Breaking News

ಬೆಂಗಳೂರು

ಸಿದ್ದರಾಮಯ್ಯಗೆ ತೀವ್ರ ಜ್ವರ: ಮಣಿಪಾಲ್‌ಗೆ ದಾಖಲು

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಪಡೆಯಲಿದ್ದು, ಅವರು ಮಂಗಳವಾರ ಮತ್ತು ಬುಧವಾರ ಭಾಗವಹಿಸಲಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ’ ಎಂದು ಆಪ್ತ ಮೂಲಗಳು ಮಾಹಿತಿ …

Read More »

ಸೆಕೆಂಡ್ ಡೋಸ್ 12 ವಾರದಿಂದ 1 ತಿಂಗಳಿಗೆ ಇಳಿಕೆ, ವಿದೇಶಕ್ಕೆ ಹೋಗುವವರಿಗೆ ಲಸಿಕೆ

ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮತ್ತು ವ್ಯಾಸಂಗ ಮಾಡುವವರಿಗೆ ಕೊರೋನಾ ಲಸಿಕೆಯನ್ನು ಆದ್ಯತೆಯ ಮೇಲೆ ನೀಡಲಾಗುತ್ತದೆ. ಇಂದಿನಿಂದ ಆದ್ಯತಾ ಗುಂಪಿನವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಡಿಸಿಎಂ, ಲಸಿಕೆ ಕಾರ್ಯಪಡೆ ಅಧ್ಯಕ್ಷ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಇಂದು 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡಲಿದ್ದು, ಲಸಿಕೆ ಪಡೆಯಲು ಆಧಾರ್ ಕಾರ್ಡ್, ಪಾಸ್ಪೋರ್ಟ್, ವಿದೇಶದಲ್ಲಿರುವ ತಮ್ಮ ಕೆಲಸ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು …

Read More »

ಬಿಜೆಪಿ ನಾಯಕರು ‘ಪವರ್ ಬೆಗ್ಗರ್ಸ್’; ಯೋಗೇಶ್ವರ್, ವಿಜಯೇಂದ್ರ ದೆಹಲಿ ಭೇಟಿಗೆ ಡಿ.ಕೆ.ಶಿವಕುಮಾರ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟದಿಂದ ಜನರು ಪರದಾಡುತ್ತಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ವರಿಷ್ಠರ ಭೇಟಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಅವರೆಲ್ಲರೂ ಪವರ್ ಬೆಗ್ಗರ್ಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸಿ.ಪಿ.ಯೋಗೇಶ್ವರ್, ಬಿ.ವೈ.ವಿಜಯೇಂದ್ರ ದೆಹಲಿ ಭೇಟಿಗೆ ಕಿಡಿಕಾರಿದ ಅವರು, ಸಿಎಂ ಯಡಿಯೂರಪ್ಪನವರು ಯಾರ್ಯಾರನ್ನೋ ಎಲ್ಲೆಲ್ಲಿಂದಲೊ ಕರೆತಂದರು. ಈಗ ಅವರೇ ಎಲ್ಲವನ್ನು ಅನುಭವಿಸುತ್ತಿದ್ದಾರೆ. ಅವರು ಮಾಡಿದ್ದನ್ನು ಅವರು ಅನುಭವಿಸುತ್ತಿದ್ದಾರೆ ಎಂದು ವ್ಯಂಗವಾಡಿದರು. ಇದೇ ವೇಳೆ ರಾಜ್ಯ …

Read More »

ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಟೆಸ್ಟಿಂಗ್ ಪಾಸಿಟಿವಿಟಿ ರೇಟ್ ಶೇ.5ರೊಳಗೆ ಬರುವವರೆಗೆ ಲಾಕ್ ಡೌನ್ ಮುಂದುವರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಶೇ. 5ರೊಳಗೆ ಬರುವ ವರೆಗೆ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಅವರು ತಿಳಿಸಿದ್ದಾರೆ. ಲಾಕ್ ಡೌನ್ ಮತ್ತಿತರ ವಿಷಯದಲ್ಲಿ ತಜ್ಞರ ಸಲಹೆಯನ್ನು ಸರ್ಕಾರ ಚಾಚೂತಪ್ಪದೆ ಪಾಲಿಸಬೇಕು. ಎಲ್ಲರಿಗೂ ಲಸಿಕೆ ಹಾಕುವುದೊಂದೇ ಕೊರೊನಾದಿಂದ ದೂರ ಇರುವ ಮಾರ್ಗ. 12 ವರ್ಷದೊಳಗಿನ ಮಕ್ಕಳನ್ನು …

Read More »

ಏಳು ವರ್ಷದಲ್ಲಿ ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ

ಬೆಂಗಳೂರು, ಮೇ 31- ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ ಸ್ಪಂದನೆಯೂ ಇಲ್ಲದ ಬಿಜೆಪಿ ನಾಯಕರು ತಮ್ಮ ಬೆನ್ನು ತಾವೇ ತಟ್ಟಿಕೊಂಡು ಸಂಭ್ರಮಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ …

Read More »

ತಂಬಾಕು ಸಂಬಂಧಿ ಕ್ಯಾನ್ಸರ್: ಲಕ್ಷ ಪುರುಷರಲ್ಲಿ 40 ಮಂದಿಗೆ ದೃಢ

ಬೆಂಗಳೂರು: ಜನಸಂಖ್ಯೆ ಆಧಾರಿತ ಕ್ಯಾನ್ಸರ್ ನೋಂದಣಿ ಪ್ರಕಾರ ನಗರದಲ್ಲಿ ಒಂದು ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ ಒಂದು ಲಕ್ಷ ಮಹಿಳೆಯರಲ್ಲಿ 20 ಮಂದಿ ತಂಬಾಕು ಸಂಬಂಧಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ. ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳಲಿವೆ. ತಂಬಾಕು ಬಳಕೆಯಲ್ಲಿ ದೇಶವು ಎರಡನೇ ಅತಿ ದೊಡ್ಡ ದೇಶ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ …

Read More »

‘ಸಚಿವ ಸಿ.ಪಿ.ಯೋಗೇಶ್ವರ್’ ‘ಸಚಿವ ಸಂಪುಟ’ದಿಂದ ಔಟ್.?

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದೆ. ಅದರಲ್ಲೂ ಸ್ವತಹ ಸಿಎಂ ಯಡಿಯೂರಪ್ಪ ವಿರುದ್ಧವೇ ಅವರ ಸಚಿವ ಸಂಪುಟದ ಸಚಿವ ಸಿ.ಪಿ.ಯೋಗೇಶ್ವರ್ ಸಮರ ಸಾರಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪ ಬದಲಾವಣೆಯನ್ನು ವಿರೋಧಿಸಿ, ಅವರ ಬೆಂಬಲಕ್ಕೆ 18 ಬಿಜೆಪಿ ಶಾಸಕರು ನಿಂತಿದ್ದು, ಯೋಗೇಶ್ವರ್ ಪಕ್ಷಕ್ಕೆ ಆಮದು ಸರಕು, ಸಚಿವ ಸ್ಥಾನದಿಂದ ಕಿತ್ತೊಗೆಯಿರಿ, ನಿಮ್ಮ ಜೊತೆ ನಾವಿದ್ದೇವೆ ಎಂದಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಸಚಿವ ಸಂಪುಟದಿಂದ ಸಚಿವ ಸಿ.ಪಿ.ಯೋಗೇಶ್ವರ್ ಔಟ್ ಆಗ್ತಾ …

Read More »

ಪ್ರಾಣದ ಹಂಗು ತೊರೆದು ಸೇವೆ: ನರ್ಸ್​ ಕಾರ್ಯಕ್ಕೆ ಸಿಎಂ ಅಭಿನಂದನೆ

ಬೆಂಗಳೂರು: ಕೋವಿಡ್ ಸಂಕಷ್ಟ ಸಮಯದಲ್ಲಿ ನರ್ಸ್​ಗಳು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರನ್ನು ಯಾವ ಶಬ್ಧದಿಂದ ಅಭಿನಂದಿಸಿದರೂ ಕಡಿಮೆಯೇ ಎಂದು ಸಿಎಂ ಬಿ‌.ಎಸ್‌.ಯಡಿಯೂರಪ್ಪ ಹೇಳಿದರು. ನರ್ಸ್‌ಗಳ ಜತೆ ಮಾತುಕತೆ ನಡೆಸಿದ್ದೇನೆ. ಅವರು ತಮ್ಮ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅವುಗಳನ್ನು ಪರಿಹರಿಸುತ್ತೇವೆ. ಕೆಲವು ಸಲಹೆಗಳನ್ನೂ ಕೊಟ್ಟಿದ್ದಾರೆ. ಅವುಗಳನ್ನು ಪರಿಗಣಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಲಾಕ್ ಡೌನ್ ಕುರಿತು ಜೂನ್ ಮೇ 4 ಅಥವಾ 5ರ ಬಳಿಕ ಚರ್ಚೆ …

Read More »

ಸದ್ದಿಲ್ಲದ ಹಸೆಮಣೆ ಏರಿದ ಜನಪ್ರಿಯ ನಟಿ ಪ್ರಣಿತಾ ಸುಭಾಷ್

ಬೆಂಗಳೂರು :ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್ ಲಾಕ್ ಡೌನ್ ಸಮಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾಕ್‌ಡೌನ್‌ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು . ಆದರೆ ಆ ಬಗ್ಗೆ ಪ್ರಣಿತಾ ಅವರು ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ . ಈಗ ಪ್ರಣಿತಾ ಮದುವೆಯ ಫೋಟೋಗಳ ಬಹಿರಂಗ ಆಗಿವೆ . ಆ ಮೂಲಕ ಅವರು ಸಪ್ತಪದಿ ತುಳಿದಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕಂತಾಗಿದೆ . ಮೊನ್ನೆಯಷ್ಟೇ …

Read More »

ಸರ್ಕಾರಿ ಶಿಕ್ಷಕರ ವೇತನ ಕಡಿತಗೊಳಿಸಿ ಖಾಸಗಿ ಶಿಕ್ಷಕರಿಗೆ ಪ್ಯಾಕೇಜ್

ಬೆಂಗಳೂರು: ರಾಜ್ಯದ ಅನುದಾನರಹಿತ ಶಾಲಾ- ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ಚಿಂತಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಕೆಲವು ದಿನಗಳ ವೇತನ ಕಡಿತಗೊಳಿಸಿ ಆ ಹಣದಿಂದ ಪ್ಯಾಕೇಜ್ ನೀಡುವ ಬಗ್ಗೆ ಸಚಿವ ಎಸ್.ಸುರೇಶ್ ಕುಮಾರ್‌ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಅವರು, ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ವಿವಿಧ …

Read More »