ಬೆಂಗಳೂರು: 15ನೇ ಹಣಕಾಸು ಆಯೋಗ 5,495 ಕೋಟಿ ರೂ ವಿಶೇಷ ಅನುದಾನ ಕೊಡಬೇಕು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ. ಇದರ ಬಗ್ಗೆ ಕೇಳೋಕೆ ಸಿಎಂ ಯಡಿಯೂರಪ್ಪಗೆ ದಮ್ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬರಬೇಕಿದ್ದ 5,495 …
Read More »ಕರ್ನಾಟಕ ಸರ್ಕಾರದಿಂದ ಮಹತ್ತರ ಹೆಜ್ಜೆ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 1ರಷ್ಟು ಮೀಸಲಾತಿ
ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯದಲ್ಲಿ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಬೇಕಾದ ಯಾವುದೇ ಸೇವೆ ಅಥವಾ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (transgenders ) ಒಂದು ಶೇಕಡಾ ಮೀಸಲಾತಿ ನೀಡುವಂತೆ ಅಧಿಸೂಚನೆ ಹೊರಡಿಸಿದೆ. ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಈ ಆಂತರಿಕ ಮೀಸಲಾತಿ ಲಭ್ಯವಿರುತ್ತದೆ. 1977 ರ ಕರ್ನಾಟಕ ನಾಗರಿಕ ಸೇವೆಗಳ …
Read More »IMA: ಐಎಂಎ ಪ್ರಕರಣ- ಮಾಜಿ ಸಚಿವ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದ ಸರ್ಕಾರ
ಬೆಂಗಳೂರು: ಐಎಂಎ ಪ್ರಕರಣದಲ್ಲಿ ಕೇಳಿಬಂದಿದ್ದ ಪ್ರಮುಖ ಹೆಸರುಗಳಲ್ಲಿ ಮಾಜಿ ಸಚಿವ ರೋಷನ್ ಬೇಗ್ ಕೂಡ ಒಬ್ಬರು. ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ 2020ರ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ …
Read More »ಸಬ್ ಇನ್ಸ್‌ಪೆಕ್ಟರ್ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್ ನೋಡಿ ಪರಾರಿ ; ಮೂವರ ಬಂಧನ
ಬೆಂಗಳೂರು, : ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ದರೋಡೆಕೋರರು ಫೀಲ್ಡ್‌ಗೆ ಇಳಿದಿದ್ದಾರೆ. ರಾತ್ರಿ ವೇಳೆ ಮನೆಗೆ ಹೋಗುತ್ತಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಪಿಎಸ್‌ಐ ಧರಿಸಿದ್ದ ಪೊಲೀಸ್ ಹೆಲ್ಮೆಟ್ ನೋಡಿ ಪರಾರಿಯಾಗಿದ್ದ ಮೂವರು ದರೋಡೆಕೋರರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರವಿಕುಮಾರ್, ಬಾಲು ಮತ್ತು ಅಶೀತ್ ಗೌಡ ಬಂಧಿತ ಆರೋಪಿಗಳು. ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಚ್.ಎಲ್. ಕೃಷ್ಣ ಜು. 3 ರಂದು …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಅಂತಿಮ ತನಿಖಾ ವರದಿ ಸಿದ್ಧಪಡಿಸಿದ ಎಸ್‌ಐಟಿ
ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್ಗೆ ಎಸ್‌ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ಈ ಬೆಳವಣಿಗೆ ನಡುವಲ್ಲೇ ಜಾರಕಿಹೊಳಿ ಹಾಗೂ ಗೋಕಾಕ್ …
Read More »ಯೆಸ್ ಬ್ಯಾಂಕ್‌ಗೆ ಬರೋಬ್ಬರಿ 712 ಕೋಟಿ ರೂ ವಂಚನೆ; 11 ಮಂದಿ ವಿರುದ್ಧ ಎಫ್‌ಐಆರ್
ಬೆಂಗಳೂರು, ಜುಲೈ 06: ಯೆಸ್ ಬ್ಯಾಂಕ್‌ಗೆ 712 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣದಲ್ಲಿ ಹನ್ನೊಂದು ಮಂದಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯೆಸ್ ಬ್ಯಾಂಕ್‌ನಿಂದ ಬರೋಬ್ಬರಿ 712 ಕೋಟಿ ರೂಪಾಯಿ ಸಾಲ ಪಡೆದ ಆರೋಪಿಗಳು ಸಾಲ ಹಿಂತಿರುಗಿಸಿರಲಿಲ್ಲ. ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಯಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಮಂಗಳವಾರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ …
Read More »ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ: ಕಂದಾಯ ಸಚಿವ ಆರ್ ಅಶೋಕ್
ಬೆಂಗಳೂರು, ಜು. 05: “ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿಲ್ಲ, ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ಒಂದು ಸಾವಿರ ಜನರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. “ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. …
Read More »ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಸಿಎಂ ಭರವಸೆ
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜಯರಾಜ್ ನೇತೃತ್ವದ ನಿಯೋಗವು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಚಿತ್ರ ಮಂದಿರಗಳನ್ನು ತೆರೆಯಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದೆ. ಈ ವೇಳೆ ಚಿತ್ರಮಂದಿರಗಳನ್ನು ಮುಂದಿನ ವಾರ ತೆರೆಯಲು ಸಿಎಂ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಅಲ್ಲದೆ ಒಳಾಂಗಣ ಚಿತ್ರೀಕರಣಕ್ಕೂ ಅನುಮತಿ ಕೊಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿರುವ ಸಿಎಂ ಷರತ್ತು ಬದ್ಧ ಅನುಮತಿಗೆ …
Read More »ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …
Read More »ನಲಪಾಡ್‌ಗೂ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ : ಹುದ್ದೆ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷಗಿರಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಮೇಲುಗೈ ಸಾಧಿಸಿದ್ದು, ಮುಂದಿನ ಜನವರಿಯಲ್ಲಿ ಮಹಮದ್ ನಲಪಾಡ್‌ಗೆ ಪಟ್ಟ ಸಿಗಲಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿದ್ದು, ರಕ್ಷಾ ರಾಮಯ್ಯ 2022ರ ಜ. 31ರ ವರೆಗೆ ಅಧ್ಯಕ್ಷರಾಗಿರಲಿದ್ದು, ಅನಂತರ ನಲಪಾಡ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ವಾರದ ಹಿಂದೆ ರಾಜಿ ಸಂಧಾನ ಏರ್ಪಟ್ಟು ಡಿಸೆಂಬರ್‌ವರೆಗೆ ರಕ್ಷಾ ರಾಮಯ್ಯ …
Read More »