ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ …
Read More »ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.
ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
Read More »ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ
ಬೆಂಗಳೂರು: ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ …
Read More »ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ …
Read More »ಲಾಲ್ಬಾಗ್ ತರಕಾರಿ, ತೆಂಗಿನ ಗರಿಗಳ ಕೆತ್ತೆನೆ ಪ್ರದರ್ಶನ
ಬೆಂಗಳೂರು: ನಗರದ ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ 217ನೇ ಫಲಪುಷ್ಪ ಪ್ರದರ್ಶನದ ಅಂಗವಾಗಿ ಹಮ್ಮಿಕೊಂಡಿದ್ದ ಇಕೆಬಾನ, ಪುಪ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡನೆ, ಥಾಯ್ ಆರ್ಟ್ನ ಪೂರಕ ಕಲೆಗಳ ಪ್ರದರ್ಶನವನ್ನು ಬಹುಭಾಷಾ ನಟಿ ಪ್ರೇಮಾ ಶನಿವಾರ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಹೂವು, ಬಾಳೆಎಲೆ, ತೆಂಗಿನ ಗರಿ, ತರಕಾರಿಗಳಲ್ಲಿ ಬಗೆ ಬಗೆಯ ವಿನ್ಯಾಸದ ಕಲಾಕೃತಿಗಳನ್ನು ಮಾಡುವುದೆಂದರೆ ಇದೊಂದು ರೀತಿ ಧ್ಯಾನ ಇದ್ದಂತೆ ಎಂದು ಹೇಳಿದರು
Read More »ವೈದ್ಯೆಗೆ ವಂಚನೆ: ಐಶ್ವರ್ಯ ಗೌಡ ಸೇರಿ ನಾಲ್ವರ ವಿರುದ್ಧ ಮತ್ತೊಂದು ಎಫ್ಐಆರ್
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸುತ್ತಿದ್ದ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಡಾ.ಮಂಜುಳಾ ಪಾಟೀಲ್ ಎಂಬವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ …
Read More »ಬಿಬಿಎಂಪಿ ಮುಖ್ಯ ಇಂಜಿನಿಯರ್ ಕಚೇರಿ ಮೇಲೆ ಇಡಿ ದಾಳಿ,
ಬೆಂಗಳೂರು: ಕೊಳವೆ ಬಾವಿ ಕೊರೆಯುವ ಹಾಗೂ ನೀರು ಸಂಸ್ಕರಣಾ ಘಟಕಗಳ (ಆರ್.ಒ) ಸ್ಥಾಪನೆಯಲ್ಲಿ ಹಣಕಾಸು ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಡ್ಸನ್ ವೃತ್ತದ ಬಳಿಯಿರುವ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿರುವ ಚೀಫ್ ಇಂಜಿನಿಯರ್ ಕಚೇರಿಯ ಮೇಲೆ ಬೆಳಗ್ಗೆ 11 ಗಂಟೆಗೆ 7 ಜನರಿದ್ದ ಅಧಿಕಾರಿಗಳ ತಂಡ ದಾಳಿ ನಡೆಸಿ, ದಾಖಲಾತಿ ಪರಿಶೀಲನೆ …
Read More »ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು : ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು. ಬೇಡಿಕೆಗಳೇನು? ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಬೇಕು. ನಗರ ಪ್ರದೇಶದಲ್ಲಿ …
Read More »ನಾಲ್ಕು ಮಂತ್ರಿಗಳು ಒಂದೆಡೆ ಊಟಕ್ಕೆ ಸೇರಿದರೆ ಮಾಧ್ಯಮದವರಿಗೆ ಅದೊಂದು ಸುದ್ದಿಯೇ?C.M
ಬೆಂಗಳೂರು: ಪತ್ರಿಕಾ ಗೋಷ್ಠಿ ನಡೆಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಮೂಡ್ ನಲ್ಲಿದ್ದರೆ ಜೋಕ್ ಗಳನ್ನು ಕಟ್ ಮಾಡುತ್ತ ಮಾತಾಡುತ್ತಾರೆ. ಸತೀಶ್ ಜಾರಕಿಹೊಳಿ ಮನೆಗೆ ಅವರು ಹೊಸ ವರ್ಷದಂದು ಊಟಕ್ಕೆ ಹೋಗಿದ್ದು ಬಹಳ ಚರ್ಚೆಯಾಗುತ್ತಿದೆ. ಏನ್ಸಾರ್ ವಿಶೇಷ ಅಂತ ಕೇಳಿದರೆ, ಮಂತ್ರಿಗಳು ಶಾಸಕರು ಜೊತೆಯಾಗಿ ಊಟ ಮಾಡಿದರೆ ನಿಮಗೆ ಅದೊಂದು ಸುದ್ದಿಯೇ ಎಂದು ವಾಪಸ್ಸು ಪ್ರಶ್ನಿಸುತ್ತಾರೆ. ಉಳಿದವರು ಔತಣದಲ್ಲಿ ಯಾಕಿರಲಿಲ್ಲ ಅಂದರೆ, ಯಾರನ್ನು ಅವರು ಕರೆದಿದ್ದರೋ, ಅವರು ಮಾತ್ರ ಇದ್ದರು, ಆಹ್ವಾನ …
Read More »*ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೇಟ್ ದರ ಏರಿಕೆ ಮಾಡುವುದು ಅನಿವಾರ್ಯ ಎಂದ ಅಧ್ಯಕ್ಷರು ರಾಜು ಕಾಗೆ*
ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಇಲಾಕೆ ಸಚಿವರು ಎಲ್ಲ ಸಾಧಕ ಬಾದಕ ಗಳನ್ನು ಗಮನದಲ್ಲಿ ತೆಗೆದುಕೊಂಡು ಅಧಿಕಾರಿಗಳ ಒಂದುಚರಿಸಿ ಟಿಕಿಟ್ ದರ ಏರಿಕೆ ಬಗ್ಗೆ ತೆಗೆದುಕೊಂಡ ನಿರ್ಣಯ ಸರಿ ಇದೆ. ಮಹಿಳೆಯರಿಗಾಗಿ ನೀಡಿರುವ ಉಚಿತ ಸಾರಿಗೆ ವ್ಯವಸ್ಥೆ ಎಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಅನೇಕ ವರ್ಷಗಳಿಂದ ದೊರೆ ಏರಿಕೆ ಬಗ್ಗೆ ನಿರ್ಣಯ ಕೈಗೊಂಡಿಲ್ಲ ಇದು ಅನಿವಾರ್ಯವಾಗಿತ್ತು. ಎಂದು. ಕಾಗವಾಡ ಕ್ಷೇತ್ರ ಶಾಸಕರು ಹಾಗೂ ವಾಯುವ್ಯ ಸಾರಿಗೆ …
Read More »