Breaking News
Home / ಜಿಲ್ಲೆ / ಬೆಂಗಳೂರು (page 14)

ಬೆಂಗಳೂರು

11,136 ಪೌರಕಾರ್ಮಿಕರಿಗೆ ಖಾಯಂ ನೌಕರಿಗೆ ಅಧಿಸೂಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಹನ್ನೊಂದು ಸಾವಿರ ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್‌ ಬುದ್ಧ, ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಲೆಕ್‌ಪಾರ್ಕ್‌ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್‌ ಭವನ ಉದ್ಘಾಟಿಸಿ …

Read More »

ನಾನು ಸೋಮವಾರ ಇಡಿ ಮುಂದೆ ಹಾಜರಾಗುವುದಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು : ನಾನು ನಾಳೆ (ಸೋಮವಾರ) ಇಡಿ ಮುಂದೆ ಹಾಜರಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ. ನವೆಂಬರ್ 7 ರಂದು ತನ್ನ ಮುಂದೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ ಕುರಿತಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ , ನನ್ನ ಸಹೋದರ ಮತ್ತು ನನ್ನನ್ನು ಇಡಿ ವಿಚಾರಣೆಗೆ ಕರೆಸಲಾಗಿದೆ. ನವೆಂಬರ್ 7 ರಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಗಳಲ್ಲಿ ನಾನು ನಿರತನಾಗಿದ್ದೇನೆ, ,ಪಕ್ಷದ ಕಾರ್ಯಕರ್ತರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು …

Read More »

ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು:C.M.

ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೇಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿಯವರು ಭಗವಾನ್ ಬುದ್ಧನ ಮತ್ತು ಭಾರತರತ್ನ ಡಾ.ಬಾಬಾಸಾಹೇಬ್‌ರ ತತ್ವಾದರ್ಶಗಳು ಅನುಸರಣಿಯವಾಗಿವೆ. …

Read More »

ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು

ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.   ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.   ಖರ್ಗೆ …

Read More »

ಬೆಂಗಳೂರು ಉತ್ತರ ವಿವಿಯಲ್ಲಿ ನಕಲಿ‌ ವಿದ್ಯಾರ್ಥಿಗಳ ಕಾರುಬಾರು, ತನಿಖೆಗೆ ಆದೇಶ: ನೂರಾರು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ!

ಪದವಿಗೆ ದಾಖಲಾಗಲು‌ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದಿದ್ದಾರೆ. ಎಸ್​ಎಸ್​ಎಲ್‌ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕ ಪಟ್ಟಿ ನೀಡಿರುವುದು ಬಯಲಾಗಿದೆ. ಕೋಲಾರ: ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದಲ್ಲಿ ನಕಲಿ ವಿದ್ಯಾರ್ಥಿಗಳ ಕಾರುಬಾರು ಹೆಚ್ಚಾಗಿದೆ. ಆ ಮೂಲಕ ನಕಲಿ ಜಾಲವೊಂದು ಉತ್ತರ ವಿಶ್ವವಿದ್ಯಾಲಯದಲ್ಲಿ ಬೇರೂರಿದೆಯಾ ಅನ್ನೋ ಅನುಮಾನ ಇದೀಗ ಮೂಡಿದೆ. ನಕಲಿ ಅಂಕಪಟ್ಟಿಗಳನ್ನ ನೀಡಿ ಮೊದಲ ವರ್ಷದ ಪದವಿ ತರಗತಿಗಳಿಗೆ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳ ನಕಲಿ ಆಟ …

Read More »

BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕೊಲೆ ಬೆದರಿಕೆ

ಬೆಂಗಳೂರು: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ( Sri Ram Sene founder president Pramod Muthalik ) ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ. ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಿನ್ನೆ ರಾತ್ರಿ ನಾಲ್ಕು ನಂಬರ್ ಗಳಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬೆಳಗಾವಿ …

Read More »

ಎಂಎಲ್‌ಸಿ ಚುನಾವಣೆ: ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಹಕ್ಕಿಲ್ಲ: ಹೈಕೋರ್ಟ್‌

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ವಿರುದ್ಧ ಕೇವಲ 6 ಮತಗಳ ಅಂತರದಿಂದ ಸೋತಿದ್ದ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಚುನಾವಣ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ …

Read More »

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ

ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಮತ್ತು ಸಹಸ್ರಾರು ಅಭಿಮಾನಿಗಳ ಹರ್ಷೋದ್ಗಾರಗಳ ಮಧ್ಯೆಯೇ, ನಾಡಿನ ಜನರ ಮನಗೆದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ ಸಂಜೆ ನಡೆದ ಸಮಾರಂಭದಲ್ಲಿ, ಪುನೀತ್‌ ಅವರನ್ನು ಕಳೆದುಕೊಂಡು ಆಗಸವೇ ಅಳುತ್ತಿದೆ ಯೇನೋ ಎಂಬಂತೆ ಭೋರ್ಗರೆದು ಸುರಿಯುತ್ತಿದ್ದ ವರ್ಷಧಾರೆಯ ನಡುವೆಯೇ ಛತ್ರಿಯ ಆಸರೆಯಲ್ಲಿ ಸಮಾರಂಭ ನಡೆಯಿತು. ತಂದೆ ಡಾ. ರಾಜ್‌ಕುಮಾರ್‌ ಅವರಿಗೆ 30 ವರ್ಷಗಳ ಹಿಂದೆ …

Read More »

ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್!: ಶೀಘ್ರವೇ ನಂದಿನ ಹಾಲಿನ ದರ 3 ರೂ. ಹೆಚ್ಚಳ

ಬೆಳಗಾವಿ: ಶೀಘ್ರವೇ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಇದರಿಂದ ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ದರ ಪರಿಷ್ಕರಣೆಯ ಸಂಪೂರ್ಣ ಹಣವು ರೈತರಿಗೆ ಸಿಗಲಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಬಾಲಚಂದ್ರ …

Read More »

ಅಪ್ಪು ಪ್ರೇರಣೆಯಿಂದ ಅಂಗಾಂಗ ದಾನ ಹೆಚ್ಚಳ

ಬೆಂಗಳೂರು: ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (ಅಪ್ಪು) ಅವರು ನಮ್ಮನ್ನೆಲ್ಲ ಅಗಲಿ ಒಂದು ವರ್ಷವೇ ಕಳೆಯಿತು. ಆದರೆ, ಅವರ ನೆನಪುಗಳು ಮಾತ್ರ ಇನ್ನೂ ಸದಾ ಹಸಿಯಾಗಿವೆ. ಪುನೀತ್‌ ನಟನೆಗೆ ಮಾತ್ರ ಸೀಮಿತವಾಗದೇ, ಪರೋಕ್ಷವಾಗಿ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ತೊಡಗಿದ್ದರು. ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ, ನಾಲ್ಕು ಜನರಿಗೆ ಬೆಳಕಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅವರ ಸ್ಫೂರ್ತಿ, ಪ್ರೇರಣೆಯಿಂದ ಪುನೀತ್‌ ಅವರ ಅಭಿಮಾನಿಗಳು ಸೇರಿದಂತೆ ನಾಡಿನಾದ್ಯಂತ ಸಹಸ್ರಾರು ಮಂದಿ ನೇತ್ರದಾನ …

Read More »