ಬೆಂಗಳೂರು: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಭದ್ರಪ್ಪ ಲೇಔಟ್ನಲ್ಲಿ ಸಂಭವಿಸಿದೆ. ಓರ್ವ ಪುರುಷ(30) ಮತ್ತು ಓರ್ವ ಮಹಿಳೆ(40) ಮೃತ ಪಟ್ಟಿದ್ದಾರೆ. ರೈಲು ಬರುವುದು ಗಮನಿಸದೆ ಹಳಿ ದಾಟಲು ಯತ್ನಿಸಿದ್ದು ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೈಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ನಲ್ಲಿ ಘಟನೆ ನಡೆದಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪೊಲೀಸರು …
Read More »ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆ ಎಂದರು. ಇನ್ನು ಬಿಎಸ್ವೈಗೆ ಹೈಕಮಾಂಡ್ನಿಂದ ಸಂದೇಶ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಇವತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಊರಲ್ಲಿಲ್ಲ ಅಂತ ಪರೋಕ್ಷವಾಗಿ ಇಂದು ಸಿಎಂ ಬದಲಾಗಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದರು. ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ ನೀಡಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಕೂಡ ಮಾಡಿಲ್ಲ. ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಾವು ಸಮರ್ಥವಾಗಿ ಕೊವಿಡ್ ನಿರ್ವಹಣೆ ಮಾಡಿದ್ದೇವೆ. ಎರಡೂವರೆ ಕೋಟಿ ಜನರಿಗೆ ನಾವು ಸಹಾಯ ಮಾಡಿದ್ದೇವೆ. ಆಕ್ಸಿಜನ್ ಕೊರತೆಯಿಂದ ಯಾರೂ ಮೃತಪಟ್ಟಿಲ್ಲ ಅಂತಾರೆ. ಕೇಂದ್ರದ ಸಚಿವರೇ ಸಂಸತ್ನಲ್ಲಿ ಹೀಗೆ ಉತ್ತರ ಕೊಡುತ್ತಾರೆ. ಆದರೆ ಇಲ್ಲಿ ಮೃತರ ಕುಟುಂಬಕ್ಕೆ ಸಿಎಂ ಏಕೆ ಪರಿಹಾರ ಕೊಟ್ಟರು? ಎಂದು ಕೆಪಿಸಿಸಿ ಅಧ್ಯಕ್ಷ ಪ್ರಶ್ನಿಸಿದ್ದಾರೆ. ಕಳೆದ ವರ್ಷ ಮನೆ ಕಳೆದುಕೊಂಡವರಿಗೇ ಪರಿಹಾರ ಸಿಕ್ಕಿಲ್ಲ. ಪರಿಹಾರ ನೀಡಿಲ್ಲ ಎಂದ ಮೇಲೆ ಸರ್ಕಾರ ಏಕೆ ನಡೆಸಬೇಕು. ಬಿಜೆಪಿಗೆ ಜನರ ಸೇವೆ ಮಾಡಲು ಆಗಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನೆರೆ ವೇಳೆ ಹಿಂದೆ ಪ್ರಧಾನಿಗಳು ಬೇರೆ ರಾಜ್ಯಕ್ಕೆ ಹೋಗಿದ್ರು. ಆದರೆ ನಮ್ಮ ರಾಜ್ಯಕ್ಕೆ ಮಾತ್ರ ಪ್ರಧಾನಿ ಮೋದಿ ಬರಲಿಲ್ಲ. ಪ್ರಧಾನಿಯಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆ ಎಂದರು. ಇನ್ನು ಬಿಎಸ್ವೈಗೆ ಹೈಕಮಾಂಡ್ನಿಂದ ಸಂದೇಶ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಇವತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಊರಲ್ಲಿಲ್ಲ ಅಂತ ಪರೋಕ್ಷವಾಗಿ ಇಂದು ಸಿಎಂ ಬದಲಾಗಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದರು. ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ …
Read More »ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ
ಬೆಂಗಳೂರು: ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಶ್ರೀಗಳು, ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಗಿಗಳನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ. “ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ …
Read More »ರಾಜೀನಾಮೆ ನೀಡುವವರೆಗೂ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್‌ನಿಂದ ಮೊಟ್ಟೆ ಕೊಡುವ ಅಭಿಯಾನ!
ಬೆಂಗಳೂರು,: “ರಾಜ್ಯದಲ್ಲಿ ಅಪೌಷ್ಠಿಕತೆ ನೀಗಿಸಲು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುವ ಮೊಟ್ಟೆಯಲ್ಲೂ ದುಡ್ಡು ಮಾಡಲು ಅಮಾನವೀಯ ಹೆಜ್ಜೆ ಇಟ್ಟುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಪ್ರಕರಣದ ತನಿಖೆಯಾಗಬೇಕು’ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕಿಯರು ಜಂಟಿ ಸುದ್ದಿಗೋಷ್ಠಿ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿದರು. ಮಾಜಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ …
Read More »ಮೊಟ್ಟೆಗೆ ಟೆಂಡರ್ ಕರೆದಿಲ್ಲ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು,
ಬೆಂಗಳೂರು, ಜು. 24: “ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ” ಎಂದು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಅವರು, “ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »10 ನಿಮಿಷಕ್ಕಿಂತ ಹೆಚ್ಚು ಟೈಂ ಒಂದೇ ಕಡೆ ನಿಲ್ಲೋವಂತಿಲ್ಲ – ಹೊಯ್ಸಳ ಪೊಲೀಸರಿಗೆ ಖಡಕ್ ಎಚ್ಚರಿಕೆ
ಬೆಂಗಳೂರು: ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೊದಲು ಅಯಾಯ ಪೊಲೀಸ್ ಠಾಣೆಯಿಂದಲೇ ಹೊಯ್ಸಳ ಬೀಟ್ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸದ್ಯ ಕಮಿಷನರ್ ಕಚೇರಿಯ ಕಮಾಂಡೆಂಟ್ ಸೆಂಟರ್ ನಿಂದ ಹೊಯ್ಸಳ ಪೊಲೀಸರ ಕೆಲಸದ ಬಗ್ಗೆ ನಿಗಾ …
Read More »ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ …
Read More »ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕವರ್ ಕಾಣಿಕೆಯನ್ನ ತಿರಸ್ಕರಿಸಿದ್ದೆ: ಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …
Read More »ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಪ್ರೊಟೆಸ್ಟ್..!
ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಜೊಲ್ಲೆ ಪ್ರತಿಭಟನೆ ನೀಡಬೇಕೆಂದು ಬೀದಿಯಲ್ಲಿ ನಿಂತು ಒತ್ತಾಯ ಹಾಕಿದ್ರು. ಆ ಬಳಿಕ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಘಟನೆ ಏನು..? ಅಂಗನವಾಡಿಗಳಲ್ಲಿ ಉಚಿತವಾಗಿ ಮೊಟ್ಟೆ ಹಾಗೂ ಆಹಾರ ಪದಾರ್ಥಗಳನ್ನ ನೀಡಲಾಗುತ್ತದೆ. ಅದು ಮಕ್ಕಳು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ. ಆದ್ರೆ ಈ ಆಹಾರವೂ ಸಚಿವರ ಮಡಿಲಿಗೆ ಸೇರ್ತಾ ಇದೆ ಅನ್ನೋದೆ …
Read More »ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ. ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು. ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ …
Read More »