Breaking News

ಬೆಂಗಳೂರು ಗ್ರಾಮಾಂತರ

ಬಿಜೆಪಿ ಭಿನ್ನಮತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ

ಬೆಂಗಳೂರು,ಆ.9- ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸಂಪುಟ ವಿಸ್ತರಣೆಯಾಗಿ ಖಾತೆಗಳು ಹಂಚಿಕೆಯಾಗಿದ್ದರೂ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ನಿರೀಕ್ಷಿತ ಖಾತೆ ಸಿಗದಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಂಬಾಳಿಸುವುದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆ ನೋವಾಗಿ ಪರಿಣಮಿಸಿದೆ. ಅಸಮಾಧಾನಗೊಂಡಿರುವ ಸಚಿವರಾದ ಆನಂದ್ ಸಿಂಗ್, ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಶ್ರೀರಾಮುಲು ಮತ್ತಿತರರು ಎಲ್ಲವೂ ಸರಿ ಹೋಗಿದೆ ಎಂದು …

Read More »

ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೋವಿಡ್ ಕಾರಣದಿಂದ …

Read More »

KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.   24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 …

Read More »

ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ,ಹೆಸರು…

ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ …

Read More »

ಬೀದಿಯಲ್ಲಿ ಫೋಟೋ ಹಾಕಿ ಪೋಸ್ ಕೊಡುವ ಮೋದಿಗೆ ಲಸಿಕೆ ಪೂರೈಸುವ ಜ್ಞಾನವಿಲ್ಲವೆ : ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ರಾಜ್ಯದ ಬಹುತೇಕ ಕಡೆ ಕೋವಿಡ್ ಲಸಿಕೆಯ ಅಭಾವವಿದೆ. ರಾಜ್ಯಗಳಿಗೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದು ಕೇಂದ್ರದ ಜವಬ್ಧಾರಿ. ಆದರೆ ಕೇಂದ್ರ ಲಸಿಕೆ ಪೂರೈಸುವಲ್ಲಿ ವಿಫಲವಾಗಿದೆ‌ ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ. ಲಸಿಕಾ ಅಭಿಯಾನದ ಬಗ್ಗೆ ಹಾದಿ ಬೀದಿಯಲ್ಲಿ ಫೋಟೋ ಹಾಕಿಕೊಂಡು ಪೋಸ್ ಕೊಡುವ …

Read More »

ನಾಳೆಯಿಂದಲೇ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ ರುಪ್ಸಾ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …

Read More »

ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಸಿಎಂ ಜತೆ ಚರ್ಚೆ: ಬಿಎಸ್‌ವೈ

ಬೆಂಗಳೂರು: ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜತೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಆರೆಸ್ಸೆಸ್‌ ಕಚೇರಿಗೆ ಭೇಟಿ ನೀಡಿ, ಮುಖಂಡ ಮುಕುಂದ್‌ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಚಿವ ಸಂಪುಟ ರಚನೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರಿಗೆ ಬಿಟ್ಟಿದ್ದು, ವಲಸಿಗರ ವಿಷಯ …

Read More »

ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್​​ಗೆ ಇಳಿದಿದ್ದಾರೆ?

ಬದಲಾಣೆ ಬಡಿದಾಟದಲ್ಲಿ ಗೆದ್ದು, ಸಿಎಂ ಸಿಂಹಾಸನಕ್ಕೇರಿದ ಬಸವರಾಜ್ ಬೊಮ್ಮಾಯಿ ರಾಜ್ಯ ಸುತ್ತೋಕೆ ರೆಡಿಯಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಇವತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರೋ ಸಿಎಂ ಬಸವರಾಜ …

Read More »

ರಾಜ್ಯ ಸಚಿವ ಸಂಪುಟ ರಚನೆ: ಹೈಕಮಾಂಡ್ ಆದೇಶಕ್ಕೆ ಕಾದು ಕುಳಿತಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕೂಡ ಪ್ರಮಾಣ ಸ್ವೀಕರಿಸಿದ್ದಾಗಿದೆ. ಈಗ ಅವರ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಇನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ. ಯಡಿಯೂರಪ್ಪ ಅವರ ಸಂಪುಟದಲ್ಲಿ 33 ಮಂದಿ ಸಚಿವರಿದ್ದರು. ಇದೀಗ ಹೊಸ ಸಂಪುಟ ರಚನೆ ಮಾಡುವ ಅವಕಾಶ ಬೊಮ್ಮಾಯಿಯವರಿಗೆ ಸಿಕ್ಕಿದೆ. ಸಂಪುಟ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬೊಮ್ಮಾಯಿಯವರು ಬಿಜೆಪಿ ಹೈಕಮಾಂಡ್ ಆದೇಶಕ್ಕಾಗಿ ಕಾದು ಕುಳಿತಿದ್ದಾರೆ. ಸಂಪುಟ ರಚನೆ ಕುರಿತು …

Read More »

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು. ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ …

Read More »