Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಬೆಂಗಳೂರು: ಹಾನಗಲ್‌ ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್‌ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ …

Read More »

‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್​ ಗುಂಡೂರಾವ್​ ಆಕ್ರೋಶ

ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …

Read More »

ವಿದ್ಯುತ್ ಉತ್ಪಾದನಾ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ : ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು : ರಾಜ್ಯ ಸರಕಾರ ವಿದ್ಯುತ್ ಉತ್ಪಾದನೆ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ ಮಾಡಿದೆ, ಹೀಗಾಗಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿನಿಂದಲೂ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿತ್ತು.ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯೋ, ಕೃತಕ ಅಭಾವವೋ ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ …

Read More »

ಯುವತಿಗಾಗಿ ಹೊಡೆದಾಟ : ಕೊಲೆಯಲ್ಲಿ ಅಂತ್ಯವಾದ ಜಗಳ

ಬೆಂಗಳೂರು : ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್‌ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳ: ಮಾಡಬಾರದನ್ನ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು..!

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಪ್ರೇಯಸಿಗೆ ಗಿಫ್ಟ್ ಕೊಡಲು ಕಳ್ಳತನಕ್ಕೆ ಇಳಿದಿದ್ದ ಪ್ರಿಯಕರನಿಗೆ ಪ್ರೇಯಸಿಯೇ ಸಾಥ್​ ಕೊಡುತ್ತಿದ್ದಳು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಂದ್ರಲೇಔಟ್ ಪೊಲೀಸರಿಂದ ಪ್ರೇಮಿಗಳ ಬಂಧನವಾಗಿದೆ. ಪ್ರೇಮಿ ವಿನಯ್, ರಾಜಾಜಿನಗರದ ರೌಡಿಶೀಟರ್. ಗಿಫ್ಟ್‌ ಕೊಡಿಸುವಂತೆ ವಿನಯ್​ನನ್ನು ಪ್ರೇಯಸಿ ಕೀರ್ತನಾ ಪೀಡಿಸುತ್ತಿದ್ದಳು. ಹೀಗಾಗಿ, ವಿನಯ್​ ಒಂದು …

Read More »

ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಬಲಿ.. ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಾಮಾನ್ಯ ಜನರು ಬಲಿಯಾಗುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಮಹಿಳೆ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ. ಒಂದೇ ಕುಟುಂಬದ ಮೂವರು ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಮಹಿಳೆ ಮೇಲೆ ಟಿಪ್ಪರ್ …

Read More »

ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್‌ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ

ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …

Read More »

ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ- ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ …

Read More »

ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು : ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರ್ಕಾರದಿಂದ ಭೂಮಿ ಪಡೆದು ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕೆ ಉದ್ದೇಶಕ್ಕೆ ಭೂಮಿ ಹಂಚಿಕೆಯಾಗಿದ್ದರೂ ಕಾರ್ಯಾರಂಭ ಮಾಡದೆ ಇದ್ದರೆ ಪುನರ್ ಪರಿಶೀಲನೆ ನಡೆಸಿ ಭೂಮಿ ಹಂಚಿಕೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಬಳ್ಳಾರಿ ಭಾಗದಲ್ಲಿ ಭೂಮಿ, ನೀರು ಹಂಚಿಕೆಯಾಗಿ ಹತ್ತು ಹನ್ನೆರಡು ವರ್ಷಗಳು ಕಳೆದರೂ ಕೈಗಾರಿಕೆಗಳು ಪ್ರಾರಂಭವಾಗಿಲ್ಲ. ಇದರ ಬಗ್ಗೆ …

Read More »

ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು

ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್​ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …

Read More »