ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ …
Read More »ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ
ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …
Read More »ಸೌಮ್ಯಾ ರೆಡ್ಡಿ ಗಿಫ್ಟ್ ಪಾಲಿಟಿಕ್ಸ್ʼ :ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್ಪೋಸ್ಟ್ನಲ್ಲಿ ರಾಮಚಂದ್ರ ಕಾರು ಚಾಲಕ …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ?
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. …
Read More »ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ
ಬೆಂಗಳೂರು: ಲಂಡನ್ ಭಾಷಣದ ವೇಳೆ ರಾಹುಲ್ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ. ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …
Read More »ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ. ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ …
Read More »ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ
ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದನಿಧನ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ನಗದಲ್ಲಿನ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 1 ಮತದ ಅಂತರದಿಂದ ಗೆದ್ದಿದ್ದರು. 2008 ರಲ್ಲಿ ಎರಡನೇ ಬಾರಿ ಕೊಳ್ಳೇಗಾಲ …
Read More »ರಾಜ್ಯಕ್ಕೆ ಕೇಂದ್ರ ಕೊಟ್ಟಿದ್ದೆಷ್ಟು ಮೋದಿ ಅವರೇ: ಎಚ್‌ಡಿಕೆ ಪ್ರಶ್ನೆ
ಬೆಂಗಳೂರು: ಜಿಎಸ್‌ಟಿ ಸೇರಿ ರಾಜ್ಯದಿಂದ ಕೇಂದ್ರ ಸರಕಾರದ ಬೊಕ್ಕಸಕ್ಕೆ ತೆರಿಗೆ ಹಣ ಹರಿದು ಹೋಗುತ್ತಿದ್ದರೂ ರಾಜ್ಯಕ್ಕೆ ಕೊಟ್ಟಿದ್ದು ಎಷ್ಟು ಎಂಬುದು ರಾಜ್ಯಕ್ಕೆ ಬಂದಾಗ ಲೆಕ್ಕ ಕೊಡಿ ಮೋದಿ ಅವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಕೇಂದ್ರ ಸರಕಾರದ ಪಾಲಿಗೆ ಕರ್ನಾಟಕವು ಕಾಮಧೇನು. ಅದರ ಖಜಾನೆ ತುಂಬುವಲ್ಲಿ ನಮ್ಮದು ದೊಡ್ಡ ಪಾಲಿದೆ. ದುರದೃಷ್ಟವಶಾತ್, ದೇಶದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ರಾಜ್ಯಕ್ಕೆ ತೆರಿಗೆ, ಜಿಎಸ್‌ಟಿಯಲ್ಲಿ ಸಮರ್ಪಕ ಪಾಲು ಸಿಗುವುದಿಲ್ಲ. …
Read More »ವಿಧಾನಸೌಧಕ್ಕೆ ಪೇಶ್ವೆ ನಾಯಕ; ಬಿಜೆಪಿ ಉತ್ತರಿಸಲಿ -ಕುಮಾರಸ್ವಾಮಿ
ಬೆಂಗಳೂರು: ‘ವಿಧಾನಸೌಧದಲ್ಲಿ ಪೇಶ್ವೆ ವಂಶದ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ಬಿಜೆಪಿ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು, ತಾಕತ್ತು ತೋರಿಸುತ್ತಿಲ್ಲ ಏಕೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸರಣಿ ಟ್ವೀಟ್ ಮಾಡಿ, ‘ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ್ದ ಪೇಶ್ವೆಗಳ ವಂಶದ ವ್ಯಕ್ತಿಯನ್ನು ಸಿ.ಎಂ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂಬ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಬ್ರಾಹ್ಮಣ ಸಮೂಹವನ್ನು ನಿಂದಿಸಿಲ್ಲ. ಗರ್ಭಗುಡಿಯಲ್ಲಿ …
Read More »