Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 43)

ಬೆಂಗಳೂರು ಗ್ರಾಮಾಂತರ

ರಾಬರ್ಟ್‘ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ’ರಾಬರ್ಟ್’ ಸಿನಿಮಾ ಈಗಾಗಲೇ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ. ಸಂಕ್ರಾಂತಿ ಹಬ್ಬದಂದು ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಈ ನಡುವೆ ರಾಬರ್ಟ್ ಚಿತ್ರದಲ್ಲಿ ದರ್ಶನ್ ತ್ರಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಅಭಿಮಾನಿಗಳ ಕಾತರವನ್ನು ಇಮ್ಮಡಿಗೊಳಿಸಿದೆ. ಈಗಾಗಲೇ ರಾಬರ್ಟ್ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇಲ್ಲಿಯವರೆಗೆ ‘ರಾಬರ್ಟ್‘ ಸಿನಿಮಾದಲ್ಲಿ ದರ್ಶನ್ ಅವರ ಪಾತ್ರದ ಬಗ್ಗೆ …

Read More »

: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ

ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು …

Read More »

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …

Read More »

ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತ, ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಯಶ್ ಹುಟ್ಟುಹಬ್ಬದ ದಿನದಂದು ಟೀಸರ್ ಬದಲು ಚಿತ್ರದ ಎರಡನೇ ಫೋಸ್ಟರ್ ಬಿಡಿಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಈ ದನದಂದು ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಗಿಫ್ಟ್ ನೀಡಲಿದೆ ಎಂಬ ಸುದ್ದಿಯಾಗಿತ್ತು. ಆದರೆ …

Read More »

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ ಬೆಂಗಳೂರು, ಮೇ. 5: ರಾಜ್ಯದ ಗ್ರಾಮ ಪಂಚಾಯಿತಿಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು, ಜೂನ್ 5 ರಂದು ಫಲಿತಾಂಶ ಪ್ರಕಟವಾಗಲಿದೆ. ಕಡ್ಡಾಯ ಮತದಾನ ಮತ್ತು ಮಹಿಳೆಯರಿಗೆ ಶೇ. 50 ಮೀಸಲು ಕಲ್ಪಿಸುವ ಪಂಜಾಯತ್ ರಾಜ್ ತಿದ್ದುಪಡಿ ಅನ್ವಯ ಚುನಾವಣೆ ನಡೆಯುತ್ತಿರುವುದು ಈ ಬಾರಿಯ ವಿಶೇಷ.[ಪಂಚಾಯಿತಿ …

Read More »

ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ.

ಬೆಂಗಳೂರು: ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಪ್ರತಿದಿನವೂ ಪ್ರತಿಭಟನೆಗಳು ನಡೆಯುತ್ತಿದ್ದು, ಕಾಯ್ದೆಯ ವಿರೋಧದ ಬಗ್ಗೆ ಜನ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನ ಹೊರ ಹಾಕುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ಜೋರಾಗಿದ್ದು ನಗರದ 6 ಕಡೆ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ ಇಂದು ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ಶುಕ್ರವಾರ ಆಶಾ ಕಾರ್ಯಕರ್ತೆಯರ …

Read More »