Breaking News

ಬೆಂಗಳೂರು

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್​ವೈ ಚಾಲನೆ

ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್​ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.

Read More »

ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. ಸುರಕ್ಷತೆ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು 17 ಅಂಶಗಳನ್ನೊಳಗೊಂಡ ಮಧ್ಯಂತರ ವರದಿಯನ್ನು ತಜ್ಞರ ಕಾರ್ಯಪಡೆ ಸರ್ಕಾರಕ್ಕೆ ಸಲ್ಲಿಸಿದೆ. ದೀರ್ಘಾವಧಿ ಶಾಲೆಗೆ ಮಕ್ಕಳು ಹೋಗಲು ಸಾಧ್ಯವಾಗದಿದ್ದರೆ ಶೈಕ್ಷಣಿಕವಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಸುರಕ್ಷತೆ ಕ್ರಮಗಳೊಂದಿಗೆ ಶಾಲೆ ಆರಂಭಿಸಬಹುದು. ಸೋಂಕಿನ …

Read More »

ಸಚಿವ ಮುರುಗೇಶ್ ನಿರಾಣಿಗೆ ಬಂಪರ್ ಆಫರ್..!

ಬೆಂಗಳೂರು,ಜೂ.20- ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿ ಹೊರಹೊಮ್ಮುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಸದ್ಯದಲ್ಲೇ ಮಹತ್ವದ ಹುದ್ದೆ ಲಭಿಸಲಿದೆ ಎನ್ನಲಾಗುತ್ತಿದೆ.ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ವರಿಷ್ಠರು ಕಳೆದ ಎರಡು ತಿಂಗಳಿನಿಂದ ಮುರುಗೇಶ್ ನಿರಾಣಿ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಸಂಘಪರಿವಾರದ ಪ್ರಮುಖರ …

Read More »

ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಅಧಿಸೂಚನೆ ಪ್ರಕಟ

ಬೆಂಗಳೂರು, ಜೂನ್ 19: ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್‌ ಘೋಷಣೆಯಾಗುತ್ತಿದ್ದಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ 21ರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಎಲ್ಲ ಸಿಬ್ಬಂದಿ ಸಂಪೂರ್ಣವಾಗಿ ಹಾಜರಾಗಲು ಆದೇಶಿಸಲಾಗಿದೆ. ಉಳಿದ ಇಲಾಖೆಗಳ ಎಲ್ಲ ಗ್ರೂಪ್ ಎ ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ …

Read More »

ದಿಗ್ಗಜನಿಲ್ಲದ SRS ಟ್ರಾವೆಲ್ಸ್ ವಾರಸುದಾರನಿಲ್ಲದೆ ಎದುರಾಯ್ತು ಸಂಕಷ್ಟ?

ಬೆಂಗಳೂರು, ಜೂನ್ 20: ಏಷ್ಯಾ ಖಂಡದಲ್ಲಿಯೇ ಅತಿ ದೂರ ಪ್ರಯಾಣ ಸೇವೆ ಒದಗಿಸಿದ ಹೆಮ್ಮೆಯ ಸಂಸ್ಥೆ ಒಬ್ಬ ಕನ್ನಡಿಗ ಕಟ್ಟಿದ ಎಸ್‌ಆರ್‌ಎಸ್‌ ಟ್ರಾವೆಲ್ಸ್ ದು. ದಕ್ಷಿಣ ಭಾರತದ ದೈತ್ಯ ಸಾರಿಗೆ ಸೇವೆಯ ಕಂಪನಿ ಎಸ್‌ಆರ್‌ಎಸ್‌. ಸಾಮಾನ್ಯ ಸೇವೆಯಿಂದ ಐಶರಾಮಿ ಸೇವೆ ಒದಗಿಸುವ ಎಸ್‌ಆರ್‌ಎಸ್ ಟ್ರಾವೆಲ್ಸ್ ದಿಗ್ಗಜ ಕಳೆದುಕೊಂಡ ಬಳಿಕ ವಾರಸುದಾರನಿಲ್ಲದೇ ಅನಾಥವಾಗುವ ಹಾದಿ ಹಿಡಿದಿದೆ. ಎಸ್‌ಆರ್‌ಎಸ್‌ ದೈತ್ಯ ಕಂಪನಿ ಹುಟ್ಟು ಹಾಕಿದ ಮಾಗಡಿ ಮೂಲದ ಕೆ.ಟಿ ರಾಜಶೇಖರ್ ಅವರನ್ನು ಕೊರೊನಾ …

Read More »

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯ

ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆಯಂಡ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆಯ ನಡೆಗೆ ಖಂಡನೆ ವ್ಯಕ್ತವಾಗಿದೆ. ಸಂಸ್ಥೆಯು ಆನ್‌ಲೈನ್ ಮೂಲಕ ಇದೇ 22ರಿಂದ 6 ವಿದೇಶಿ ಭಾಷೆಗಳು, 6 ದೇಶಿಯ ಭಾಷೆಗಳ ಕಲಿಕಾ ತರಬೇತಿಯನ್ನು ಪ್ರಾರಂಭಿಸುತ್ತಿದೆ. ಇದರಲ್ಲಿ ಸಂಸತ್ತಿನ ಸದಸ್ಯರು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವಿದೇಶಿ ಭಾಷೆಗಳಾದ ಫ್ರೆಂಚ್, ಜರ್ಮನ್, ಜಪಾನೀಸ್, …

Read More »

ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್

ಪಣಜಿ : ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೆಯೇ ಬಿಜೆಪಿಗೆ ಸೇರಿರುವ 10 ಜನ ಶಾಸಕರಿಗೆ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಗೋವಾದ ಮಡಗಾಂವ ಹಾಗೂ ಪಣಜಿ ಸಮೀಪದ ಸಂತಾಕ್ರೂಜ್‍ನಲ್ಲಿ ಉಚಿತ ಸಸಿ ವಿತರಿಸಿದ ನಂತರ ಸುದ್ಧಿಗಾರರಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು. ಕಾಂಗ್ರೇಸ್ ಪಕ್ಷದಿಂದ ಬಿಜೆಪಿ ಸೇರಿರುವ …

Read More »

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ …

Read More »

‘ನಿನ್ನ ಮೇಲೆ ಯಾರು ಕೇಸ್ ಹಾಕ್ತಾರೋ?’ ಅಶೋಕ್, ಸವದಿಗೆ ಸಿಎಂ ಪಾಠ ಹೇಗಿತ್ತು ಗೊತ್ತಾ..?

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಕುರಿತು ಇಂದು ಸುದ್ದಿಗೋಷ್ಠಿ ಮುಗಿಸಿ ಹೊರಡುವ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪಾಠ ಮಾಡಿದ ವಿಶೇಷ ಸನ್ನಿವೇಶ ನಡೆಯಿತು. ಈ ವೇಳೆ ಸಿಎಂ ಬಿಎಸ್​ವೈ ಜಾಲಿ ಮೂಡ್​​ನಲ್ಲಿದ್ದಂತೆ ಕಂಡುಬಂದರು.. ಸಿಎಂ ಬಿಎಸ್​ವೈ, ಆರ್ ಅಶೋಕ್ ಹಾಗೂ ಸವದಿ ನಡುವಿನ ಮಾತುಕತೆ ಹೀಗಿತ್ತು.. ಸಿಎಂ :- ಅಶೋಕ್ ಎಲ್ಲಿಗೆ ಹೋಗ್ತಾಯಿದ್ಯಾ?. ಅಶೋಕ್ :- ಸಾರ್ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »