ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಕಿತ್ತಾಟ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಸರಣಿ ಟ್ವೀಟ್ ಮಾಡಿ, ಬಸವಣ್ಣನವರ ವಚನದ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜನೆ ಅಂತ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಕೂಡಲ …
Read More »ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಅರ್ಜಿ ಸ್ವೀಕರಿಸಿದ್ದು, ಸೀಟು ಹಂಚಿಕೆ ಪ್ರಕ್ರಿಯೆ ಪ್ರವೇಶಾತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. RTE ಅಡಿ ಪ್ರವೇಶಕ್ಕಾಗಿ ಸ್ವೀಕರಿಸಲಾದ ಅರ್ಜಿ ಪರಿಶೀಲನೆ ನಡೆಸಿ ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಜೂನ್ 22 ರಂದು …
Read More »ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ: ಅನಿಲ್ ಬೆನಕೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ ಎಂದು ಹೇಳುವ ಮೂಲಕ ಶಾಸಕ ಅನಿಲ್ ಬೆನಕೆ ಅಚ್ಚರಿ ಮೂಡಿಸಿದ್ದಾರೆ. ಇಷ್ಟು ದಿನಗಳ ಕಾಲ ಯಡಿಯೂರಪ್ಪರೇ ನಮ್ಮ ನಾಯಕ ಎಂತಿದ್ದ ಅನಿಲ್ ಬೆನಕೆ ಇದೀಗ ಸಡನ್ ಯೂ ಟರ್ನ್ ಹೊಡೆದಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್ ಯಾವ ನಾಯಕನ ಹೆಸರನ್ನ ಸೂಚಿಸುತ್ತೋ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ. ಅದು ಯಡಿಯೂರಪ್ಪರೇ …
Read More »ವಿಶ್ವನಾಥ್ ಅರೆ ಹುಚ್ಚ, ತಿಕ್ಕಲು ಬುದ್ಧಿ – ಎಸ್.ಆರ್.ವಿಶ್ವನಾಥ್
ಬೆಂಗಳೂರು: ಎಚ್ ವಿಶ್ವನಾಥ್ ಅವರಿಗೆ ಅರೆ ಹುಚ್ಚು ಹಿಡಿದಿದೆ. ಅವರು ರೋಡಲ್ಲಿ ಓಡಾಡುವ ಮಾತನಾಡುವ ಅರೆ ಹುಚ್ಚ ಆಗಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಚ್.ವಿಶ್ವನಾಥ್ ಹೇಳಿಕೆ ಅಶಿಸ್ತನ್ನು ತೋರಿಸುತ್ತದೆ. ತಿಂದ ಮನೆಗೆ ದ್ರೋಹ ಬಗೆಯುವುದು ಅವರ ಹುಟ್ಟು ಗುಣ ಎಂದು ಕಿಡಿಕಾರಿದರು. ಸಾರಾ ಮಹೇಶ್ ಅವರನ್ನು ಒಮ್ಮೆ ಹೊಗಳುತ್ತಾರೆ ಮತ್ತೆ ವಿರೋಧ ಮಾಡುತ್ತಾರೆ. ಕೊರೊನಾಗಿಂತಲೂ …
Read More »ಲವರ್ ಜೊತೆಗೆ ಐಷಾರಾಮಿಯಾಗಿ ಬದುಕಲು ಗಾಂಜಾ ಮಾರಾಟಕ್ಕಿಳಿದು ಸಿಕ್ಕಿಬಿದ್ದ ಪದವೀಧರೆ..!
ಬೆಂಗಳೂರು: ಅವರಿಬ್ಬರೂ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದರು. ಇಬ್ಬರಿಗೂ ಕಾಲೇಜಿನ ಕಾರಿಡಾರ್ ನಲ್ಲಿ ಲವ್ ಶುರುವಾಗಿತ್ತು. ಆದರೆ ಪ್ರಿಯಕರನ ಐಷರಾಮಿ ಜೀವನದ ಮೋಡಿಗೆ ಬಿದ್ದ ಯುವತಿ ಈಗ ಗಾಂಜಾ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದಾಳೆ. ಜೈಲುಪಾಲಾಗಿರುವ ಯುವರಿಯ ಹೆಸರು ರೇಣುಕಾ. ಇನ್ನೂ 25 ವರ್ಷ, ಸಿವಿಲ್ ಇಂಜಿನಿಯರಿಂಗ್ ಪದವೀಧರೆ. ರೇಣುಕಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದು, ಕೈತುಂಬಾ ಸಂಬಳ ಬರ್ತಿತ್ತು. ಆದ್ರೆ ಪ್ರೀತಿ ಎಂಬ ಮಾಹೆಗೆ ಸಿಲುಕಿದ ರೇಣುಕಾ ಪ್ರಿಯಕರ ಸಿದ್ದಾರ್ಥ …
Read More »‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ …
Read More »ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ? ಇದರಲ್ಲಿ ಬೆಳಗಾವಿಯ 6 ಶಾಸಕರು?
ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …
Read More »ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ
ಬೆಂಗಳೂರು, ಜೂನ್ 16: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಮಾಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ವೆಬ್ಸೈಟ್ www.sslc.Karnataka.gov.in ನಲ್ಲಿ ಪ್ರಕಟವಾಗಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ ಪ್ರಕಟವಾಗಿದೆ. ಪ್ರಸಕ್ತ ವರ್ಷ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದ್ದರಿಂದ ಜೂನ್ …
Read More »‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ
ಬೆಂಗಳೂರು: “ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ” ಎನ್ನುವಂತೆ ರಾಜ್ಯದ ಜನತೆಗೆ ಬದುಕಿನ ಚಿಂತೆ, ಬಿಜೆಪಿಗೆ ಕುರ್ಚಿ ಕದನದ ಚಿಂತೆಯಾಗಿದೆ. ಒಂದು ಕಡೆ ಸಹಿ ಸಂಗ್ರಹಿಸುವವರು, ಮತ್ತೊಂದು ಕಡೆ ಪತ್ರ ಬರೆಯುವವರು, ಇನ್ನೊಂದು ಕಡೆ ಆ’ಸಂತೋಷಗೊಂಡವರು! ಎಂದಿಗೂ ಜನಪರವಾಗಿರದ ಬಿಜೆಪಿಗೆ ಅಧಿಕಾರ ಸಿಗುವುದು ರಾಜ್ಯಕ್ಕೆ ‘ಶಾಪ’ ತಟ್ಟಿದಂತೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ. ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗೈಯಲಾಗಿದೆ. ಅರುಣ್ ಸಿಂಗ್ ಅವರೇ, …
Read More »ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಂದು ಅಥವಾ ನಾಳೆ ನಿರ್ಧಾರ;
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಣ ರಾಜಕೀಯ, ಅಸಮಾಧಾನಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಲಿದ್ದು, ಎಲ್ಲಾ ಗೊಂದಲಗಳನ್ನು ಬಗೆಹರಿಸಲಿದ್ದಾರೆ. ಮೂರು ದಿನಗಳ ರಾಜ್ಯ ಭೇಟಿಗಾಗಿ ಇಂದು ಮಧ್ಯಾಹ್ನ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಯತ್ನಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಚಿವರನ್ನು ಪ್ರತ್ಯೇಕವಾಗಿ ಕರೆಸಿ ಚರ್ಚೆ ನಡೆಸಲು ಅರುಣ್ ಸಿಂಗ್ ಮುಂದಾಗಿದ್ದು, ಸಚಿವರನ್ನು ಹೊರತುಪಡಿಸಿ ಬೇರಾರಿಗೂ ಬಿಜೆಪಿ …
Read More »
Laxmi News 24×7