ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿಡಿಗಳಿವೆ. ಯಾರದ್ದೂ ಬೇಕಾದರೂ ಸಿಡಿ ಇರಬಹುದು. ಒಂದು ವೇಳೆ ಇವರಿಗೆ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ ಸಿಡಿಗಳ ಸಂಖ್ಯೆ 50 ಲಕ್ಷ ಆಗಬಹುದು ಎಂದು ಉದ್ಯಮಿ ಎ.ಆಲಂ ಪಾಷ ಆರೋಪಿಸಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುರುಗೇಶ್ ನಿರಾಣಿ ರಾಜ್ಯದ ಮಂತ್ರಿಗೂ ಸಿಡಿ ಇದೆ ಎಂದು ಹೆದರಿಸಿದ್ದಾರೆ. ಅವರು ಕೋರ್ಟ್ ನಿಂದ ಸ್ಟೇ …
Read More »BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್‌ವೈ ಮೌನ
ಬೆಂಗಳೂರು : ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಮೇಲೆ ಅಡ್ಡ ಪರಿಣಾಮ ಉಂಟಾದೀತು! ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, …
Read More »ಬೆಂಗಳೂರು: ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ, ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಅಮಾಯಕ ಜೀವ
ಬೆಂಗಳೂರು: ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಮುಗ್ಧ ವ್ಯಕ್ತಿಯೊಬ್ಬರ ಜೀವ ಉಳಿದಂತಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಯಾಗಿರುವ ರೂಪ ಮತ್ತು ಗಿರೀಶ್ ಮದುವೆ ಆರು ವರ್ಷಗಳ ಹಿಂದೆ ನಡೆದಿತ್ತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದ ಪತ್ನಿ ರೂಪ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲಸಕ್ಕೆ ಸೇರಿದ ನಂತರ ರೂಪಾಗೆ ಕುಮಾರ್ ಜೈನ್ …
Read More »ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾಕ್ಸಮರದ ನಡುವೆ ಇದೀಗ ಇಂದ್ರಜಿತ್ ಗೆ ಬೆದರಿಕೆ ಕರೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಕಳೆದ 24 ಗಂಟೆಗಳಿಂದ ಫೋನ್ ಕರೆಗಳು ನಿರಂತರವಾಗಿ ಬರುತ್ತಿವೆ. ಈ ಮೂಲಕ ದರ್ಶನ್ ಹಿಂಬಾಲಕರು ದುರ್ವರ್ತನೆ ತೋರುತ್ತಿದ್ದಾರೆ. 30 ರಿಂದ 35 ಜನರಿಂದ ರಾತ್ರಿ ಹಗಲು ಫೋನ್ ಮಾಡ್ತಿದ್ದಾರೆ ಎಂದು ದೂರಿದ್ದಾರೆ. ಬೆದರಿಕೆ ಕರೆಗಳು …
Read More »ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆಹೋಗಿ ಆಣೆ ಮಾಡಿ:ದರ್ಶನ್ಗೆ ಇಂದ್ರಜಿತ್ ಮರು ಸವಾಲು
ಬೆಂಗಳೂರು : ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡೋಣ. ನೀವು ವೇಟರ್ ಗೆ ಹೊಡೆದಿಲ್ಲ ಎಂದು ಆಣೆ ಮಾಡಿ ಎಂದು ನಟ ದರ್ಶನ್ ಅವರಿಗೆ ಪತ್ರಕರ್ತ ಇಂದ್ರಜಿತ್ ಲಂಕೇಶ್ ಮರು ಸವಾಲು ಹಾಕಿದರು. ಇಂದು ಸಂಜೆ ಮಾಧ್ಯಮಗೋಷ್ಠಿ ನಡೆಸಿದ ನಟ ದರ್ಶನ್ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದರು. ನಿಮ್ಮಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಇಂದ್ರಜಿತ್ ಅವರಿಗೆ ನೇರ ಸವಾಲು …
Read More »ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ – ಪಿಯುಸಿ ಬೋರ್ಡ್
ಬೆಂಗಳೂರು: ಕೊರೊನಾದಿಂದ ರದ್ದಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜುಲೈ 20 ರಂದು ಪ್ರಕಟವಾಗಲಿದೆ. ಈಗಾಗಲೇ ಫಲಿತಾಂಶ ಪ್ರಕಟ ಮಾಡಲು ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಅಂತ ಪಬ್ಲಿಕ್ ಟಿವಿಗೆ ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ. ಜುಲೈ 20 ರಂದು ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ …
Read More »ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್
ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ ಅಂದು …
Read More »ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್
ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಯಾವೆಲ್ಲಾ ಜಿಲ್ಲೆಯಲ್ಲಿ ದಾಳಿ? ಬೆಂಗಳೂರು ಮೈಸೂರು ಮಂಡ್ಯ ವಿಜಯಪುರ ಮಂಗಳೂರು ಉಡುಪಿ ಕೋಲಾರ ಚಿತ್ರದುರ್ಗ ಬಳ್ಳಾರಿ ಯಾರೆಲ್ಲಾ ನಿವಾಸ ಹಾಗೂ ಮನೆಗಳ ಮೇಲೆ ದಾಳಿ? ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ ಕೃಷ್ಣ.ಎಸ್ …
Read More »ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು …
Read More »ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತ: ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು : ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ20 ಮಂದಿಗೆ …
Read More »