Breaking News

ಬೆಂಗಳೂರು

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹೆರಿಗೆಗೆ ಹೋಗುವ ಶಿಕ್ಷಕಿಯರಿಗೆ 15 ದಿನ ಮುಂಚೆಯೇ ರಜೆ ಕೊಡಬೇಕು ಎಂಬ ನಿಯಮ ಜಾರಿ ಮಾಡುತ್ತಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸತೀಶ್ ಪ್ರಶ್ನೆ ಕೇಳಿದ್ರು. ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸರಿಯಾಗಿ ಕೊಡ್ತಿಲ್ಲ. ಬೇಗ ಹೆರಿಗೆಯಾದ ಶಿಕ್ಷಕಿಗೆ ರಜೆ ವಿಸ್ತರಣೆಯನ್ನ ಮಾಡಿ ಅಂತ ಹೇಳಿದ್ದರೂ ಕೂಡ ಯಲಬುರ್ಗಾದಲ್ಲಿ ಅಧಿಕಾರಿಗಳು ಮಾಡಿಲ್ಲ. ನಾವು ಮಾನವೀಯತೆ …

Read More »

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

ಬೆಂಗಳೂರು: ಮುಖ್ಯಮಂತ್ರಿಗಳು ಸದನದ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಸುನೀಲ್ ಕುಮಾರ್ (Sunil Kumar) ಅವರು ಒತ್ತಾಯಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಚಿವರು ಸದನದಲ್ಲಿ ಹಾಜರಿರುವಂತೆ ಎಚ್ಚರಿಕೆಯನ್ನು ಸರ್ಕಾರ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಇವತ್ತು 230 ಲಿಖಿತ ಪ್ರಶ್ನೆಗಳ ಪೈಕಿ 80 ಪ್ರಶ್ನೆಗಳಿಗೆ ಮಾತ್ರ ಸರ್ಕಾರ ಉತ್ತರ ಕೊಟ್ಟಿದೆ. ಇದು ಸಹಜವಾಗಿ ಸ್ಪೀಕರ್ ಅವರಿಗೆ ಬೇಸರ ತರಿಸಿದೆ. ಸರ್ಕಾರದ ನಿಲುವನ್ನು ಖಂಡಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪೀಕರ್ …

Read More »

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌

ಬೆಂಗಳೂರು: ಸೋಮವಾರ ರಾತ್ರಿ ಸಿಎಂ ಸಿದ್ದರಾಮಯ್ಯ  ತಮ್ಮ ಕಾವೇರಿ ನಿವಾಸದಲ್ಲಿ  ಸಚಿವರಿಗೆ ಡಿನ್ನರ್‌  ನೀಡಿದ್ದು 14 ಮಂದಿ ಭಾಗಿಯಾಗಿದ್ದಾರೆ. ಈ ಡಿನ್ನರ್ ಸಭೆಯಲ್ಲಿ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌  ಡಿನ್ನರ್, ಸಂಪುಟ ಪುನಾರಚನೆಗೆ ಹೆಚ್ಚಾಗುತ್ತಿರುವ ಒತ್ತಾಯದ ಮಧ್ಯೆ ಅಧಿವೇಶನ ನಡೆಯುತ್ತಿರುವಾಗ ಸಿಎಂ 14 ಸಚಿವರಿಗೆ …

Read More »

ರಾಜ್ಯದ 1-10 ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಶಾಲೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಅನುದಾನ ಬಿಡುಗಡೆ.!

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ‘ಕ್ಷೀರಭಾಗ್ಯ’ ಯೋಜನೆಯಡಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ನೀಡಲಾಗುವ ‘ಸಾಯಿ ಶ್ಯೂರ್’ ರಾಗಿ ಹೆಲ್ತ್ ಮಿಕ್ಸ್ ವಿತರಣೆಗಾಗಿ 865.66 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಜೂನ್-2025 ರಿಂದ …

Read More »

ಸ್ಮಶಾನ ಇಲ್ಲದ ಗ್ರಾಮಗಳಿಗೆ ಖಾಸಗಿ ಜಮೀನು ಖರೀದಿ: ಮೂರು ಪಟ್ಟು ದರ ನೀಡಲು ಸರಕಾರ ಸಿದ್ಧ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರಕಾರ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಪ್ರಭು ಚೌವ್ಹಾಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, 70 ವರ್ಷಗಳಿಂದ ಎಲ್ಲ ಸರಕಾರಗಳು ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ …

Read More »

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಯಾವಾಗ?: ಇಲ್ಲಿದೆ ಸದನದಲ್ಲಿ ಸಚಿವರು ಕೊಟ್ಟ ಉತ್ತರ!

ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯದ ಹಂತದಲ್ಲಿರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನ ಪರಿಷತ್ತಿನಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದ ಒಟ್ಟು 5,685 ಗ್ರಾಮ ಪಂಚಾಯಿತಿಗಳ ಅವಧಿಯು ಜನವರಿ, ಫೆಬ್ರವರಿ ಮತ್ತು ಮಾರ್ಚ್ 2026ರ ಒಳಗೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2026-31ರ ಸಾಲಿನ ಸಾರ್ವತ್ರಿಕ …

Read More »

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ  ನಡೆದಿದ್ದು, ಪತಿ  ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪವನ್ ಕಲ್ಯಾಣ್ ಕುಟುಂಬದವರಿಂದ ನಿರಂತರ ವರದಕ್ಷಿಣೆ ಕಿರುಕುಳ ಆರೋಪವನ್ನು ಶೃತಿ ಕುಟುಂಬಸ್ಥರು ಹೊರಿಸಿದ್ದಾರೆ. ವರದಕ್ಷಿಣೆ ಕಿರುಕುಳ ಹಿನ್ನೆಲೆ ಶೃತಿ ಹಾಗೂ ಪತಿ ಕುಟುಂಬಸ್ಥರ ನಡುವೆ ಕಲಹ …

Read More »

ಅಕ್ರಮ ಸಿಲಿಂಡರ್‌ ದಾಸ್ತಾನು 4 ಕೇಸ್‌ ದಾಖಲು

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್‌ನಿಂದ ಭಾರತದಲ್ಲಿ ಎಲ್‌ಪಿಜಿ   ಕೊರತೆ ಎದುರಾಗಿದೆ. ಅಕ್ರಮ ಸಿಲಿಂಡರ್‌ ದಾಸ್ತಾನು, ಬ್ಲಾಕ್‌ನಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್‌ ಮಾರಾಟ ಹಾವಳಿ ಹೆಚ್ಚಾಗುತ್ತಿದೆ. ಬೆಂಗಳೂರಲ್ಲಿ ಅಕ್ರಮ ಸಿಲಿಂಡರ್‌ ದಾಸ್ತಾನು ಮಾಡಿದ್ದಕ್ಕೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೀಣ್ಯ, RMC ಯಾರ್ಡ್, ಕೆಂಗೇರಿ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗಾಟಗಾರರು ಅಕ್ರಮವಾಗಿ ಸಿಲಿಂಡರ್‌ ದಾಸ್ತಾನು ಮಾಡಿದ್ದರು. ಬೆಂಗಳೂರಲ್ಲಿ ಎಲ್‌ಪಿಜಿ ಅಭಾವದಿಂದ ಹೋಟೆಲ್‌ ಉದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿದೆ. ಹಲವೆಡೆ …

Read More »

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

ರಾಮನಗರ: ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್‌ಗೆ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾರಾಣಿ ಭೇಟಿ ಮಾಡಿದ್ದಾರೆ‌. ಶಿವಕುಮಾ‌ರ್ ಅವರು ರೆಸಾರ್ಟ್‌ಗೆ ಬರುವುದಕ್ಕೆ ಮುಂಚೆಯೇ ವಿದ್ಯಾ ತಮ್ಮ ಬೆಂಬಲಿಗರೊಂದಿಗೆ ಬಂದು ಕಾಯುತ್ತಾ ಕುಳಿತಿದ್ದರು. ಡಿಸಿಎಂ ಬಂದು ಕಾರಿನಿಂದ ಇಳಿಯುತ್ತಿದ್ದಂತೆಯೇ ಸ್ಥಳೀಯ ಕಾಂಗ್ರೆಸ್ ನಾಯಕರು ಅವರನ್ನು ಮುತ್ತಿಕೊಂಡರು. ಇದೇ ವೇಳೆ, ಮುಖಂಡರೊಬ್ಬರು ವಿದ್ಯಾ ಅವರನ್ನು ಡಿಸಿಎಂ ಬಳಿ ಕರೆದು …

Read More »

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

ಬೆಂಗಳೂರು: ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್‌ ಗೆಳತಿಯನ್ನು ವಿವಾಹಿತ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ವರ್ತೂರಿನಲ್ಲಿ  ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. ಆರೋಪಿ ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿತ್ತು. ಆದರೆ ಮದುವೆಯಾಗಿರುವ ವಿಷಯ ಯುವತಿಗೆ ತಿಳಿದಿರಲಿಲ್ಲ. ಇದೀಗ ಈ ವಿಚಾರ ತಿಳಿದು ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ತಾರಕಕ್ಕೇರಿ ಆರೋಪಿ ವೈಯರ್‌ನಿಂದ …

Read More »