Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 39)

ಬೆಂಗಳೂರು ಗ್ರಾಮಾಂತರ

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

ಕೊರೋನಾ ಪರಿಹಾರಕ್ಕೆ 100ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಫೌಂಡೇಷನ್‌

ಬೆಂಗಳೂರು, 31 ಮಾರ್ಚ್ 2020: ಇನ್ಫೋಸಿಸ್‌ನ ಸಿಎಸ್‌ಆರ್ ಮತ್ತು ಜನೋಪಕಾರಿ ಸಂಸ್ಥೆಯಾಗಿರುವ ಇನ್ಫೋಸಿಸ್ ಫೌಂಡೇಷನ್ ದೇಶದಲ್ಲಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಒಟ್ಟು 100 ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದೆ. ಈ ಹಣದಲ್ಲಿ ಪಿಎಂ ಕೇರ್‍ಸ್ ನಿಧಿಗೆ 50 ಕೋಟಿ ರೂಪಾಯಿಗಳನ್ನು ನೀಡಲಿದೆ. ದೇಶಾದ್ಯಂತ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗಲು ಮತ್ತು ಈ ಚಿಕಿತ್ಸೆಗಾಗಿಯೇ ಆಸ್ಪತ್ರೆಗಳ ಸಾಮರ್ಥ್ಯವನ್ನು ವಿಸ್ತರಣೆ ಮಾಡಲು ಬಳಸಿಕೊಳ್ಳಲಾಗುತ್ತದೆ. ವಿಶೇಷವಾಗಿ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ …

Read More »

ಬೆಂಗಳೂರು: ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು.: ಬಸವರಾಜ್ ಬೊಮ್ಮಾಯಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು. ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು. ಯಾವುದೇ …

Read More »

ಬ್ರೇಕಿಂಗ್ : ಏ.11ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ರಜೆ ವಿಸ್ತರಣೆ

ಬೆಂಗಳೂರು, ಮಾ.30- ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್‌ 11 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಆದರೆ, ರಜೆ ಅವಧಿಯಲ್ಲಿ ಯಾವುದೇ ಶಿಕ್ಷಕರು ಕೇಂದ್ರ ಸ್ಥಾನ ಬಿಡದಂತೆ ಸೂಚನೆ‌ ನೀಡಿದ್ದಾರೆ. ಕೆಲ ಖಾಸಗಿ ಶಾಲೆಗಳು 2020-21 ನೇ ಸಾಲಿನ ಶುಲ್ಕ ವಸೂಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭ ಮಾಡಿ‌ ಪೋಷಕರಿಗೆ ಅನಗತ್ಯ ಸಮಸ್ಯೆ …

Read More »

SHOCKING : ಬೆಂಗಳೂರಿನಲ್ಲಿ ಹೋಂ ಕ್ವಾರಂಟೆನ್‍ನಲ್ಲಿದ್ದಾರೆ 22 ಸಾವಿರ ಮಂದಿ..!

ಬೆಂಗಳೂರು,ಮಾ.23- ನಗರದಲ್ಲಿ 22 ಸಾವಿರ ಹೋಂ ಕ್ವಾರಂಟೆನ್‍ಗಳಿದ್ದು, ಇವರಲ್ಲಿ 16 ಮಂದಿ ನಗರದ ವಿವಿಧ ಆಸ್ಪತ್ರೆಗಳ ಐಸೋಲೇಷನ್‍ಗಳಲ್ಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ತಿಳಿಸಿದರು. ಕೊರೊನಾ ಹಾವಳಿ ತಡೆಗಟ್ಟುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಥಾಪಿಸಿರುವ ವಾರ್‍ರೂಮ್ ಉದ್ಘಾಟಿಸಿ ಅವರು ಮಾತನಾಡಿದರು. ಹೋಂ ಕ್ವಾರಂಟೆನ್‍ಗಳಲ್ಲಿ ಇರಬೇಕಾದವರು ಮನೆಬಿಟ್ಟು ಹೊರಬರುತ್ತಿದ್ದಾರೆ ಇಂಥವರ ಮೇಲೆ ಪಾಲಿಕೆ ಹದ್ದಿನ ಕಣ್ಣಿಟ್ಟಿದೆ. ಹೋಂ ಕ್ವಾರಂಟೆನ್‍ಗಳು ರಸ್ತೆಗಿಳಿದರೆ ಅವರನ್ನು ಹಿಡಿದು ಮಾಸ್ಕ್ ಕ್ವಾರಂಟೆನ್ ಸೆಂಟರ್‍ಗಳಿಗೆ ರವಾನಿಸಲಾಗುವುದು ಎಂದು …

Read More »

ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್‍ವೈ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …

Read More »

ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ.

ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಕೊರೊನಾ ವೈರಸ್ ಭೀತಿ ವಿಶ್ವದಾದ್ಯಂತ ಹರಡಿದ್ದು ಹೆಚ್ಚಿನ ಜನರು ಒಟ್ಟಿಗೆ ಇರುವಂತಹ ಜಾಗಗಳಲ್ಲಿ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ. ಅದರಂತೆಯೇ ಜೈಲುಗಳಲ್ಲಿಯೂ ಸಹ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೊರೊನಾ ವೈರಸ್ ಎಫೆಕ್ಟ್ ಹಿನ್ನೆಲೆ ಕೈದಿಗಳು ಎಲ್ಲರೂ ಮಾಸ್ಕ್ ಧರಿಸುವಂತೆ ಅಧಿಕಾರಿಗಳು …

Read More »

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು.

ಕರೋನಾ : ಸರ್ಕಾರದ ಆದೇಶಕ್ಕೂ ಕ್ಯಾರೇ ಅನ್ನದ ಧನದಾಹಿ ಶಿಕ್ಷಣ ಸಂಸ್ಥೆಗಳು..! ಬೆಂಗಳೂರು, ಮಾ.14- ಇಡೀ ರಾಜ್ಯವೇ ಕೊರೊನಾ ಭೀತಿ ಆತಂಕ ಎದುರಿಸುತ್ತಿದೆ. ಆದರೆ, ಧನದಾಹಿ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶುಲ್ಕ ವಸೂಲಿಯಲ್ಲಿ ತೊಡಗಿವೆ.  1 ರಿಂದ 6ನೆ ತರಗತಿವರೆಗೆ ಬೇಸಿಗೆ ರಜೆ ಘೋಷಣೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ. ಆದರೆ, ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇನ್ನೂ ಪರೀಕ್ಷೆ ನಡೆದಿರಲಿಲ್ಲ. ಪ್ರವೇಶ ಪತ್ರ ಕೊಡುವ ನೆಪದಲ್ಲಿ ಶುಲ್ಕ …

Read More »

ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ

ಬೆಂಗಳೂರು, ಮಾ :  ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …

Read More »