Breaking News

ಬೆಂಗಳೂರು

ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ …

Read More »

‘ನಿನ್ನ ಮೇಲೆ ಯಾರು ಕೇಸ್ ಹಾಕ್ತಾರೋ?’ ಅಶೋಕ್, ಸವದಿಗೆ ಸಿಎಂ ಪಾಠ ಹೇಗಿತ್ತು ಗೊತ್ತಾ..?

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಕುರಿತು ಇಂದು ಸುದ್ದಿಗೋಷ್ಠಿ ಮುಗಿಸಿ ಹೊರಡುವ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪಾಠ ಮಾಡಿದ ವಿಶೇಷ ಸನ್ನಿವೇಶ ನಡೆಯಿತು. ಈ ವೇಳೆ ಸಿಎಂ ಬಿಎಸ್​ವೈ ಜಾಲಿ ಮೂಡ್​​ನಲ್ಲಿದ್ದಂತೆ ಕಂಡುಬಂದರು.. ಸಿಎಂ ಬಿಎಸ್​ವೈ, ಆರ್ ಅಶೋಕ್ ಹಾಗೂ ಸವದಿ ನಡುವಿನ ಮಾತುಕತೆ ಹೀಗಿತ್ತು.. ಸಿಎಂ :- ಅಶೋಕ್ ಎಲ್ಲಿಗೆ ಹೋಗ್ತಾಯಿದ್ಯಾ?. ಅಶೋಕ್ :- ಸಾರ್ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »

‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ. ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ …

Read More »

ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, …

Read More »

ದೆಹಲಿಗೆ ಬರುವಂತೆ BSYಗೆ ವರಿಷ್ಠರ ಬುಲಾವ್

ಬೆಂಗಳೂರು,ಜೂ.19-ಮೇಲ್ನೋಟಕ್ಕೆ ಪರಿಸ್ಥಿತಿ ಕೊಂಚ ಸುಧಾರಿಸಿದೆ ಎಂದು ಹೇಳಲಾಗುತ್ತಿದ್ದರೂ ನಾಯಕತ್ವ ಕುರಿತಂತೆ ಎದ್ದಿರುವ ವಿವಾದಕ್ಕೆ ಅಂತಿಮ ಹಾಡಲು ಕೇಂದ್ರ ವರಿಷ್ಠರು ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಲಿದ್ದಾರೆ. ಈ ವಾರದ ನಂತರ ಪರಿಸ್ಥಿತಿ ನೋಡಿಕೊಂಡು ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಆಗಮಿಸುವಂತೆ ಸಿಎಂಗೆ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಮೂರು ದಿನಗಳ ಪ್ರವಾಸಕ್ಕೆ …

Read More »

ಕಲಾವಿದರ ಸಂಘದಲ್ಲಿ .ವಿಷ್ಣು ಹೆಸರು ಹಾಕದೆ ಅಗೌರವ ; ನಟ ಅನಿರುಧ್ ಬೇಸರ

ಬೆಂಗಳೂರು: ಕಲಾವಿದರ ಸಂಘದಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್​ ಅವರ ಹೆಸರನ್ನು ಹಾಕದೆ ಅಗೌರವ ನೀಡಲಾಗಿದೆ ಎಂದು ವಿಡಿಯೋ ಮೂಲಕ ನಟ ಅನಿರುಧ್ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಡಾ.ರಾಜ್​ಕುಮಾರ್ ಭವನ, ಅಂಬರೀಷ್ ಆಡಿಟೋರಿಯಂ ಇದೆ. ಈ ಎರಡೂ ಹೆಸರನ್ನು ನೋಡಿದಾಗ ನನಗೆ ತುಂಬಾ ಸಂತೋಷ ಆಯ್ತು. ಈ ಬಗ್ಗೆ ನನಗೆ ಗೌರವ ಇದೆ. ಆದರೆ ವಿಷ್ಣು ಅಪ್ಪಾಜಿಗೂ ಅಲ್ಲಿ ಸ್ಥಾನ ನೀಡಿದ್ದರೆ ಚೆನ್ನಾಗಿರುತ್ತಿತ್ತು. ನಾನು …

Read More »

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಬೆಂಗಳೂರು: ಎಂಟು ಕೋಟಿ ರೂ. ಮೌಲ್ಯದ ತಿಮಿಂಗಲದ ಅಂಬರ್‌ಗ್ರೀಸ್‌ ವೀರ್ಯ ಅನ್ನು ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೆ ಅಂಬರ್‌ ಗ್ರೀಸ್‌ ಅನ್ನು ಕೊಟ್ಟ ಕೋಲಾರ ಮೂಲದ ಆರೋಪಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಪ್ರಕರಕಣದಲ್ಲಿ ಈಗಾಗಲೇ ಮಾಗಡಿ ಮುಖ್ಯರಸ್ತೆಯ ಸೈಯದ್‌ ತಜ್ಮುಲ್‌ ಪಷಾ(54), ಪ್ಯಾಲೇಸ್‌ ಗುಟ್ಟಹಳ್ಳಿಯ ಸಲೀಂ ಪಾಷಾ (48), ನಾಸೀ ಪಾಷಾ(34) ಮತ್ತು ಜೆ.ಪಿ.ನಗರದ ರಫೀ ಉಲ್ಲಾ ಶರೀಫ್ (45) ಅವರನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಕೋಲಾರದ ಸಲ್ಮಾನ್‌ ಎಂಬಾತ …

Read More »

ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್‌ ಸಿಂಗ್‌

ಬೆಂಗಳೂರು: ರಾಜ್ಯ ಬಿಜೆಪಿಯ ನಾಯ ಕತ್ವ ಗೊಂದಲಗಳು ಮತ್ತೆ ದಿಲ್ಲಿಗೆ ವರ್ಗಾವಣೆಗೊಂಡಿವೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ತಮ್ಮ ಮೂರು ದಿನಗಳ ರಾಜ್ಯ ಪ್ರವಾಸ ಸಂದರ್ಭದಲ್ಲಿ ಸಚಿವ ರೊಂದಿಗಿನ ಸಂವಾದ, ಶಾಸಕರ ಅಭಿ ಪ್ರಾಯ, ಶಾಸಕರ ಭಿನ್ನಾಭಿ ಪ್ರಾಯದ ಹೇಳಿಕೆಗಳು, ನಾಯ ಕತ್ವದ ಬಗ್ಗೆ ಇರುವ ಆರೋಪ- ಪ್ರತ್ಯಾ ರೋಪಗಳ ಸಂಪೂರ್ಣ ವಿವರ ಸಂಗ್ರಹಿ ಸಿದ್ದು, ಪಕ್ಷದ ವರಿಷ್ಠರಿಗೆ ವಾಸ್ತವ ವರದಿ ನೀಡಲಿದ್ದಾರೆ. ಅರುಣ್‌ ಸಿಂಗ್‌ ಭೇಟಿ ಸಂದರ್ಭ ದಲ್ಲಿ ಪ್ರಮುಖವಾಗಿ ನಾಯಕತ್ವದ ಬದಲಾವಣೆಯ ಕುರಿತು ಅಧಿಕೃತ ಚರ್ಚೆ ಆಗದಿದ್ದರೂ …

Read More »

ರಾಜಕಾರಣಿಗಳಿಂದ ಕೊರೊನಾ ರೂಲ್ಸ್​ ಬ್ರೇಕ್​; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ತರಾಟೆ

ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ …

Read More »