Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 5)

ಬೆಂಗಳೂರು ಗ್ರಾಮಾಂತರ

ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ

ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು. ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ …

Read More »

ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್

ಬೆಂಗಳೂರು ಗ್ರಾಮಾಂತರ: ಬಸ್‌ಗಾಗಿ ಕಾಯುತ್ತ ನಿಂತಿದ್ದ ಅಜ್ಜಿಯೊಬ್ಬರ ಕೊರಳಿಗೆ ಕೈಹಾಕಿ ಮಾಂಗಲ್ಯ ಸರ ಕಿತ್ತುಕೊಳ್ಳಲು ಹೋದ ಸರಗಳ್ಳಿಯೊಬ್ಬಳು ಗಟ್ಟಿಗಿತ್ತಿ ಅಜ್ಜಿಯ ಬಿಗಿಪಟ್ಟಿಗೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಧುರೆ ಹೋಬಳಿ ಕನಸವಾಡಿಯಲ್ಲಿ ಗುರುವಾರ ಈ ಪ್ರಕರಣ ನಡೆದಿದ್ದು, ಸರಗಳ್ಳಿ ಈಗ ದೊಡ್ಡಬೆಳವಂಗಲ ಠಾಣೆ ಪೊಲೀಸರ ಅತಿಥಿಯಾಗಿದ್ದಾಳೆ. ಸರ ನಾಲ್ಕೈದು ತುಂಡಾದರೂ ಒಂದೂ ತುಂಡು ಕೂಡ ಕಳ್ಳಿಯ ಪಾಲಾಗದಂತೆ ನೋಡಿಕೊಂಡ ಅಜ್ಜಿ ಎದೆಗಾರಿಕೆಗೆ ಹಾಗೂ ಸಮಯಪ್ರಜ್ಞೆಗೆ ಪೊಲೀಸರು ಸೆಲ್ಯೂಟ್ ಹೊಡೆದಿದ್ದಾರೆ. ಏನಿದು …

Read More »

ಬೊಮ್ಮಾಯಿ ಧಮ್ ಎಂದರೆ ‘ಧಮ್ ಬಿರಿಯಾನಿ’ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಸೆ.11: ‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಛೇಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧಮ್ ಎಂದರೆ ಧಮ್ ಬಿರಿಯಾನಿ ಎಂದು ಬೊಮ್ಮಾಯಿ ತಿಳಿದುಕೊಂಡ ಹಾಗಿದೆ. ನಮಗೆ …

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ;

ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ. ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್‌ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ …

Read More »

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …

Read More »

ಉಮೇಶ್ ಕತ್ತಿ ನಿಧನ : ಹುಕ್ಕೇರಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯೋದು ಡೌಟ್..?

ಬೆಂಗಳೂರು,ಸೆ.7-ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ತೆರವಾಗಿರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ತೆರವಾಗಿರುವ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಕ್ಷೇತ್ರಗಳಿಗೆ ನಿಯಮಾವಳಿ ಪ್ರಕಾರ ಆರು ತಿಂಗಳೊಳಗೆ ಮರು ಚುನಾವಣೆ ನಡೆಯಬೇಕು. ಆದರೆ ಕರ್ನಾಟಕದ ವಿಧಾನಸಭೆ ಚುನಾವಣೆ 2023ರ ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳು ಇಲ್ಲ …

Read More »

ಹಿಂದಿ ಹೇರಿಕೆಗೆ ಉತ್ತರ: ಕರ್ನಾಟಕದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ!

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕದಲ್ಲಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವೇ ಕಡ್ಡಾಯ ಭಾಷೆ ಆಗಿರಬೇಕು ಎಂದು ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡವನ್ನು ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.     ಕರ್ನಾಟಕದ ಆಡಳಿತ ಭಾಷೆಯಾಗಿ ಕನ್ನಡವೇ ಇರಬೇಕು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ …

Read More »

ಶಿಕ್ಷಕರ ಹಾಜರಾತಿಗೆ ಬಯೋಮೆಟ್ರಿಕ್‌ ಕಡ್ಡಾಯ; 15 ನಿಮಿಷ ಬೇಗ ಶಾಲೆಗೆ ಬರುವಂತೆ ಸೂಚನೆ

ಬೆಂಗಳೂರು: ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗದೆ ಕಳ್ಳಾಟವಾಡುವ ಶಿಕ್ಷಕರಿಗೆ ಬಿಸಿ ಮುಟ್ಟಿಸಿರುವ ಶಿಕ್ಷಣ ಇಲಾಖೆ, ಶಾಲೆ ಆರಂಭದ ಸಮಯಕ್ಕಿಂತ 15 ನಿಮಿಷ ಬೇಗ ಬರಬೇಕು ಮತ್ತು ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾಗಿ ಹಾಕುವಂತೆ ಸೂಚಿಸಿದೆ.   ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಶಿಕ್ಷಕರ ಅಶಿಸ್ತಿನಿಂದ ಮಕ್ಕಳ ಕಲಿಕಾ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು …

Read More »

ಉಮೇಶ್ ಕತ್ತಿ ನಿಧನದಿಂದ ತೀವ್ರ ಆಘಾತವಾಗಿದೆ :H.D.K.

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.   ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ …

Read More »

 ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ.: ಸಿಎಂ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ. ಅಕ್ಟೋಬರ್​ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿದ ಬಳಿಕ ಸರ್ವೋತ್ತಮ ಸೇವಾ‌ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ, ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.   …

Read More »