Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 19)

ಬೆಂಗಳೂರು ಗ್ರಾಮಾಂತರ

ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

ಬದಲಾಣೆ ಬಡಿದಾಟದಲ್ಲಿ ಗೆದ್ದು, ಸಿಎಂ ಸಿಂಹಾಸನಕ್ಕೇರಿದ ಬಸವರಾಜ್ ಬೊಮ್ಮಾಯಿ ರಾಜ್ಯ ಸುತ್ತೋಕೆ ರೆಡಿಯಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಇವತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರೋ ಸಿಎಂ ಬಸವರಾಜ …

Read More »

ರಾಜ್ಯ ಸಚಿವ ಸಂಪುಟ ರಚನೆ: ಹೈಕಮಾಂಡ್ ಆದೇಶಕ್ಕೆ ಕಾದು ಕುಳಿತಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕೂಡ ಪ್ರಮಾಣ ಸ್ವೀಕರಿಸಿದ್ದಾಗಿದೆ. ಈಗ ಅವರ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಇನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ. ಯಡಿಯೂರಪ್ಪ ಅವರ ಸಂಪುಟದಲ್ಲಿ 33 ಮಂದಿ ಸಚಿವರಿದ್ದರು. ಇದೀಗ ಹೊಸ ಸಂಪುಟ ರಚನೆ ಮಾಡುವ ಅವಕಾಶ ಬೊಮ್ಮಾಯಿಯವರಿಗೆ ಸಿಕ್ಕಿದೆ. ಸಂಪುಟ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬೊಮ್ಮಾಯಿಯವರು ಬಿಜೆಪಿ ಹೈಕಮಾಂಡ್ ಆದೇಶಕ್ಕಾಗಿ ಕಾದು ಕುಳಿತಿದ್ದಾರೆ. ಸಂಪುಟ ರಚನೆ ಕುರಿತು …

Read More »

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು. ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ …

Read More »

ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳು ತಮ್ಮ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸರ್ಕಾರದ  ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು ಸಿಎಂ …

Read More »

ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ

ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೊಮ್ಮಾಯಿ ಹೆಸರನ್ನು ಸೂಚಿಸಿದರು. ಗೋವಿಂದ ಕಾರಜೋಳ ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

Read More »

ಬಿಎಸ್ ವೈ ಬಲಗೈ ಬಂಟ ಬಸವರಾಜ ಬೊಮ್ಮಾಯಿ..ಕರ್ನಾಟಕದ ನೂತನ ಮುಖ್ಯಮಂತ್ರಿ..

ಬೆಂಗಳೂರು – ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಗೊತ್ತಾಗಿದೆ. ಅಧಿಕೃತವಾಗಿ ಘೋಷಣೆ ಇನ್ನೂ ಆಗಬೇಕಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ. ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ …

Read More »

ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ

ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್‍ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …

Read More »

ಛಲದಂಕಮಲ್ಲನ ಹೋರಾಟದ ಹಾದಿ

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಯಾ ಕಾಲಘಟ್ಟದಲ್ಲಿ ರಾಜ್ಯವನ್ನಾಳಿದ ನಾಯಕರು ತಮ್ಮದೇ ಆದ ಛಾಪು ಮೂಡಿಸಿದ್ದು, ಜನನಾಯಕ ರಾಗಿ, ಸಮುದಾಯದ ನಾಯಕರಾಗಿ ಗುರುತಿಸಿ ಕೊಂಡಿದ್ದು, ಇನ್ನೂ ರಾಜ್ಯದ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ತೆರೆಯ ಹಿಂದೆ ಸರಿಯುವ ಪ್ರಮುಖ ನಾಯಕರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬಂದಿದೆ. ಹೋರಾಟದಿಂದಲೇ ಅಧಿಕಾರಕ್ಕೆ ಬಂದು, ಅಧಿಕಾರ ನಡೆಸುವಾಗಲೂ ಹೋರಾಟ ನಡೆಸುತ್ತಲೇ ಅಧಿಕಾರ ನಡೆಸುವಂತಾಯಿತು. ಪ್ರತಿಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವಿರುದ್ದ …

Read More »

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ. ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ …

Read More »

ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು: ಎಚ್‌.ವಿಶ್ವನಾಥ್‌ :

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ವಿಜಯೇಂದ್ರ ಹಾಗೂ ಮೊಮ್ಮಕ್ಕಳು ಎಲ್ಲವನ್ನೂ ಹಾಳು ಮಾಡಿಬಿಟ್ಟರು. ಯಡಿಯೂರಪ್ಪ ಹೆಸರು, ಅಧಿಕಾರ, ರಾಜ್ಯದ ಅಭಿವೃದ್ಧಿ ಎಲ್ಲವೂ ಅವರ ಮಗನಿಂದ ಹಾಳಾಯಿತು. ಭ್ರಷ್ಟಾಚಾರದಿಂದಾಗಿಯೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರಕ್ಕೆ ಅವರ ಮನೆಯೇ ಮೂಲವಾಯಿತು. ಅದಕ್ಕೆ …

Read More »