Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 33)

ಬೆಂಗಳೂರು ಗ್ರಾಮಾಂತರ

C.M.ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿ, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ

ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ. ಅಲ್ಲದೆ ಸಚಿವಾಕಾಂಕ್ಷಿಗಳ ಎದೆ ಬಡಿತವನ್ನು ಹೆಚ್ಚಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಸಮಯ ನಿಗದಿಯಾಗಿದೆ. ಎರಡರಿಂದ ಮೂರು ದಿನಗಳ ಕಾಲ ಸಿಎಂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವರಿಷ್ಠರನ್ನು ಹಾಗೂ ವಿವಿಧ ಸಚಿವಾಲಯಗಳ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ವರಿಷ್ಠರ ಜೊತೆ …

Read More »

ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ

ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ. ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ …

Read More »

ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.

ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …

Read More »

ಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯ ಮಾಹಿತಿ: ಸೆ. 5 ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …

Read More »

ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು: ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಗಲು, ರಾತ್ರಿ ಎನ್ನದೆ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ ಶೇಖ್ ಸಮೀರ್ ಬಂಧಿತ ಆರೋಪಿ, ಕೊಡಿಗೇಹಳ್ಳಿ ಜಂಕ್ಷನ್ ಹತ್ತಿರ ವ್ಹೀಲಿಂಗ್ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಬ್ಬಾಳ ಸಂಚಾರಿ ಠಾಣಾ ಇನ್ಸ್‍ಪೆಕ್ಟರ್ ಫೈರೋಜ್ ನೇತೃತ್ವದ ತಂಡ ಆರೋಪಿಯನ್ನು …

Read More »

ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.  

Read More »

ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ನಿವೃತ್ತ  ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ರಾಜಕೀಯ ಕಣಕ್ಕೆ ಇಳಿಯುವ ಮೂಲಕ ಅವರು, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್  ಹಾಗೂ ಗಣ್ಯರ ಸಮ್ಮುಖದಲ್ಲಿ  ಅಣ್ಣಾಮಲೈ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಸ್ವಯಂನಿವೃತ್ತಿ …

Read More »

ನಿಮ್ಮ ಫೋನ್ ಕದ್ದಾಲಿಕೆ ಮಾಡುವ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ: ಸುಧಾಕರ್

ಬೆಂಗಳೂರು: ನನ್ನ ಫೋನ್ ಟ್ಯಾಪಿಂಗ್ ಆಗ್ತಿರೋದು ನಿಜ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎರಡು ಟ್ವೀಟ್ ಮಾಡಿರುವ ಸಚಿವರು, ಡಿಕೆ ಶಿವಕುಮಾರ್ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ …

Read More »

ಅಪಹರಣವಾದ ಮಗುವನ್ನು 48 ಗಂಟೆಯೊಳಗೆ ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

ನೆಲಮಂಗಲ: 18 ತಿಂಗಳ ಮಗುವನ್ನು ಹಣಕ್ಕಾಗಿ ಅಪಹರಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡು ದಿನದ ಹಿಂದೆ ಮನೆ ಮುಂದೆ ಇದ್ದ ಮಗುವನ್ನು ಇಬ್ಬರು ವ್ಯಕ್ತಿಗಳು ಅಪಹರಿಸಿದ್ದರು. ಇಂದು ಪ್ರಕರಣ ಭೇದಿಸಿದ ಪೊಲೀಸರು ಪೋಷಕರಿಗೆ ಮಗುವನ್ನು ಹಸ್ತಾಂತರಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ. ಬೆಂಗಳೂರು ಹೊರವಲಯ ಮಾಗಡಿ ರಸ್ತೆಯ ಕಡಬಗೆರೆ ಬಳಿ ಮಗು ಅಪಹರಣವಾಗಿತ್ತು. ಮಾಚೋಹಳ್ಳಿಯ ರವಿ ದಂಪತಿಯ 18 ತಿಂಗಳ ಹೆಣ್ಣು ಮಗುವನ್ನು ಅಪಹರಣ ಮಾಡಿದ್ದರು. ಅಪಹರಣವಾದ ಮಗುವನ್ನು 48 …

Read More »

12 ವಿದ್ಯಾರ್ಥಿಗಳಿಗೆ ಶ್ರೀ ಸಾಯಿ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

ನೆಲಮಂಗಲ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಕ್ಷೇತ್ರದ ಗೌರವ ಹೆಚ್ಚಿಸಿರುವ 12 ವಿದ್ಯಾರ್ಥಿಗಳಿಗೆ ಶ್ರೀ ಸಾಯಿ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆ ಮಾತನಾಡಿದ ಟಿ.ದಾಸರಹಳ್ಳಿಯ ಮಾಜಿ ಶಾಸಕ ಮುನಿರಾಜು, ಗುರುಗಳಿಂದ ಕಲಿತ ವಿದ್ಯೆಯಿಂದ ಜ್ಞಾನ ಸಂಪಾದನೆ ಮಾಡಿಕೊಂಡು ಭವಿಷ್ಯದಲ್ಲಿ ಹೆತ್ತ ತಂದೆ-ತಾಯಿ ಹಾಗೂ ನಾಡಿಗೆ ಕೀರ್ತಿ ತರಬೇಕು ಎಂದರು. ಶೆಟ್ಟಿಹಳ್ಳಿಯ ಬಿ. ಸುರೇಶ್ ಅವರು ಶ್ರೀ ಸಾಯಿ …

Read More »