Breaking News

ಬೆಂಗಳೂರು

ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ಎತ್ತಂಗಡಿ ಮಾಡಿದ ರಾಜ್ಯ ಸರಕಾರ

ಬೆಂಗಳೂರು – ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನು ಶನಿವಾರ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಧರ್ಮದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದ್ದು ಅವರ ಜಾಗಕ್ಕೆ ಗೌತಮ್ ಬಗಾದಿ ಅವರನ್ನು ಹಾಕಲಾಗಿದೆ. ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು …

Read More »

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ 100 ರೂ., ಅಡುಗೆ ಎಣ್ಣೆ 200 ರೂ., ಗ್ಯಾಸ್ ಸೇರಿ ಅಗತ್ಯ ವಸ್ತುಗಳೆಲ್ಲಾ ದುಬಾರಿ

ಬೆಂಗಳೂರು: ಕೊರೋನಾ ಸಂಕಷ್ಟದ ಹೊತ್ತಲ್ಲೇ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿರುವುದು ನುಂಗಲಾರದ ತುತ್ತಾಗಿದೆ. ಪೆಟ್ರೋಲ್ ದರ 100 ರೂಪಾಯಿ ಸನಿಹಕ್ಕೆ ಬಂದಿದ್ದರೆ, ಅಡುಗೆ ಎಣ್ಣೆ 200 ರೂ. ಗಡಿಯತ್ತ ದಾಪುಗಾಲಿಟ್ಟಿದೆ. ಇನ್ನು ಬೇಳೆ ಬೆಲೆಯೂ ದುಬಾರಿಯಾಗಿದೆ. ಕೊರೋನಾ ಕಾರಣದಿಂದ ಕುಟುಂಬಗಳ ಆದಾಯದಲ್ಲಿ ಭಾರಿ ಕುಸಿತವಾಗಿದೆ. ಆದರೆ, ಇದೇ ವೇಳೆ ಅಗತ್ಯ ವಸ್ತುಗಳ ಬೆಲೆಏರಿಕೆ ಮಾತ್ರ ಏರುಗತಿಯಲ್ಲೇ ಸಾಗುತ್ತಿದೆ. ಉತ್ಪಾದನೆ ವೆಚ್ಚ ಕಡಿಮೆಯಾಗಿದ್ದರೂ ಇಂಧನ ದರ …

Read More »

ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಪರಾರಿಯಾಗ್ತಿದ್ದ ಕೀಚಕ; ಸೈಕೊ ಅರುಣ್ ಪೊಲೀಸರ ಬಲೆಗೆ

ಬೆಂಗಳೂರು: ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗುತ್ತಿದ್ದ ಸೈಕೋನೋರ್ವನನ್ನು ಬೆಂಗಳೂರು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆಜಿಎಫ್ ರಾಬರ್ಟ್ ಪೇಟೆಯ ಸೈಕೋ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಬೈಕ್ ನಲ್ಲಿ ಅಡ್ಡಾಡುತ್ತಾ ಮಹಿಳೆಯರ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಹಲವು ಯುವತಿಯರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಅರುಣ್ ಈವರೆಗೂ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಮೇ 31ರ …

Read More »

ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡಿಸೆಲ್ ದರ ಗಗನಮುಖಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಬರೋಬ್ಬರಿ 98ರೂಪಾಯಿ 19 ಪೈಸೆಯಾಗಿದೆ. ಲೀಟರ್ ಡೀಸೆಲ್ ದರ 90 ರೂಪಾಯಿ 84 ಪೈಯಾಗಿದೆ. ಕೊರೊನಾ ಲಾಕ್ ಡೌನ್ ನಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಈ ನಡುವೆ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿರುವುದು ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಮುಂಬೈ ಮಹಾನಗರದಲ್ಲಿ …

Read More »

ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ಸರ್ಕಾರ ವರ್ತಿಸುತ್ತಿದೆ’

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಮೇಯರ್​ ಶಿಲ್ಪಾ ನಾಗ್​ ನಡುವಿನ ಜಟಾಪಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸರ್ಕಾರ ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗಳು.. ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ …

Read More »

ಮುಂಗಾರು ಆಗಮನ : ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಣೆ

ಬೆಂಗಳೂರು: ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೇ ಅಂತ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆ, ದಕ್ಷಿಣ ಒಳನಾಡು ಪ್ರವೇಶಿಸಿರುವ ಮುಂಗಾರು, ಉತ್ತರ ಒಳನಾಡಿಗೆ ಶನಿವಾರ ಪ್ರವೇಶಸಲಿದ್ದು, ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದರು. ಧಾರವಾಡ, ಹಾವೇರಿ, ಬಿಜಾಪುರ …

Read More »

ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ.

ಬೆಂಗಳೂರು – ರಾಜ್ಯದಲ್ಲಿ ಈ ವರ್ಷ ಜುಲೈ 1ರಿಂದ ಶಾಲೆಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ. ಈ ಕುರಿತು ಹೊಸ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಜೂನ್ 15ರಿಂದ ಶಾಲೆಗಳನ್ನು ಆರಂಭಿಸಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ ಲಾಕ್ ಡೌನ್ ಮುಂದುವರಿದಿರುವುದರಿಂದ ಮತ್ತು ಕೊರೋನಾ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ. ಜುಲೈ 1ರಿಂದ ಅಕ್ಟೋಬರ್ 10ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್ 21ರಿಂದ 2022ರ ಏಪ್ರಿಲ್ 30 …

Read More »

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪರೀಕ್ಷೆ ಇಲ್ಲದೆ ಯಾವ ರೀತಿ ಗ್ರೇಡ್ ಕೊಡಬೇಕು ಎಂದು ಬಹಳ ಯೋಚಿಸಬೇಕಿದೆ ಎಂದು ಅವರು ಹೇಳಿದ್ದಾರೆ. ಮಕ್ಕಳ ಯೋಗಕ್ಷೇಮ ಮತ್ತು ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದ್ದರೆ. ಎಸ್ಸೆಸ್ಸೆಎಲ್ಸಿ, ಪಿಯುಸಿ ಪರೀಕ್ಷೆ ಈ ವರ್ಷ ಬಹುಚರ್ಚಿತ ವಿಚಾರ . ಕಳೆದ ವರ್ಷ ಪರಿಸ್ಥಿತಿ …

Read More »

ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್​ ಆದೇಶ

ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ. ಎನ್​​ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್​ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್‌ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ …

Read More »

ಜೂನ್​ ತಿಂಗಳಲ್ಲಿ ರಾಜ್ಯಕ್ಕೆ ಬರಲಿದೆ 58 ಲಕ್ಷ ಡೋಸ್​ ವ್ಯಾಕ್ಸಿನ್

ಬೆಂಗಳೂರು: ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಅಂತ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ವ್ಯಾಕ್ಸಿನ್ ಪೂರೈಕೆಯ ವಿಚಾರದ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಎಂದು ಕೇಂದ್ರ ಹೇಳಿದೆ. ಅದರಲ್ಲಿ 44 ಲಕ್ಷಕ್ಕೂ ಹೆಚ್ಚು ವ್ಯಾಕ್ಸಿನ್ ​ಉಚಿತವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ. ರಾಜ್ಯ ಸರ್ಕಾರ ಖರೀದಿ …

Read More »