Breaking News

ಬೆಂಗಳೂರು ಗ್ರಾಮಾಂತರ

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ. ಈ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರ ವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ …

Read More »

ನೀಟ್‌ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ- ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, …

Read More »

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವ ಡ್ಯಾನ್ಸರ್​ಗಳು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.

ನೆಲಮಂಗಲ(ಬೆಂ.ಗ್ರಾಮಾಂತರ): ಡ್ಯಾನ್ಸ್ ಇವೆಂಟ್​​ನ ಪೇಮೆಂಟ್ ಹಣ ತೆಗೆದುಕೊಂಡು ಬರುವಾಗ ಲಾರಿ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಡ್ಯಾನ್ಸರ್ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೆಲಮಂಗಲದ ಕುಣಿಗಲ್ ಬೈಪಾಸ್​ ಬಳಿ ಸೋಮವಾರ(ಇಂದು) ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತಪಟ್ಟವರು. ಇವರು ಕೆಲ ಸಿನಿಮಾಗಳಲ್ಲಿಯೂ ಡ್ಯಾನ್ಸರ್​​ಗಳಾಗಿ ಕೆಲಸ ಮಾಡಿದ್ದರು. ಹಲವು ಇವೆಂಟ್​​ಗಳಲ್ಲಿಯೂ ಜೋಡಿಯಾಗಿ ಡ್ಯಾನ್ಸ್ ಪ್ರದರ್ಶನ ನೀಡಿದ್ದರು. ತುಮಕೂರಿನ ಕುಣಿಗಲ್​ನಲ್ಲಿ ನಡೆದ …

Read More »

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ …

Read More »

ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು –

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ ಕಪ್​ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಸಂಬಂಧ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ನೈಜ ಹೋರಾಟಗಾರರ ವೇದಿಕೆ ಪದಾಧಿಕಾರಿಗಳು ಕಬ್ಬನ್‌ ಪಾರ್ಕ್ ಪೊಲೀಸ್​ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸರು ದೂರಿನ ಪ್ರತಿ ಪಡೆದು, ಹಿಂಬರಹ ನೀಡಿದ್ದಾರೆ. ಕಾಲ್ತುಳಿತದ …

Read More »

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ,

ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ …

Read More »

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ-ಯುವತಿಯರನ್ನು ವಶಕ್ಕೆ ಪಡೆದ ಪೊಲೀಸರು

ದೇವನಹಳ್ಳಿ(ಬೆಂಗಳೂರು ಗ್ರಾ.): ಇಲ್ಲಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಲಯ ಡಿಸಿಪಿ ವಿ.ಜೆ.ಸಜೀತ್ ಅವರು ಪ್ರತಿಕ್ರಿಯೆ ನೀಡಿದ್ದು, “NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ …

Read More »

ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ 21: ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ (Rajakaluve) ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ (ಮೇ. 21) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ …

Read More »

4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!

ಚಿಕ್ಕಮಗಳೂರು: 20 ರೂಪಾಯಿಯಲ್ಲಿ ಆಕೆ ವಾರಪೂರ್ತಿ ಬದುಕಬೇಕು. ಅದು ಮನೆಯಿಂದ ಹೊರಬರದಂತೆ. ಮನೆಯಲ್ಲಿ ರೇಷನ್ ಇದ್ರೆ ಅನ್ನ-ಆಹಾರ. ಇಲ್ಲದಿದ್ರೆ ಮನೆಯಲ್ಲಿ ಉಪವಾಸ.. ಅತ್ತೆ-ಗಂಡ ಹೋದಾಗಲೇ ಹೋದ್ರು, ಬಂದಾಗಲೇ ಬಂದ್ರು. ಮನೆಯಿಂದ ಹೋಗುವಾಗ ಮನೆಯಲ್ಲಿ ರೇಷನ್ ಎಲ್ಲಾ ಖಾಲಿ-ಖಾಲಿ. 3-4 ದಿನ ನೀರು ಕುಡಿದುಕೊಂಡೇ ಇರಬೇಕು. ಅದೂ ನೀರಿನ ಸಂಪರ್ಕ ಕಟ್ ಮಾಡಿರದಿದ್ರೆ. ಮನೆ ಕೆಲಸವೆಲ್ಲಾ ಮಾಡಬೇಕು. ಅಡುಗೆ-ಊಟ ಮಾಡುವಂತಿಲ್ಲ. ಒಂದೇ ಚೇರ್. ಅಲ್ಲೇ ಕೂರಬೇಕು. ಮಹಡಿ ಮೇಲೆ ಮಲಗಬೇಕು. ಇದು …

Read More »

ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ

ರಾಮನಗರ: ಎಚ್‌.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ ಹೊಟ್ಟೆಹುರಿ. ನನಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಸರಕಾರವನ್ನು ಕಿತ್ತೂಗೆಯುತ್ತೇನೆ ಎನ್ನುತ್ತಿದ್ದಾರೆ. ದೇವೇಗೌಡರೇ ಇದು ನಿಮ್ಮ ಪಾಳೆಗಾರಿಕೆಯಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ಸೋಮವಾರ ಚನ್ನಪಟ್ಟಣ ಉಪಚುನಾವಣೆಯ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ನಾನು ಮತ್ತು ಜಾಲಪ್ಪ ಇಲ್ಲದೇ ಹೋಗಿದ್ದರೆ 1994ರಲ್ಲಿ ನೀವು ಮುಖ್ಯಮಂತ್ರಿ …

Read More »