ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ …
Read More »ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ
ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‍ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕ ಸಿಂಗಂ ಅಂತಲೇ ಹೆಸರಾಗಿದ್ದ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. …
Read More »ಸಿಎಂ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ!
ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ವಹಿಸಿಕೊಂಡ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಆಗಲಿದೆ. ನಗರ ಪೊಲೀಸ್ ಆಯುಕ್ತ ಸ್ಥಾನಕ್ಕೇರಲು ನಾಲ್ವರು ಅಧಿಕಾರಿಗಳು ರೇಸ್ ನಲ್ಲಿದ್ದಾರೆ. ಆಗಸ್ಟ್ಗೆ ಪೊಲೀಸ್ ಆಯುಕ್ತರ ಅಧಿಕಾರ ಅವಧಿ ಅಂತ್ಯಗೊಳ್ಳಲಿದೆ. ಹೀಗಾಗಿ ಮುಂದಿನ ಪೊಲೀಸ್ ಆಯುಕ್ತರ ಹುದ್ದೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರತಾಪ್ ರೆಡ್ಡಿ, ಗುಪ್ತಚರ ವಿಭಾಗದ ಬಿ. ದಯಾನಂದ್, ಪೊಲೀಸ್ ತರಬೇತಿ ವಿಭಾಗದ ಅಮೃತ್ ಪೌಲ್, ರಾಜ್ಯ …
Read More »ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕರ ಸ್ವೀಕರಿಸಿರುವ ಬೆನ್ನಲ್ಲೇ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ನಿರೀಕ್ಷೆಗಳು ಗರಿಗೆದರಿವೆ. ಈ ನಡುವೆ ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ ಎನ್ನಲಾಗಿದೆ. ನಿನ್ನೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸಚಿವ …
Read More »ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …
Read More »ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣ ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್‍ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, …
Read More »ಮನೆ ಮುಂದೆ ನಿಲ್ಲಿಸಿದ ಬೈಕ್ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್..
ಬೆಂಗಳೂರು: ನೀವು ನಿಮ್ಮ ಬೈಕ್ನ್ನ ಮನೆ ಹೊರಗಡೆ ನಿಲ್ಲಿಸ್ತಿದ್ದೀರಾ..? ಹಾಗಾದ್ರೆ ಹುಷಾರ್ ಆಗಿರಿ. ಮನೆ ಮುಂದೆ ನಿಲ್ಲಿಸಿದ ಬೈಕ್ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್ ಒಂದು ಈಗ ನಗರದಲ್ಲಿ ಸಕ್ರಿಯವಾಗಿದೆ. ವೀರಣ್ಣ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ತಮ್ಮ ಬೈಕ್ನ್ನು ಮನೆಯ ಹೊರಗೆ ನಿಲ್ಲಿಸಿ ತಮ್ಮ ಅಪಾರ್ಟ್ಮೆಂಟ್ಗೆ ಹೋಗಿ ಬರೋದ್ರೊಳಗಾಗಿ ನಿಲ್ಲಿಸಿದ ಬೈಕ್ ನಾಪತ್ತೆಯಾಗಿದೆ. ಒಳಗಡೆ ಹೋಗಿ ಬರೋದ್ರೊಳಗಾಗಿ ಬೈಕ್ ಕಾಣದ್ದನ್ನ ಕಂಡು ಮಾಲೀಕ ಅರೆ ಕ್ಷಣ ಗಲಿಬಿಲಿಗೊಂಡಿದ್ದಾನೆ. ತದನಂತರ ಸಿಸಿಟಿವಿ …
Read More »ಹೆಚ್ಚಾಯ್ತು ರೌಡಿಶೀಟರ್ಗಳ ಹಾವಳಿ; ಹಾಡಹಗಲೇ ನಡೆಯುವ ಕೊಲೆಗಳಿಗೆ ಬೆಚ್ಚಿಬಿದ್ದ ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿದ್ದು ಬೆಂಗಳೂರು ಬೆಚ್ಚಿಬಿದ್ದಿದೆ. ಒಂದೆಡೆ ಪೊಲೀಸರು ದಿಢೀರ್ ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳ ಪರೇಡ್ ನಡೆಸಿದ್ರೂ ಕ್ರೈಮ್ಗಳು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಅದ್ರಲ್ಲೂ ಲಾಕ್ಡೌನ್ ಸಡಿಲಿಕೆಯಾಗಿ ಅನ್ಲಾಕ್ ಜಾರಿಯಾದ ಮೇಲೆ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಕ್ರೈಂಗಳು.. 1. ಜು. 19- ಯೂನಿಬ್ಯಾಂಕ್ ಒಳಗೆ ರೌಡಿಶೀಟರ್ ಬಬ್ಲಿ ಬರ್ಬರ ಹತ್ಯೆ. 2..ಜು. 2- ರಂದು ಹಾಡಹಗಲೇ ಬನಶಂಕರಿ …
Read More »ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಬೆಂಗಳೂರು: “ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ಜೆಡಿಎಸ್ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ: ಇದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೀತಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ …
Read More »ಬೆಂಗಳೂರು ಏರ್ಪೋರ್ಟ್ಲ್ಲಿ ಆತಂಕ ಸೃಷ್ಟಿಸಿದ ನಕಲಿ ಗನ್ಗಳು
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಮ್ಮಿ ಗನ್ಗಳು ಕೆಲಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಿಲ್ದಾಣದ ಕಾರ್ಗೋ ಟರ್ಮಿನಲ್‍ನಲ್ಲಿ ನಡೆದಿದೆ. ವಿದೇಶದಿಂದ ಬಂದ ಪಾರ್ಸಲ್ ಕಂಡು ಕೆಲ ಕಾಲ ನಿಲ್ದಾಣದ ಸಿಬ್ಬಂದಿಗಳು ಗಾಬರಿಗೊಳಗಾಗಿದ್ದಾರೆ. ನಿನ್ನೆ ಇಸ್ತಾಂಬುಲ್ನಿಂದ ಕಾರ್ಗೋ ಟರ್ಮಿನಲ್ಗೆ ಪಾರ್ಸ್ಲ್ ಬಂದಿದ್ದು, ಅದನ್ನು ವರ್ಗಾವಣೆ ಮಾಡುವ ವೇಳೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿಬ್ಬಂದಿಗಳು, ತಪಾಸಣೆ ನಡೆಸಿದಾಗ ಗನ್ಗಳಿರುವುದು ಪತ್ತೆಯಾಗಿದೆ. ತಕ್ಷಣ ಗಾಬರಿಗೊಂಡ ಸಿಬ್ಬಂದಿಗಳು ಗನ್ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ …
Read More »
Laxmi News 24×7