂಡ್​ ಆಗಿ ಬಲೆಗೆ ಕೆಡವಿದ್ದಾರೆ.   ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್‌ಐ ಶೀಲಾ ನ್ಯಾಮನ್ ಹಾಗು ಕಾನ್​ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್​ ಪಟೇಲ್‌ನಿಂದ 21 ಸಾವಿರ ರೂಪಾಯಿ …

Read More »

ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಅಗತ್ಯವೆಂದ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ದೇಶದ ರಾಜಕೀಯ ಸ್ಥಿತಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕುರಿತು ಮಕ್ಕಳಿಗೆ ಅರಿವು ಅಗತ್ಯ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು.   ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್ ಗೆ …

Read More »

ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರಷ್ಟೇ, ಧಮ್ ಇಲ್ಲ: ಸಿಎಂ ಬೊಮ್ಮಾಯಿ

ಬೀದರ್: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲು ಹಾಕಿದ್ದಾರೆ.   ಔರಾದ ಪಟ್ಟಣದಲ್ಲಿ ಮಂಗಳವಾರ ‘ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ …

Read More »

ಬಹಮನಿಯರ ಕೋಟೆ ಮೇಲೆ ಹಾರಾಡಲಿದೆ ರಾಷ್ಟ್ರಧ್ವಜ

ಬೀದರ್‌: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದಲ್ಲಿರುವ ಬಹಮನಿ ಸುಲ್ತಾನರ ಕಾಲದ ಕೋಟೆ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಬೆಳಕಿನಲ್ಲಿ ಮೈದೆಳೆದ ಕೋಟೆ ವೀಕ್ಷಣೆಗೆ ಅನುಕೂಲವಾಗುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸ್ಮಾರಕಗಳ ವೀಕ್ಷಣೆ ಸಮಯವನ್ನು ರಾತ್ರಿ 9 ಗಂಟೆಯವರೆಗೂ ವಿಸ್ತರಿಸಿದೆ. ಅಷ್ಟೇ ಅಲ್ಲ; ಐತಿಹಾಸಿಕ ಕೋಟೆ ಆವರಣದಲ್ಲಿ ರಾಷ್ಟ್ರ್ರ ಧ್ವಜ ಹಾರಿಸಲು ಸಿದ್ಧತೆ ನಡೆಸಿದೆ. ಕೋಟೆಯೊಳಗಿನ ಗುಂಬಜ್‌ ದರ್ವಾಜಾ, ತರ್ಕಿಶ್‌ ಮಹಲ್‌ ಹಾಗೂ ಸೋಲಾ ಕಂಬಾ ಮಸೀದಿ …

Read More »

ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ: ಶ್ರೀರಾಮಲು

ಬೀದರ್: ಬಿಜೆಪಿ ಪಕ್ಷ ಸೂಚಿಸಿದರೆ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ ಮಾಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಸ್ಫರ್ಧಿಸಿದರೆ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ. ಅಲ್ಲಿನ‌ ಜನ‌ ಶ್ರೀರಾಮುಲು ಅವರನ್ನು ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು. ಕ್ಷೇತ್ರ ಹುಡುಕಾಡುತ್ತಿರುವ ಸಿದ್ದರಾಮಯ್ಯ ಸಿಎಂ ಹೇಗಾಗುತ್ತಾರೆ? ಪಕ್ಷದ ಬೆಂಬಲದ ಮೇಲೆ ಸಿದ್ದರಾಮಯ್ಯ ಹಾರಾಡುತ್ತಿದ್ದಾರೆ, ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಶಕ್ತಿ …

Read More »

ನಗ್ನ ಜಾಲದಲ್ಲಿ ತೊಳಲಾಡುತ್ತಿರುವ 15 ಮಂದಿ ಪುರುಷರು!

ಬೀದರ್‌: ವೀಡಿಯೋ ಕಾಲ್‌ನಲ್ಲಿ ಸಂಪರ್ಕ ಸಾಧಿಸಿರುವ ಯುವತಿಯರ ಮಾತಿಗೆ ಮರುಳಾಗಿ ನಗ್ನ ದೇಹ ಪ್ರದರ್ಶಿಸಿ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ 15ಕ್ಕೂ ಹೆಚ್ಚು ಮಂದಿ ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಪಶ್ಚಿಮ ಬಂಗಾಲ, ರಾಜಸ್ಥಾನ ಮತ್ತು ಝಾರ್ಖಂಡ್‌ ಸಹಿತ ಉತ್ತರ ಭಾರತದಲ್ಲಿ ಇಂಥ ಸೈಬರ್‌ ಜಾಲಗಳು ವ್ಯಾಪಕವಾಗಿ ಹರಡಿಕೊಂಡಿದ್ದು, ಮುಖ್ಯವಾಗಿ ರಾಜಕಾರಣಿ, ಉದ್ಯಮಿ ಹಾಗೂ ಇತರ ಪ್ರಭಾವಿಗಳಿಗೇ ಗಾಳ ಹಾಕಲಾಗುತ್ತಿದೆ.   ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ನಕಲಿ ಅಕೌಂಟ್‌ಗಳ ಮೂಲಕ ಯುವಕರನ್ನು ಪರಿಚ ಯಿಸಿಕೊಂಡು …

Read More »