ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್‌ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧರಿಸುತ್ತಿರುವ ಟೋಪಿಗಳ ಮಾದರಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ನಡೆಸಿದ ಅವರು, ಮಹಾರಾಷ್ಟ್ರ, ದೆಹಲಿ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಕ್ಯಾಪ್‌ಗಳನ್ನು ಪರಿಶೀಲಿಸಿದರು. …
Read More »ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ ಸಾರ್ವಜನಿಕರ ಎದುರೇ ಬ್ಲೇಡ್ನಿಂದ …
Read More »ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ
ಬೆಂಗಳೂರು: ”ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು. …
Read More »ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು. ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ …
Read More »ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ ಶಾಸಕ ಬಿ.ಆರ್.ಪಾಟೀಲ್
ಬೆಂಗಳೂರು: ತಮ್ಮ ಸರ್ಕಾರದ ವಿರುದ್ಧವೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್, ಕಾಗವಾಡ ಕ್ಷೇತ್ರದ ರಾಜು ಕಾಗೆ ಅವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ ರಾಜು ಕಾಗೆ: ನವದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು, ಶಾಸಕರನ್ನು ಕರೆಸಿ ಚರ್ಚೆ ನಡೆಸಿದ್ದಾರೆ. ಮೊದಲಿಗೆ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಶಾಸಕ ರಾಜು ಕಾಗೆ ಅವರು ಸಿದ್ದರಾಮಯ್ಯ …
Read More »ರೀಲ್ಸ್ ಮಾಡುವಾಗ 14ನೇ ಮಹಡಿಯಿಂದ ಕಾಲುಜಾರಿ ಬಿದ್ದು ಯುವತಿ ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಲ್ಲಿ ರೀಲ್ಸ್ ಮಾಡುವ ವೇಳೆ ಕಾಲುಜಾರಿಬಿದ್ದು ಯುವತಿ ಮೃತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಆಂಧ್ರದ ಬೋಯಲ ನಂದಿನಿ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಿತ್ತೂರು ಮೂಲದ ನಂದಿನಿ ಬಿಕಾಂ ಪದವೀಧರೆಯಾಗಿದ್ದು, ನಗರದ ಭುವನೇಶ್ವರಿ ಲೇಔಟ್‌ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು. ರಿಲಯನ್ಸ್ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ನಂದಿನಿ, ಸೋಮವಾರ ಕೆಲಸದಿಂದ ಸಾಯಂಕಾಲ ವಾಪಸ್ ಬಂದಿದ್ದಳು. ತನ್ನ ಸ್ನೇಹಿತೆ ಹಾಗೂ …
Read More »ನಾನು ಹಣ ಪಡೆದಿದ್ದು ಸಾಬೀತಾದರೆ ರಾಜೀನಾಮೆ ನೀಡುತ್ತೇನೆ: ಸಚಿವ ಜಮೀರ್
ಬೆಂಗಳೂರು: ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ದರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ. ಬಡವರ ಮನೆಯ ಹಣ ಪಡೆಯುವಷ್ಟು ದರಿದ್ರ ನನಗೆ ಬಂದಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದರು. ಇಂದು ಸರ್ಕಾರಿ ನಿವಾಸದ ಬಳಿ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ನನ್ನ ಮೇಲೆ ಆರೋಪ ಮಾಡಿಲ್ಲ. ನಾನು ಕೊಟ್ಟ ಪತ್ರಕ್ಕೆ ಮನೆ ಕೊಟ್ಟಿಲ್ಲ ಎಂದಿದ್ದಾರೆ. ಪಂಚಾಯತಿ ಮೇಲೆ ಆರೋಪ ಮಾಡಿದ್ದಾರೆ. ಪ್ರತಿ ಪಂಚಾಯತಿಗೆ 900 ಮನೆ ನೀಡಲಾಗಿದೆ. ಎರಡು ಸಾವಿರ …
Read More »ಇರಾನ್ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ: ಒಂದೇ ಗ್ರಾಮದ 16 ಜನ ವಾಪಸ್
ಬೆಂಗಳೂರು, ಜೂನ್ 21: ಇರಾನ್ ಮತ್ತು ಇಸ್ರೇಲ್ (Iran and Israel) ನಡುವಿನ ಯುದ್ಧ ಮುಂದುವರೆಯುತ್ತಿದ್ದು ದಿನದಿಂದ ದಿನಕ್ಕೆ ಪರಿಸ್ಥಿತಿ ಉದ್ವಿಗ್ನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು (Kannadigas) ಶನಿವಾರ (ಜೂ.21) ಕರ್ನಾಟಕಕ್ಕೆ (Karnataka) ವಾಪಸ್ ಆಗಿದ್ದಾರೆ. ಇರಾನ್ನಿಂದ ಬೆಂಗಳೂರಿಗೆ ಆಗಮಿಸಿದ ಕನ್ನಡಿಗರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳಿಯ ಶಾಸಕ ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಸ್ವಾಗತಕೋರಿದರು. ತಾಯ್ನಾಡಿಗೆ ಮರಳಿದ ಕನ್ನಡಿಗರು ಮತ್ತು ಇವರ ಪೋಷಕರಿಗೆ ಶಾಸಕ …
Read More »ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ
ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …
Read More »ಬಿಎಸ್‌ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್ ಫಾರ್ ಎಜುಕೇಷನ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (ಸಿಇಎಸ್‌ಎಸ್) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿ …
Read More »