Breaking News

ಬೆಂಗಳೂರು ಗ್ರಾಮಾಂತರ

ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ

ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್‍ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …

Read More »

ಛಲದಂಕಮಲ್ಲನ ಹೋರಾಟದ ಹಾದಿ

ಬೆಂಗಳೂರು: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಆಯಾ ಕಾಲಘಟ್ಟದಲ್ಲಿ ರಾಜ್ಯವನ್ನಾಳಿದ ನಾಯಕರು ತಮ್ಮದೇ ಆದ ಛಾಪು ಮೂಡಿಸಿದ್ದು, ಜನನಾಯಕ ರಾಗಿ, ಸಮುದಾಯದ ನಾಯಕರಾಗಿ ಗುರುತಿಸಿ ಕೊಂಡಿದ್ದು, ಇನ್ನೂ ರಾಜ್ಯದ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ತೆರೆಯ ಹಿಂದೆ ಸರಿಯುವ ಪ್ರಮುಖ ನಾಯಕರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬಂದಿದೆ. ಹೋರಾಟದಿಂದಲೇ ಅಧಿಕಾರಕ್ಕೆ ಬಂದು, ಅಧಿಕಾರ ನಡೆಸುವಾಗಲೂ ಹೋರಾಟ ನಡೆಸುತ್ತಲೇ ಅಧಿಕಾರ ನಡೆಸುವಂತಾಯಿತು. ಪ್ರತಿಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವಿರುದ್ದ …

Read More »

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ನೂತನ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದೆ. ಸಿಎಂ ಕುರ್ಚಿ ರೇಸ್ ನಲ್ಲಿ ಈಗಾಗಲೇ ಮೂರು- ನಾಲ್ಕು ಜನರ ಹೆಸರು ಕೇಳಿಬರುತ್ತಿದ್ದು, ‘ಇವರ್ ಬಿಟ್ಟು ಅವರ್ ಬಿಟ್ಟು ಮತ್ಯಾರು’ ಎಂಬ ಪರಿಸ್ಥಿತಿಗೆ ಬಂದಿದೆ. ಇದರ ನಡುವೆ ಇಂದು (ಜು.27) ಸಂಜೆ 7.30 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ …

Read More »

ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು: ಎಚ್‌.ವಿಶ್ವನಾಥ್‌ :

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ವಿಜಯೇಂದ್ರ ಹಾಗೂ ಮೊಮ್ಮಕ್ಕಳು ಎಲ್ಲವನ್ನೂ ಹಾಳು ಮಾಡಿಬಿಟ್ಟರು. ಯಡಿಯೂರಪ್ಪ ಹೆಸರು, ಅಧಿಕಾರ, ರಾಜ್ಯದ ಅಭಿವೃದ್ಧಿ ಎಲ್ಲವೂ ಅವರ ಮಗನಿಂದ ಹಾಳಾಯಿತು. ಭ್ರಷ್ಟಾಚಾರದಿಂದಾಗಿಯೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರಕ್ಕೆ ಅವರ ಮನೆಯೇ ಮೂಲವಾಯಿತು. ಅದಕ್ಕೆ …

Read More »

ಐಪಿಎಸ್​ ಅಧಿಕಾರಿ ಚನ್ನಣ್ಣನವರ್ ನನ್ನಣ್ಣ ಎಂದು ಭಕ್ತರಿಂದ ಲಕ್ಷ ಲಕ್ಷ ಲಪಟಾಯಿಸಿ ಎಸ್ಕೇಪ್​ ಆದ ಅರ್ಚಕ!

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ನನ್ನ ಅಣ್ಣ, ಬೇಕಿದ್ದರೆ ಈ ಫೋಟೋ ನೋಡಿ. ನಾನು ಪ್ರಭಾವಿ ವ್ಯಕ್ತಿ. ಆಶ್ರಯ ಯೋಜನೆ ಅಡಿ ಮನೆ ಬೇಕಿದ್ದರೆ ಇಷ್ಟು ಲಕ್ಷ ರೂಪಾಯಿ ಕೊಡಿ, ಅಣ್ಣನ ಇನ್​ಫ್ಲುಯೆನ್ಸ್​ ಬಳಸಿ ಮನೆ ಕೊಡಿಸುವೆ ಎಂದ ಅರ್ಚಕನೊಬ್ಬ ದೇವಾಲಯಕ್ಕೆ ಬರುವ ಭಕ್ತರಿಗೆ ಪಂಗನಾಮ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತರಹಳ್ಳಿಯ ಅರ್ಚಕ ಮಹಾಬಲ ಅಲಿಯಾಸ್ ಮಂಜನಾಥ್ ವಂಚನೆ ಮಾಡಿದ ಆರೋಪಿ. ಉತ್ತರಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ …

Read More »

ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ಈ ಭೇಟಿಯ ವೇಳೆ, ಸ್ಪೀಕರ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಧಾನಸಭಾ ಸಚಿವಾಲಯ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತಂತೆ ವಿವರಿಸಿದ್ದಾರೆ. ಅಲ್ಲದೆ ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ. ಭೇಟಿ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ, ಭಾರತದ ಸಂವಿಧಾನ ಕುರಿತ ಚರ್ಚೆ, ಸಂಸದೀಯ ನಡೆವಳಿಕೆಯಲ್ಲಿ ಮೌಲ್ಯಗಳು ಮತ್ತು ತತ್ವ, ಸಿದ್ಧಾಂತಗಳು …

Read More »

ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜೆ.ಪಿ ನಡ್ಡಾ

ಬೆಂಗಳೂರು/ಗೋವಾ: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಡ್ಡಾ, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯಡ್ಡಿಯವರ ಬೆನ್ನು ತಟ್ಟಿದ್ದಾರೆ. ಜುಲೈ 25 ಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಲ್ಲದೇ ಬೆಳಗಾವಿಯಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಸಂಜೆ ಹೈಕಮಾಂಡ್‌ನಿಂದ …

Read More »

ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ …

Read More »

ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ

ಬೆಂಗಳೂರು: ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಶ್ರೀಗಳು, ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಗಿಗಳನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ. “ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ …

Read More »

ರಾಜೀನಾಮೆ ನೀಡುವವರೆಗೂ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್‌ನಿಂದ ಮೊಟ್ಟೆ ಕೊಡುವ ಅಭಿಯಾನ!

ಬೆಂಗಳೂರು,: “ರಾಜ್ಯದಲ್ಲಿ ಅಪೌಷ್ಠಿಕತೆ ನೀಗಿಸಲು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುವ ಮೊಟ್ಟೆಯಲ್ಲೂ ದುಡ್ಡು ಮಾಡಲು ಅಮಾನವೀಯ ಹೆಜ್ಜೆ ಇಟ್ಟುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಪ್ರಕರಣದ ತನಿಖೆಯಾಗಬೇಕು’ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕಿಯರು ಜಂಟಿ ಸುದ್ದಿಗೋಷ್ಠಿ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿದರು. ಮಾಜಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ …

Read More »