Breaking News

ಬೆಂಗಳೂರು

ಮರ ಸ್ಥಳಾಂತರದ ವಿವರ ನೀಡಲು ಸೂಚನೆ

ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಿರುವ ನಿರ್ದಿಷ್ಟ ಸ್ಥಳದ ವಿವರ ಸಲ್ಲಿಸುವಂತೆ ಮರಗಳ ತಜ್ಞರ ಸಮಿತಿಗೆ (ಟಿಇಸಿ) ಹೈಕೋರ್ಟ್‌ ನಿರ್ದೇಶನ ನೀಡಿದೆ. ಟಿಇಸಿ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು. ‘ಮರಗಳು ಇರುವ ಜಾಗದಿಂದ ಸಮೀಪದ ಸ್ಥಳಗಳನ್ನು ಗುರುತಿಸಿ ಅಂದೇ ಸ್ಥಳಾಂತರ ಮಾಡಬೇಕಾಗುತ್ತದೆ. ನಿರ್ದಿಷ್ಟ ಜಾಗವನ್ನು ಟಿಇಸಿ ಅಂತಿಮಗೊಳಿಸಿದ ಬಳಿಕವೇ ಸ್ಥಳಾಂತರ ಮಾಡಬೇಕು’ ಎಂದು …

Read More »

25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …

Read More »

ಶೀಲ ಶಂಕಿಸಿ ಪತ್ನಿ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದ್ದು, ಆರೋಪಿ ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು …

Read More »

‘KPSC’ ಗೆ ಇಬ್ಬರು ಸದಸ್ಯರುಗಳನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯರುಗಳ ಸ್ಥಾನಕ್ಕೆ ಇಬ್ಬರನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಅಧಿಕಾರಿ ಸದಸ್ಯರಾಗಿ ಡಾ. ಶಾಂತಾ ಹೊಸಮನಿ, ರಕ್ತನಿಧಿ ವೈದ್ಯಾಧಿಕಾರಿ, ಕೆ ಸಿ ಜನರಲ್ ಆಸ್ಪತ್ರೆ ಇವರನ್ನು, ಅಧಿಕಾರೇತರ ಸದಸ್ಯರಾಗಿ ಡಾ. ಹೆಚ್ ಎಸ್ ನರೇಂದ್ರ ಇವರನ್ನು ನೇಮಕಗೊಳಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಡಾ, ಆನಂದ್ ಕೆ ಸುತ್ತೋಲೆ …

Read More »

ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!

ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್‌ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ …

Read More »

NCB ಅಧಿಕಾರಿಗಳಿಂದ ಭರ್ಜರಿ ಬೇಟೆ: 2 ಟನ್​ಗೂ ಹೆಚ್ಚು ಗಾಂಜಾ ವಶಕ್ಕೆ

ಬೆಂಗಳೂರು: ಬೆಂಗಳೂರು ವಲಯ ಎನ್​ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ₹15 ಕೋಟಿ ಬೆಲೆಬಾಳುವ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್​ನ ಪೆದ್ದ ಅಂಬರ್​ಪೇಟ್ ಟೋಲ್ ಪ್ಲಾಜಾ ಬಳಿ ಟ್ರಕ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದ್ದು 2 ಟನ್​ಗಿಂತಲೂ ಹೆಚ್ಚಿನ ಗಾಂಜಾವನ್ನ ಸೀಜ್ ಮಾಡಲಾಗಿದೆ. ಒಟ್ಟು 1,080 ಪ್ಯಾಕೆಟ್​ಗಳಲ್ಲಿ ಗಾಂಜಾವನ್ನ ಸಾಗಾಟ ಮಾಡಲಾಗ್ತಿತ್ತು.. ಒಂದೊಂದು ಪ್ಯಾಕೆಟ್​ನಲ್ಲಿ 2 ಕೆ.ಜಿ ಗಾಂಜಾ ಶೇಖರಿಸಲಾಗಿತ್ತು ಎನ್ನಲಾಗಿದೆ. ಹೈದರಾಬಾದ್​ನಿಂದ …

Read More »

ಹಂತ ಹಂತವಾಗಿ ಶಾಲಾ ಕಾಲೇಜು ತೆರೆಯಲು ತಜ್ಞರ ಸಮಿತಿ ಸೂಚನೆ: ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲೆ- ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಜ್ಞರ ಸಮಿತಿಯ ಸಭೆಯ ಬಳಿಕ ಮಾತನಾಡಿದ ಸಿಎಂ, ಕೊವಿಡ್ ನಂತರ ಆರೊಗ್ಯ ಸಮಸ್ಯೆ ಕಡೆಗೆ ಗಮನ ಹರಿಸಬೇಕು. 18 ವರ್ಷಕ್ಕಿಂತ ಹಿರಿಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿ ನಂತರ ಹಂತ ಹಂತವಾಗಿ ಕಾಲೇಜು ತೆರೆಯಲು ಸೂಚನೆ ನೀಡಿದ್ದಾರೆ ಎಂದರು. ಕೋವಿಡ್ ಮೂರನೇ ಅಲೆ …

Read More »

ಕೋವಿಡ್‌ 3ನೇ ಅಲೆ- ಮಕ್ಕಳಿಗಾಗಿಯೇ ಪ್ರತ್ಯೇಕ ಆಸ್ಪತ್ರೆಗೆ ಚಿಂತನೆ: ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಆತಂಕ ಇರುವುದರಿಂದ ಬೆಂಗಳೂರಿನಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆ ಬಂದಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ‘ಈ ಕುರಿತು ಮುಖ್ಯಮಂತ್ರಿಯನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಅವರ ಅಂತಿಮ ಆದೇಶದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಮುದಾಯ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ …

Read More »

ತಿಹಾರ್ ಜೈಲಿನಲ್ಲಿ ನೆರವಿಗೆ ನಿಂತವನ ಕೈಬಿಡದ ಕಾಂಗ್ರೆಸ್ ನಾಯಕ; ಡಿ.ಕೆ‌. ಶಿವಕುಮಾರ್

ಕಷ್ಟದ ದಿನಗಳಲ್ಲಿ ಕೈಚಾಚಿದವರನ್ನು, ಸಹಾಯ ಮಾಡಿದವರನ್ನು ಮರೆಯಲು ಸಾಧ್ಯವೇ? ಸೆರೆಯಾಗಿದ್ದ ಹಕ್ಕಿಯು ಬಿಡುಗಡೆಯಾಗುತ್ತಿದ್ದಂತೆಯೇ ಪಂಜರದಲ್ಲಿ ಜೊತೆಯಾಗಿದ್ದ ಮತ್ತೊಂದು ಹಕ್ಕಿಯತ್ತ ಸುಳಿಯುತ್ತದೆಯೇ? ಇಲ್ಲ. ಆದರೆ, ಒಡಲ ನೋವನ್ನು ಆಲಿಸಿದ, ಕಷ್ಟದ ಘಟನೆಗಳ ಕೇಳುಗನಾದ, ಸ್ಪಂದಿಸಿ, ಸಂತೈಸಿದ ವ್ಯಕ್ತಿ ಸೆರೆಯಲ್ಲಿದ್ದಾಗ, ಹೃದಯವಂತನಾದವನು ಮತ್ತೆ ಧಾವಿಸದೇ ಇರನು. ಹಾಗೆ ಧಾವಿಸಿ, ವ್ಯಕ್ತಿಯ ಕಷ್ಟಕ್ಕೆ ಸ್ಪಂದಿಸಿದವರು ರಾಜ್ಯದ ನಾಯಕರಲ್ಲೊಬ್ಬರು. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ‌ ಶಿವಕುಮಾರ್ ತಿಹಾರ್ ಜೈಲು ಸೇರಿದ್ರು.ಬರೋಬ್ಬರಿ …

Read More »

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಬೆಂಗಳೂರು: ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ …

Read More »