Breaking News

ಬೆಂಗಳೂರು

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

ಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ (GKVK) ನಡೆದ ದ್ವೈವಾರ್ಷಿಕ 22ನೇ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನ ಉದ್ಘಾಟನೆ ಮಾಡಿ, ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಅವಶ್ಯಕತೆ ಇದೆ ಅಂತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರತಿಪಾದಿಸಿದರು. ಸಮ್ಮೇಳನದಲ್ಲಿ ಮಾತಾಡಿದ ಅವರು, ಜಗತ್ತಿನ ಸಂಸ್ಥೆಗಳು ತಾಂತ್ರಿಕ ಬದಲಾವಣೆಗಳಿಂದ ರೂಪಾಂತರಗೊಳ್ಳುತ್ತಿರುವ ಈ ಸಮಯದಲ್ಲಿ, ಕೃತಕ …

Read More »

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು: ಮೈಸೂರಿನ  ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್  ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆಯಿಂದ  ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆಯನ್ನೂ ನೀಡಿದ್ದಾರೆ. ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ …

Read More »

ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್​ಫರ್​

ಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್​ ಗುರುವಾರ (ಏ.16) ಆದೇಶ ಹೊರಡಿಸಿದೆ. ಈ ವರ್ಗಾವಣೆ ಪಟ್ಟಿಯಲ್ಲಿ 114 ಜಿಲ್ಲಾ ನ್ಯಾಯಾಧೀಶರು, 139 ಸಿವಿಲ್​ ನ್ಯಾಯಾಧೀಶರು ಮತ್ತು 115 ಹಿರಿಯ ಸಿವಿಲ್​ ನ್ಯಾಯಾಧೀಶರು ಸೇರಿದ್ದು, ವಿನಯ್​ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದ್ದ ಗಜಾನನ ಭಟ್​ ಕೂಡ ವರ್ಗಾವಣೆ ಆಗಿರುವುದು ಗಮನಾರ್ಹ. ಈ ಆದೇಶವು ಜೂ. 1ರಿಂದ ಜಾರಿಗೆ ಬರಲಿದೆ. ಹೈಕೋರ್ಟ್​ನ ಹಾಲಿ ರಿಜಿಸ್ಟ್ರಾರ್​ ಜನರಲ್​ …

Read More »

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆ ಆಗಲಿದ್ದು, ಕುಡಿಯುವ ನೀರಿಗೆ  ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ  ಅವರು ಡಿಸಿ-ಸಿಇಓಗಳಿಗೆ ಸೂಚನೆ ಕೊಟ್ದಿದ್ದಾರೆ. ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

Read More »

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯ ತಲೆಬುರುಡೆ ಹಾಗೂ ಕೈ ಕಾಲಿನ ಕೆಲ ಮೂಳೆಗಳು ಪತ್ತೆಯಾಗಿದೆ. ತೋಟದ ಮಾಲೀಕ ಕೆಲಸ ಮಾಡುವ ವೇಳೆ ಅವಶೇಷಗಳನ್ನ ನೋಡಿದಾಗ ಆತಂಕಕ್ಕೆ ಕಾರಣವಾಗಿದ್ದು, ನಂತರ ದಾಬಸ್ ಪೇಟೆ ಪೊಲೀಸರಿಗೆ  ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಶ್ವಾನದಳ ಪರಿಶೀಲನೆ ನಡೆಸಿದ್ದು ನಾಪತ್ತೆಯಾಗಿದ್ದ ಮಹಿಳೆ ತುಮಕೂರು ನಿವಾಸಿ ಯಮುನಾ ಎಂದು ಗುರುತಿಸಲಾಗಿದೆ. ಅಸ್ಥಿಯ ಬಳಿ ಮಹಿಳೆಯ …

Read More »

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ದಿನೇಶ್ ಗುಂಡೂರಾವ್

ಬೆಂಗಳೂರು: ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ  ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಬೇಕು. ನಾನು ಹಿಂದೆ ಮಂತ್ರಿ ಆಗಿದ್ದಾಗ ಪುನರ್ ರಚನೆ ಆಗಿತ್ತು. ಬೇರೆಯವರಿಗೆ ಸಚಿವ ಸ್ಥಾನ ಸಿಗಬೇಕು. ಪಕ್ಷದ ಹಂತದಲ್ಲಿ ಅದು ಆಗುತ್ತದೆ ಎಂದರು. ಈ ಸಮಯದಲ್ಲಿ …

Read More »

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ. ಹೈಕಮಾಂಡ್ ಗೊಂದಲ ಪರಿಹಾರ ಮಾಡದೇ ಹೋದ್ರೆ ಪಕ್ಷಕ್ಕೆ ಸಮಸ್ಯೆ ಅಂತ ಕಾಂಗ್ರೆಸ್ ಶಾಸಕ ಬಾಲಕೃಷ್ಣ  ಎಚ್ಚರಿಕೆ ಕೊಟ್ಟಿದ್ದಾರೆ. ಬೈ ಎಲೆಕ್ಷನ್ ಫಲಿತಾಂಶ ಬಂದ ಮೇಲೆ ಮತ್ತೆ ನಾಯಕತ್ವದ ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಂತಹವರ ಬಳಿ ಇದನ್ನ ಕೇಳೋದು ಅಲ್ಲ. ಸೂಕ್ತ ವ್ಯಕ್ತಿಗಳ ಬಳಿ ಇದನ್ನ ಕೇಳಬೇಕು. ನಾಯಕತ್ವ ಚರ್ಚೆ ಮುಗಿದ ಅಧ್ಯಾಯ ಅಲ್ಲ. ಅದಕ್ಕೆ …

Read More »

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

ಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್  ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್  ಕಿಡಿಕಾರಿದೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್‌ನಿಂದ ಮುಸ್ಲಿಂ ನಾಯಕ ಅಬ್ದುಲ್ ಜಬ್ಬರ್ ಅಮಾನತು ವಿಚಾರವಾಗಿ ಆಕ್ರೋಶ ಹೊರಹಾಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಿದ್ದರು. …

Read More »

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ  ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಸಾವಿತ್ರಮ್ಮ (72) ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಸ್ಟ್ರೋಕ್ ಹೊಡೆದ ಕಾರಣ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದಿದ್ದ ಮಗ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ …

Read More »

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

ಬೆಂಗಳೂರು: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಬಸ್ಸಿನಲ್ಲಿ ಬೆಂಕಿ ಕಾಣಿಸಿದ ಘಟನೆ ಇಂದು ರಾತ್ರಿ ನಡೆದಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್‌ ಕುಲಕರ್ಣಿ ಮತ್ತು 17 ಅಪರಾಧಿಗಳನ್ನು ಬಿಎಂಟಿಸಿ ಬಸ್ಸಿನಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಬರುತ್ತಿದ್ದರು. ಪರಪ್ಪನ ಅಗ್ರಹಾರ ಸಮೀಪ ಬಸ್ಸಿನ ಕೆಳಗಡೆ ಬೆಂಕಿ ಕಾಣಿಸಿದೆ. ಬೆಂಕಿ ಕಾಣಿಸಿದ ತಕ್ಷಣ ಪೊಲೀಸರು ಬೇರೆ ವಾಹನದಲ್ಲಿ ಅಪರಾಧಿಗಳನ್ನು …

Read More »