Breaking News

ಬೆಂಗಳೂರು

ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ

ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಜೊತೆಗೆ ಪೊಲೀಸ್ ಬ್ಯಾಂಡ್​ನಿಂದ ರಾಷ್ಟ್ರಗೀತೆ ನುಡಿಸಿ ಗೌರವ ನೀಡಲಾಯಿತು. ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು. ಡಾ.ಸಿದ್ದಲಿಂಗಯ್ಯ ಚಿತೆಗೆ ಪುತ್ರ ಗೌತಮ್ ಅಗ್ನಿ ಸ್ಪರ್ಶ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ …

Read More »

ಪ್ರಧಾನಿ ಮೋದಿ, ಸಿಎಂ ಬಿ.ಎಸ್.ವೈ. ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ಜನರ ಜೀವ ಹಿಂಡುವ ಇಂಥ ಸರ್ಕಾರ ಹಿಂದೆಂದೂ ನೋಡಿಲ್ಲ ಎಂದು ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ತಿಗಣೆ ತರ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಒಂದೆಡೆ ಜನರು ಕೋವಿಡ್ ನಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಇನ್ನೊಂದೆಡೆ ತೈಲ ಬೆಲೆಯಿಂದ ಹಿಡಿದು ಅಗತ್ಯ ವಸ್ತುಗಳವರೆಗೂ ಎಲ್ಲದರ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಜನಸಾಮಾನ್ಯರು ಬದುಕು ನಡೆಸುವುದಾದರೂ ಹೇಗೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿ, ಮೋದಿ ಎಂದು ಹುಡುಗರು ಘೋಷಣೆಗಳನ್ನು ಕೂಗುತ್ತಿದ್ದರು. ಕೊರೊನಾ ಓಡಿಸಲೆಂದು ಪ್ರಧಾನಿ ಮೋದಿ ಹೇಳಿದಂತೆ ಗಂಟೆ, …

Read More »

ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿ A.S.I.

ಬೆಂಗಳೂರು: ಎಎಸ್ಐ ಒಬ್ಬರು 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಎಸ್ಐ ದಯಾನಂದ ತನ್ನಿಂದ 5 ಲಕ್ಷ ರೂಪಾಯಿ ಲಂಚ ಪಡೆದುಕೊಂಡಿರುವುದಾಗಿ ಆರೋಪಿಸಿ ಈ ಬಗ್ಗೆ ಸ್ವತ: ಭರತ್ ಶೆಟ್ಟಿ ಸಿಸಿಟಿವಿ ವಿಡಿಯೋ ಸಮೇತ ಎಎಸ್ಐ ವಿರುದ್ಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಉದ್ಯಮಿ ಭರತ್ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ವ್ಯಕ್ತಿಯೊಬ್ಬರು ನಿವೇಶನ ವಂಚನೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲು …

Read More »

ಆರೋಪಿ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣ ಬಹಿರಂಗವಾದಾಗಿನಿಂದ ಕಳೆದ 100 ದಿನಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಬೆಂಗಳೂರಿನ ಆಡುಗೋಡಿ ಎಸ್ ಐಟಿ ಟೆಕ್ನಿಕಲ್ ಸೆಲ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ಹಾಗೂ ಶ್ರವಣ್ ವಿರುದ್ಧ ರಮೇಶ್ ಜಾರಕಿಹೊಳಿ ಹನಿ ಟ್ರ್ಯಾಪ್, ಬ್ಲ್ಯಾಕ್ …

Read More »

ಕೋವಿಡ್-19: ರಾಜ್ಯದಲ್ಲಿ 2 ತಿಂಗಳ ಬಳಿಕ ದೈನಂದಿನ ಸೋಂಕು ಪ್ರಮಾಣ ಅತಿಕಡಿಮೆ!

ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಘೋಷಣೆ ಹೊರಬಿದ್ದ ಬೆನ್ನಲ್ಲೇ ಅಚ್ಚರಿ ರೀತಿಯಲ್ಲಿ ರಾಜ್ಯ ಸಹಜ ಸ್ಥಿತಿಗೆ ಬರಲಾರಂಭಿಸಿದೆ. ರಾಜ್ಯದಲ್ಲಿ ಶುಕ್ರವಾರ 8249 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 2 ತಿಂಗಳ ಬಳಿಕ ದೈನಂದಿನ ಸೋಂಕು ಕನಿಷ್ಟಕ್ಕೆ ಕುಸಿದಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಕೊರೋನಾ ಅಬ್ಬರ ಕಡಿಮೆಯಾಗಿದ್ದು, ನಿನ್ನೆ 1,154 ಹೊಸ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಏಪ್ರಿಲ್ 13 ರಂದು 8,778 ಪ್ರಕರಣಗಳು ಪತ್ತೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ …

Read More »

ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್

ಬೆಂಗಳೂರು, ಜೂ.12- ಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಂದ ಬರುವ ವಲಸಿಗರಿಗೆ ರೈಲ್ವೇ ಹಾಗೂ ಬಸ್ ನಿಲ್ದಾಣಗಳಲ್ಲೇ ಕೋವಿಡ್ ಪರೀಕ್ಷೆಗೊಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಾಕ್ಡೌನ್ ಸಡಿಲಿಕೆಯಾದ ಬಳಿಕ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ. ಬೆಂಗಳೂರು ನಗರಕ್ಕೆ ಹೆಚ್ಚಿನ …

Read More »

ಸೋನು ಸೂದ್ ​ರನ್ನ ಭೇಟಿಯಾಗಲು 700 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿ ಬಂದ ಅಭಿಮಾನಿ..!

ಬಾಲಿವುಡ್​ ನಟ ಸೋನು ಸೂದ್​ ನಟನೆಗಿಂತ ಹೆಚ್ಚಾಗಿ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಬಡ ಜನರ ಪರವಾಗಿ ನಿಂತಿರುವ ಸೂನ್​ ಸೂದ್​ರನ್ನ ಭೇಟಿಯಾಗಬೇಕು ಅಂತಾ ವೆಂಕಟೇಶ್​ ಎಂಬಾತ ಹೈದರಾಬಾದ್​ನಿಂದ ಮುಂಬೈವರೆಗೆ ಕಾಲ್ನಡಿಗೆಯಲ್ಲೇ ಸಾಗಿ ಬಂದಿದ್ದಾನೆ. ಟ್ವಿಟರ್​ನಲ್ಲಿ ಅಭಿಮಾನಿಯನ್ನ ಭೇಟಿಯಾದ ಫೋಟೋ ಶೇರ್​ ಮಾಡಿರುವ ಸೋನು ಸೂದ್,​ ಅಭಿಮಾನಿಗಳ ಬಳಿ ನನ್ನ ಭೇಟಿಯಾಗಲು ಈ ರೀತಿಯ ಕಷ್ಟವನ್ನ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ. …

Read More »

ಸಾಲ ಕೊಡಿಸ್ತೀವಿ, ಫೀಸ್ ಕಟ್ಟಿ ಎಂದ ಖಾಸಗಿ ಶಾಲೆ

ಬೆಂಗಳೂರು: ಶಾಲಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಯೊಂದು ಸಾಲ ದಂಧೆ ಶುರು ಮಾಡಿಕೊಂಡಿದೆ. ಸಾಲ ಕೊಡಿಸ್ತೀವಿ, ನಮಗೆ ಫೀಸ್ ಕಟ್ಟಿ ಎಂದು ಲಗ್ಗೆರೆಯ ಖಾಸಗಿ ಶಾಲೆಯೊಂದು ಪೋಷಕರಿಗೆ ದುಂಬಾಲು ಬಿದ್ದಿದೆ. ಲಗ್ಗೆರೆಯ ಈ ಖಾಸಗಿ ಶಾಲೆ, ಫೈನಾನ್ಸ್ ಪೀರ್ ಎಂಬ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ವಿದ್ಯಾರ್ಥಿಯ ಟಿಸಿಯನ್ನು ಅಡಮಾನ ಇಟ್ಟುಕೊಂಡು ಪೊಷಕರಿಗೆ ಸಾಲ ವಿತರಣೆಗೆ ಈ ಫೈನಾನ್ಸ್ ಕಂಪನಿ ಮುಂದಾಗಿದೆ. ಸಾಲ ತೆಗೆದುಕೊಂಡ 6 ತಿಂಗಳವರೆಗೆ ಯಾವುದೇ ರೀತಿಯ …

Read More »

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ

ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ. ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್​ ಚಂದ್ರ ಅವರು, ಗೋಲ್ಡ್​ನ್​ ಸ್ಟಾರ್​ ಗಣೇಶ್​ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.

Read More »

ಬೆಂಗಳೂರು : ಪರಪುರುಷನ ಸಂಗದಿಂದ ಮಕ್ಕಳಿಗೆ ವಿಲನ್ ಆದ ತಾಯಿ : ಸದ್ಯ ಪೊಲೀಸರ ಅತಿಥಿ

ಬೆಂಗಳೂರು : ನಗರದ ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಯಮ್ಮ ಎಂಬಾಕೆ ತನ್ನ ಇಬ್ಬರು ಮಕ್ಕಳ ಪಾಲಿಗೆ ವಿಲನ್ ಆಗಿದ್ದಾಳೆ.ಹೌದು ಜಯಮ್ಮಳದ್ದು ವಯಸ್ಸಲ್ಲ ವಯಸ್ಸಿನಲ್ಲಿ ಮದುವೆಯಾಗಿ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾಳೆ. ಹೀಗೆ ಅಪ್ರಾಪ್ತಳನ್ನು ಮದುವೆಯಾಗಿದಕ್ಕೆ ಆಕೆಯ ಗಂಡ ಜೈಲು ಸೇರಿದ್ದಾನೆ. ಈ ಇಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಜಯಮ್ಮ ಜೀವನ ನಿರ್ವಹಣೆಗಾಗಿ ಆಸ್ಪತ್ರೆವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡು ಅಲ್ಲಿ ಪರಿಚಯವಾದ ಮತ್ತೊಬ್ಬಳ ಗಂಡನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಆತನ ಹೆಸರು …

Read More »