ಬೆಂಗಳೂರು : ಒಂದೊಮ್ಮೆ ಜೂನ್ 14 ರ ನಂತರ ಅನ್ಲಾಕ್ ಆದರೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭಿಸುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಜೂನ್ 7 ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ನೀಡಲಾಗಿದೆ. ಕರೊನಾ ಮೊದಲ ಅಲೆ ವೇಳೆ ಅನ್ಲಾಕ್ ಮಾಡಿದಾಗ ಯಾವ ನಿಯಮಾವಳಿ ಇತ್ತೋ ಅದೇ ನಿಯಮಾವಳಿಗಳನ್ನು ಈಗ ಲಾಕ್ಡೌನ್ ತೆರವಾದ ಸಂದರ್ಭದಲ್ಲೂ ಫಾಲೋ ಮಾಡಲು ನಿರ್ಧರಿಸಲಾಗಿದೆ. ಬಸ್ ಕಾರ್ಯಾಚರಣೆಗೆ …
Read More »ಬೆಂಗಳೂರು ನಗರಕ್ಕೆ ಲಾಕ್ ಡೌನ್ ವಿನಾಯ್ತಿ?
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಈ ವಾರದ ಲಾಕ್ ಡೌನ್ ನಿಂದ ವಿನಾಯ್ತಿ ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಸಂಪೂರ್ಣ ಲಾಕ್ ಡೌನ್ ಬದಲಾಗಿ ಕೆಲವೊಂದಕ್ಕೆ ವಿನಾಯ್ತಿ ಅಥವಾ ಓಡಾಡುವ ಅವಧಿ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ನಗರದಲ್ಲಿ ಸದ್ಯಕ್ಕೆ ಶೇ.6 ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿದೆ. ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಅನ್ ಲಾಕ್ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಅದರಂತೆ ಬಿಎಂಟಿಸಿ, ಓಲಾ, ಉಬರ್ …
Read More »ಸರ್ಕಾರವೇ ಗೋಹತ್ಯೆ ಮಾಡುತ್ತಿದೆ: ಎಚ್ಡಿಕೆ ಆರೋಪ
ಬೆಂಗಳೂರು: ರಾಸುಗಳಿಗೆ ಕಾಲು-ಬಾಯಿ ರೋಗಕ್ಕೆ ಲಸಿಕೆ ನೀಡದೆ ಇರುವುದರಿಂದ ಅವು ನರಳಾಡಿ ಸಾಯುವ ಸನ್ನಿವೇಶ ನಿರ್ಮಾಣವಾಗಿದೆ. ಲಸಿಕೆ ಅಭಿಯಾನ ನಡೆಸದೆ ಸರ್ಕಾರವೇ ಗೋಹತ್ಯೆಗೆ ಕಾರಣವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಳೆದ ಅಕ್ಟೋಬರ್ನಲ್ಲಿ ಕಾಲು-ಬಾಯಿ ರೋಗಕ್ಕೆ ಲಸಿಕೆ ಅಭಿಯಾನ ನಡೆಯಬೇಕಿತ್ತು. ಕೆಂದ್ರ ಸರ್ಕಾರ ಅಭಿಯಾನ ನಡೆಸಿಲ್ಲ. ರಾಜ್ಯ ಸರ್ಕಾರವೂ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ’ ಎಂದು …
Read More »ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಬಗ್ಗೆ ಡಿವಿಎಸ್ ಸ್ಪಷ್ಟನೆ
ಬೆಂಗಳೂರು : ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ಹಂತದಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಅನ್ನೋದು ಸಹಜ. ಇದಕ್ಕೆ ಇತಿಶ್ರೀ ಹಾಕಲು ಯತ್ನ ಮಾಡಲಾಗ್ತಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಕೆಲವರಿಂದ ಕೆಲವು ಕಡೆ ಹೇಳಿಕೆ ಕೊಡಲಾಗ್ತಿದೆ. …
Read More »ಬಿಜೆಪಿಯಲ್ಲಿ ನಿಲ್ಲದ ಚಟುವಟಿಕೆ: ವಿಜಯೇಂದ್ರ ಬಳಿಕ ದೆಹಲಿಗೆ ಸಿ.ಟಿ.ರವಿ, ಮುರುಗೇಶ್ ನಿರಾಣಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಸದ್ಯಕ್ಕಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ, ನಾಯಕರ ದೆಹಲಿ ಭೇಟಿ ನಿಂತಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ನಡ್ಡಾ ಅವರ ಭೇಟಿಯ ನಂತರ ತಮ್ಮ ಹುಮ್ಮಸ್ಸು ಹೆಚ್ಚಾಗಿದೆ ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ ತಮ್ಮ ದೆಹಲಿ ಭೇಟಿ ಯಶಸ್ವಿಯಾಗಿದೆ ಎಂದು ಆಪ್ತರ ಬಳಿ …
Read More »ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ಎತ್ತಂಗಡಿ ಮಾಡಿದ ರಾಜ್ಯ ಸರಕಾರ
ಬೆಂಗಳೂರು – ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನು ಶನಿವಾರ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಧರ್ಮದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದ್ದು ಅವರ ಜಾಗಕ್ಕೆ ಗೌತಮ್ ಬಗಾದಿ ಅವರನ್ನು ಹಾಕಲಾಗಿದೆ. ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು …
Read More »ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ 100 ರೂ., ಅಡುಗೆ ಎಣ್ಣೆ 200 ರೂ., ಗ್ಯಾಸ್ ಸೇರಿ ಅಗತ್ಯ ವಸ್ತುಗಳೆಲ್ಲಾ ದುಬಾರಿ
ಬೆಂಗಳೂರು: ಕೊರೋನಾ ಸಂಕಷ್ಟದ ಹೊತ್ತಲ್ಲೇ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿರುವುದು ನುಂಗಲಾರದ ತುತ್ತಾಗಿದೆ. ಪೆಟ್ರೋಲ್ ದರ 100 ರೂಪಾಯಿ ಸನಿಹಕ್ಕೆ ಬಂದಿದ್ದರೆ, ಅಡುಗೆ ಎಣ್ಣೆ 200 ರೂ. ಗಡಿಯತ್ತ ದಾಪುಗಾಲಿಟ್ಟಿದೆ. ಇನ್ನು ಬೇಳೆ ಬೆಲೆಯೂ ದುಬಾರಿಯಾಗಿದೆ. ಕೊರೋನಾ ಕಾರಣದಿಂದ ಕುಟುಂಬಗಳ ಆದಾಯದಲ್ಲಿ ಭಾರಿ ಕುಸಿತವಾಗಿದೆ. ಆದರೆ, ಇದೇ ವೇಳೆ ಅಗತ್ಯ ವಸ್ತುಗಳ ಬೆಲೆಏರಿಕೆ ಮಾತ್ರ ಏರುಗತಿಯಲ್ಲೇ ಸಾಗುತ್ತಿದೆ. ಉತ್ಪಾದನೆ ವೆಚ್ಚ ಕಡಿಮೆಯಾಗಿದ್ದರೂ ಇಂಧನ ದರ …
Read More »ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಪರಾರಿಯಾಗ್ತಿದ್ದ ಕೀಚಕ; ಸೈಕೊ ಅರುಣ್ ಪೊಲೀಸರ ಬಲೆಗೆ
ಬೆಂಗಳೂರು: ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗುತ್ತಿದ್ದ ಸೈಕೋನೋರ್ವನನ್ನು ಬೆಂಗಳೂರು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೆಜಿಎಫ್ ರಾಬರ್ಟ್ ಪೇಟೆಯ ಸೈಕೋ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಬೈಕ್ ನಲ್ಲಿ ಅಡ್ಡಾಡುತ್ತಾ ಮಹಿಳೆಯರ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಹಲವು ಯುವತಿಯರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಅರುಣ್ ಈವರೆಗೂ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಮೇ 31ರ …
Read More »ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡಿಸೆಲ್ ದರ ಗಗನಮುಖಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಬರೋಬ್ಬರಿ 98ರೂಪಾಯಿ 19 ಪೈಸೆಯಾಗಿದೆ. ಲೀಟರ್ ಡೀಸೆಲ್ ದರ 90 ರೂಪಾಯಿ 84 ಪೈಯಾಗಿದೆ. ಕೊರೊನಾ ಲಾಕ್ ಡೌನ್ ನಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಈ ನಡುವೆ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿರುವುದು ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಮುಂಬೈ ಮಹಾನಗರದಲ್ಲಿ …
Read More »ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ಸರ್ಕಾರ ವರ್ತಿಸುತ್ತಿದೆ’
ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಮೇಯರ್ ಶಿಲ್ಪಾ ನಾಗ್ ನಡುವಿನ ಜಟಾಪಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರ ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ಗಳು.. ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ …
Read More »
Laxmi News 24×7