ಬೆಂಗಳೂರು, (ಫೆಬ್ರವರಿ 03): ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ. ಇನ್ನು ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ …
Read More »ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ.
ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ …
Read More »ಭವಿಷ್ಯ ಹೇಳುತ್ತಿರುವ ಆರ್. ಅಶೋಕ ಬಳಿ ನಾನು ಕೂಡ ಭವಿಷ್ಯ ಕೇಳಲು ಹೋಗಿ ಬರ್ತೇನೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ನನಗೂ ಜ್ಯೋತಿಷ್ಯ ಶಾಸ್ತ್ರದ ಚಟವಿದೆ. ಆರ್. ಅಶೋಕ ಬೋರ್ಡ ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡು ತಾವೂ ಕೂಡ ಅವರ ಬಳಿ ಜ್ಯೋತಿಷ್ಯ ಕೇಳಿ ಬರುತ್ತೇನೆಂದು ಸಿಎಂ ಬದಲಾವಣೆ ಭವಿಷ್ಯ ನುಡಿದಿರುವ ವಿಪಕ್ಷ ನಾಯಕ ಆರ್. ಅಶೋಕ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದರು. ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ನೀಡಿರುವ ಹೇಳಿಕೆ ಟಾಂಗ್ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೂ ಜ್ಯೋತಿಷ್ಯ ಶಾಸ್ತ್ರದ …
Read More »‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.
ಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ I’m god ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. …
Read More »ಕುಸ್ತಿಕಥೆಯಲ್ಲಿ ರಾಜವರ್ಧನ್..ಫೆ.7ಕ್ಕೆ ‘ಗಜರಾಮ’ ರಿಲೀಸ್.
ಬೆಂಗಳೂರು: ಟ್ರೇಲರ್ ಹಾಗೂ ಹಾಡಿನ ಮೂಲಕ ಸದ್ದು ಮಾಡುತ್ತಿರುವ ಗಜರಾಮ ಸಿನಿಮಾ ಫೆಬ್ರವರಿ 7ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ನಟನೆ ಮೂಲಕ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆ ಚಿತ್ರತಂಡ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ನಟ ರಾಜವರ್ಧನ್ ಮಾತನಾಡಿ, …
Read More »ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ:C.M.
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು. ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ : ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು …
Read More »ಮಶೀನ್ ಟೂಲ್ ತಯಾರಿಕೆಯಲ್ಲಿ ರಾಜ್ಯದ ಸಾಧನೆ ದೊಡ್ಡದು: ಎಂ ಬಿ ಪಾಟೀಲ.
ಬೆಂಗಳೂರು: ದೇಶದ ಮಶೀನ್ ಟೂಲ್ ಉತ್ಪಾದನೆಯಲ್ಲಿ ರಾಜ್ಯವು ಶೇಕಡ 52ರಷ್ಟು ಪಾಲು ಹೊಂದಿದ್ದು, ತಯಾರಿಕೆ ವಲಯದಲ್ಲಿ ಕರ್ನಾಟಕವು ನಾವೀನ್ಯತೆ ಮತ್ತು ಉತ್ಕೃಷ್ಟತೆಗಳಿಗೆ ಇನ್ನೊಂದು ಹೆಸರಾಗಿದೆ. ಹೀಗಾಗಿ, ಸರಕಾರವು ಇವುಗಳ ಬಲವರ್ಧನೆಗೆ ನಿರ್ದಿಷ್ಟ ವಿಷನ್ ಗ್ರೂಪ್ ರಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಏರ್ಪಾಡಾಗಿರುವ ಮಶೀನ್ ಟೂಲ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಾಣಿಜ್ಯ ಪ್ರದರ್ಶನದ ಮೇಳ ಇಮ್ಟೆಕ್ಸ್-2025ರ …
Read More »ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ; ಸಿಎಂ ಭರವಸೆ
ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ …
Read More »ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.
ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
Read More »ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ
ಬೆಂಗಳೂರು: ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ …
Read More »