ಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು ತೂಗಿ ಲೋಕಸಭಾ ಟಿಕೆಟ್ ನೀಡಲು ಮುಂದಾಗಿದೆ. ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಹಾಘೂ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರುಗಳು ಕೇಳಿ ಬಂದಿವೆ. ಬಿಜೆಪಿ ಪಕ್ಷದತ್ತ ವಾಲುತ್ತಿರುವ ಸವದಿಯನ್ನ ಪಕ್ಷದಲೇ ಉಳಿಸಿಕೊಳ್ಳಲು ಪುತ್ರನಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ …
Read More »ಲೋಕಸಭೆ ಚುನಾವಣೆ ಕಲಬುರಗಿಗೆ ಖರ್ಗೆ ಅಳಿಯ, ಮೈಸೂರು-ಕೊಡಗು ಕ್ಷೇತ್ರಕ್ಕೆ ಯತೀಂದ್ರ?
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ. ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ …
Read More »ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ
ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …
Read More »ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …
Read More »ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …
Read More »ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.
ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು …
Read More »ವಿವಿಗಳ ಆರ್ಥಿಕ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನದ ಬಳಿಕ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ
ಬೆಂಗಳೂರು: ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಬಾಕಿ ಪಾವತಿ ಸೇರಿದಂತೆ ಎಲ್ಲ ವಿವಿಗಳ ಆರ್ಥಿಕ ಸಮಸ್ಯೆ ಕುರಿತು ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ವಿವಿ ಕುಲಪತಿಗಳು ಹಾಗು ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಎಸ್ ವಿ ಸಂಕನೂರು ಕುರಿತು ನಿಯಮ 72ರ ಅಡಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಕಳೆದ ಮೂರ್ನಾಲ್ಕು …
Read More »ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ
ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಯಾಕೆಂದರೆ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಅಂತಹ ವ್ಯವಸ್ಥೆ ಹುಟ್ಟುಹಾಕುವ ಸಾಮರ್ಥ್ಯ ಇರುವಾಗ, ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಒಬ್ಬ ಅಜಿತ್ ಪವಾರ್ ಹುಟ್ಟಿಕೊಳ್ಳಲೂಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ಡಿಕೆ, ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಅಜಿತ್ ಪವಾರ್ …
Read More »GST ಕೌನ್ಸಿಲ್ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ
ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್‌ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …
Read More »ಇವರು ಲಿಂಗಾಯತ ಸಮುದಾಯ ಮುಗಿಸಬೇಕು ಎಂದುಕೊಂಡಿದ್ದಾರೆ: ಬಿಜೆಪಿ ಪ್ರಬಲ ನಾಯಕನ ಹೇಳಿಕೆ
ಬೆಂಗಳೂರು, ಏಪ್ರಿಲ್ 20: ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ. ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …
Read More »