Breaking News

ಬೆಂಗಳೂರು ಗ್ರಾಮಾಂತರ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, …

Read More »

ಬೆಂಗಳೂರಲ್ಲಿ ಆಟೋ ಪ್ರಯಾಣ ದರ ಏರಿಕೆ

ಬೆಂಗಳೂರು: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಆಟೋರಿಕ್ಷಾಗಳ ಪ್ರಯಾಣ ದರ ಏರಿಕೆಗೆ ಕೊನೆಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿಸಿದ್ದಾರೆ. ಕನಿಷ್ಠ ದರವನ್ನು 30 ರೂಪಾಯಿಗಳಿಂದ 36 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಪರಿಷ್ಕ್ರತ ದರದಂತೆ ಮೊದಲ ಎರಡು ಕಿಲೋಮೀಟರ್ ಪ್ರಯಾಣಕ್ಕೆ ಕನಿಷ್ಠ ದರ 36 ರೂಪಾಯಿಗಳಿರಲಿದೆ. ಎರಡು ಕಿಲೋಮೀಟರ್ ನಂತರದ ಪ್ರಯಾಣಕ್ಕೆ ಪ್ರತಿ ಕಿಲೋಮೀಟರ್​​ಗೆ ಈ ಮೊದಲು ಇದ್ದ ದರವನ್ನು 15 ರೂ.ನಿಂದ 18 ರೂ.ಗೆ ಹೆಚ್ಚಳ ಮಾಡಲಾಗಿದೆ. ಅಂದರೆ ಎರಡು …

Read More »

ಸಿಂಗದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ ಶಿಷ್ಟಾಚಾರ ಉಲ್ಲಂಘಿಸಿ ಆಯೋಜಿಸಲಾಗಿದೆ’: ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಹಾಗೂ ವಿವಿಧ ಯೋಜನೆಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗದ ಈ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಬೇರೆ ಮೂಲದಿಂದ ತಿಳಿದುಕೊಂಡಿದ್ದೇನೆ. ಬಳಿಕ ನಾನು ವೈಯಕ್ತಿಕವಾಗಿ ಮಾತನಾಡುವುದರ ಜೊತೆಗೆ ಜು.11ರಂದು ಕೇಂದ್ರ ರಸ್ತೆ ಸಾರಿಗೆ ಸಚಿವರಿಗೆ ಪತ್ರ ಬರೆದು ವಿಜಯಪುರದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ಶಿವಮೊಗ್ಗದ ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದೆನು. …

Read More »

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …

Read More »

ಪವರ್ ಶೇರಿಂಗ್ ಬಗ್ಗೆ ನಮಗೆ ಗಾಬರಿ ಇಲ್ಲ, ನಿಮಗೇಕೆ?: ಡಿ.ಕೆ.ಶಿ

ದೇವನಹಳ್ಳಿ: ಡಿ.ಕೆ.ಶಿವಕುಮಾರ್​ ಸಿಎಂ ಆಗಬೇಕು ಎಂಬುದು ಬೆಂಬಲಿಗರ ಆಸೆ. ಆದರೆ, ಅಧಿಕಾರದ ಹಂಚಿಕೆ​ ಬಗ್ಗೆ ನಮಗೆ ಗಾಬರಿ ಇಲ್ಲ, ನಿಮಗೇಕೆ ಗಾಬರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಮಾಧ್ಯಮದವರಿಗೆ ಪ್ರಶ್ನೆ ಮಾಡಿದರು. ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ತೆರಳಿದ್ದ ಅವರು ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ಕೆಲವೇ ಶಾಸಕರ ಬೆಂಬಲವಿದೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, “ನಾನು ಪಕ್ಷದ ಅಧ್ಯಕ್ಷ. ಪಕ್ಷದವರು ಏನು ಹೇಳಿದ್ದಾರೆ ಅಂತ ಈಗಾಗಲೇ …

Read More »

ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ

ಬೆಂಗಳೂರು: ಮೂರು ವರ್ಷಗಳ ಬಳಿಕ ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿಗೆ ಹಲವು ಸಭೆಗಳನ್ನ ರಾಜ್ಯ ಸರ್ಕಾರ ಚರ್ಚೆ ನಡೆಸಿದರೂ ಒಮ್ಮತದ ನಿರ್ಧಾರದ ಬಗ್ಗೆ ಜಿಜ್ಞಾಸೆ ಮೂಡಿದ ಪರಿಣಾಮ ಸದ್ಯಕ್ಕೆ ಟೋಯಿಂಗ್ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ ನಗರದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಮುಖ್ಯವಾಗಿ ಪೀಕ್ ಅವರ್​​ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಟೋಯಿಂಗ್ ಮತ್ತೆ ಆರಂಭಿಸುವುದಾಗಿ ಸರ್ಕಾರ ಹೇಳಿತ್ತು. ಈ ಬಾರಿ …

Read More »

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ

ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ …

Read More »

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಹಸು ಮೇಯಿಸಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರು ಹಿಡಿದು ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ. ಜಿಲ್ಲೆಯ ಗುಂಡಿಬಂಡೆ ತಾಲೂಕಿನ ವರ್ಲಕೊಂಡ ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ನಡುವೆ ನಿನ್ನೆ ಬೆಳಗ್ಗೆ ಚಿರತೆ ದಾಳಿಯ ಆತಂಕದಲ್ಲಿಯೇ ಕರೇನಹಳ್ಳಿಯ ರೈತ ರಾಮಕೃಷ್ಣಪ್ಪ ಹಸು ಮೇಯಿಸಲು ವರ್ಲಕೊಂಡ ಬೆಟ್ಟದ ಕಡೆ ಹೋಗಿದ್ದರು. ಈ ವೇಳೆ ಚೊಕ್ಕನಹಳ್ಳಿಯ ಕೆರೆ …

Read More »

ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಜಿಂಕೆ ಮಾಂಸ ಕಟ್​ ಮಾಡುತ್ತಿದ್ದವ ಅರೆಸ್ಟ್

ನೆಲಮಂಗಲ, ಜೂನ್​ 29: ಕಾಡುಪ್ರಾಣಿಗಳನ್ನು ಕೊಂದು ಮಾರಾಟ ಮಾಡುತ್ತಿದ್ದ ಜಾಲ ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿದೆ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ (Bannerghatta Forest Zone) ಜಿಂಕೆ ಮಾಂಸ ಕತ್ತರಿಸುತ್ತಿದ್ದಾಗ ಕಗ್ಗಲೀಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರತಾಪ್ (31) ಬಂಧಿತ ಆರೋಪಿ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಶೆಡ್​ ನಿರ್ಮಿಸಿಕೊಂಡು ಆರೋಪಿ ಪ್ರತಾಪ್​ ಸೇರಿದಂತೆ ನಾಲ್ವರು ಪ್ರಾಣಿಗಳ ಮಾಂಸ ಕತ್ತರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕಗ್ಗಲಿಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. …

Read More »

ಹಳೆ ವೈಷಮ್ಯಕ್ಕೆ ವ್ಯಕ್ತಿಯ ಕೊಲೆ ಪ್ರಕರಣ: ಅಪ್ರಾಪ್ತ ಸೇರಿ ಮೂವರ ಬಂಧನ

ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜಿನಪ್ಪ (35) ಎಂಬವರನ್ನು ಕೊಂದಿದ್ದ ಆರೋಪದಡಿ ಪ್ರೇಮ್, ದರ್ಶನ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಅವರ ಮೃತದೇಹ ಪತ್ತೆಯಾಗಿತ್ತು. ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ, ಹತ್ಯೆಯಲ್ಲಿ ಅಂತ್ಯ: ಪತ್ನಿಯಿಂದ ದೂರವಾಗಿದ್ದ ಆಂಜಿನಪ್ಪ ಉಚಿತವಾಗಿ ಊಟ ತಿಂಡಿ ಸಿಗುವ ಕಡೆಗಳಲ್ಲಿ ಹೊಟ್ಟೆ ತುಂಬಿಸಿಕೊಂಡು …

Read More »