Breaking News

ಬೆಂಗಳೂರು

ನಾಲ್ಕು ಮಂತ್ರಿಗಳು ಒಂದೆಡೆ ಊಟಕ್ಕೆ ಸೇರಿದರೆ ಮಾಧ್ಯಮದವರಿಗೆ ಅದೊಂದು ಸುದ್ದಿಯೇ?C.M

ಬೆಂಗಳೂರು: ಪತ್ರಿಕಾ ಗೋಷ್ಠಿ ನಡೆಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಮೂಡ್ ನಲ್ಲಿದ್ದರೆ ಜೋಕ್ ಗಳನ್ನು ಕಟ್ ಮಾಡುತ್ತ ಮಾತಾಡುತ್ತಾರೆ. ಸತೀಶ್ ಜಾರಕಿಹೊಳಿ ಮನೆಗೆ ಅವರು ಹೊಸ ವರ್ಷದಂದು ಊಟಕ್ಕೆ ಹೋಗಿದ್ದು ಬಹಳ ಚರ್ಚೆಯಾಗುತ್ತಿದೆ. ಏನ್ಸಾರ್ ವಿಶೇಷ ಅಂತ ಕೇಳಿದರೆ, ಮಂತ್ರಿಗಳು ಶಾಸಕರು ಜೊತೆಯಾಗಿ ಊಟ ಮಾಡಿದರೆ ನಿಮಗೆ ಅದೊಂದು ಸುದ್ದಿಯೇ ಎಂದು ವಾಪಸ್ಸು ಪ್ರಶ್ನಿಸುತ್ತಾರೆ. ಉಳಿದವರು ಔತಣದಲ್ಲಿ ಯಾಕಿರಲಿಲ್ಲ ಅಂದರೆ, ಯಾರನ್ನು ಅವರು ಕರೆದಿದ್ದರೋ, ಅವರು ಮಾತ್ರ ಇದ್ದರು, ಆಹ್ವಾನ …

Read More »

*ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೇಟ್ ದರ ಏರಿಕೆ ಮಾಡುವುದು ಅನಿವಾರ್ಯ ಎಂದ ಅಧ್ಯಕ್ಷರು ರಾಜು ಕಾಗೆ*

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಇಲಾಕೆ ಸಚಿವರು ಎಲ್ಲ ಸಾಧಕ ಬಾದಕ ಗಳನ್ನು ಗಮನದಲ್ಲಿ ತೆಗೆದುಕೊಂಡು ಅಧಿಕಾರಿಗಳ ಒಂದುಚರಿಸಿ ಟಿಕಿಟ್ ದರ ಏರಿಕೆ ಬಗ್ಗೆ ತೆಗೆದುಕೊಂಡ ನಿರ್ಣಯ ಸರಿ ಇದೆ. ಮಹಿಳೆಯರಿಗಾಗಿ ನೀಡಿರುವ ಉಚಿತ ಸಾರಿಗೆ ವ್ಯವಸ್ಥೆ ಎಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಅನೇಕ ವರ್ಷಗಳಿಂದ ದೊರೆ ಏರಿಕೆ ಬಗ್ಗೆ ನಿರ್ಣಯ ಕೈಗೊಂಡಿಲ್ಲ ಇದು ಅನಿವಾರ್ಯವಾಗಿತ್ತು. ಎಂದು. ಕಾಗವಾಡ ಕ್ಷೇತ್ರ ಶಾಸಕರು ಹಾಗೂ ವಾಯುವ್ಯ ಸಾರಿಗೆ …

Read More »

ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ

ಬಂಟ್ವಾಳ: ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್​ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್​ನಲ್ಲಿ ಆಗಮಿಸಿದ ತಂಡ …

Read More »

ಹೆಬ್ಬಾಳಕರ್‌ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಸತೀಶ್ ಜಾರಕಿಹೊಳಿ

ಹೆಬ್ಬಾಳಕರ್‌ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ನನ್ನ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆಗಾಗಿ ಕಳೆದ ಆರು ತಿಂಗಳ ಹಿಂದೆಯೇ ಎಲ್ಲರೂ ಸಹಮತದಿಂದ ಒಂದೇ ಹೆಸರು ಕಳಿಸಿದ್ದೇವೆ. ಶೀಘ್ರವೇ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಶತಮಾನೋತ್ಸವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು. ಎಲ್ಲರೂ ತಮ್ಮ ತಮ್ಮ ಕೆಲಸ ಮಾಡಿದ್ದಾರೆ. ನಮಗೆ ಜನರನ್ನು ಸೇರಿಸುವ …

Read More »

ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.  ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. …

Read More »

ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ನಿಧನ; ತೀವ್ರ ಸಂತಾಪ ವ್ಯಕ್ತಪಡಿಸಿದ ಕೆ.ಎಫ್.ಎಂ.ಎ

ಬೆಂಗಳೂರು : ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದ್ದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ. …

Read More »

ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಆರೋಪ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು;ಹೈಕೋರ್ಟ್

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್​, ಸುಮಾರು 103 ಎಕರೆ ಅರಣ್ಯ ಭೂಮಿಯ ಪೋಡಿಗೆ ಶಿಫಾರಸು ಮಾಡಿದ್ದ ಭೂ ದಾಖಲೆಗಳ ಜಂಟಿ ನಿರ್ದೇಶಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಜಂಟಿ ನಿರ್ದೇಶಕ ಇ.ಪ್ರಕಾಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ …

Read More »

ಸರ್ಕಾರದ ಅನುಮತಿ ಸಿಕ್ಕ ನಂತರ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಪರೀ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ನಿಗಮಗಳು ಸೇರಿದಂತೆ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಕೋರಿಕೆ ಸಲ್ಲಿಕೆಯಾಗಿದೆ. ಸರ್ಕಾರದ ಅಂತಿಮ ಒಪ್ಪಿಗೆ ದೊರೆತ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, …

Read More »

ಬೆಂಗಳೂರು ಪ್ರೆಸ್​ ಕ್ಲಬ್​​ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನ ಆಯ್ಕೆ ಮಾಡಲಾಗಿದೆ.

ಬೆಂಗಳೂರು : ಪ್ರತಿ ವರ್ಷ ಕೊಡಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು …

Read More »

ಬಸ್ ಪ್ರಯಾಣ ದರ ಹೆಚ್ಚಳ;ಹೊಸ ವರ್ಷದ ಮರು ದಿನವೇ ಶಾಕಿಂಗ್ ನ್ಯೂಸ್‌.

ಬೆಂಗಳೂರು: ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ನ್ಯೂಸ್‌ ಕೊಟ್ಟಿದೆ. ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Read More »