ಬೆಂಗಳೂರು : ಒಂದು ವೇಳೆ ಮಕ್ಕಳಿಗೆ ಸೋಂಕು ಬಂದರೆ ಅವರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು.ಈಗ ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ.ಅನೇಕ ಲಸಿಕಾ ಕಂಪನಿಗಳು ಕೆಲವೆಡೆ ಟ್ರಯಲ್ ರನ್ ಮಾಡುತ್ತಿವೆ ಎಂದು ತಿಳಿಸಿದರು. ಎಲ್ಲವನ್ನೂ ನೋಡುಕೊಂಡು ನಮ್ಮ ಮಕ್ಕಳಿಗೂ ಲಸಿಕೆ ಹಾಕಿಸಲಾಗುವುದು.ಹಿರಿಯರಿಗೆ ಮೊದಲು, ನಂತರ ಜನರನ್ನ ಸಂಪರ್ಕಿಸುವ ವೃತ್ತಿಯವರಿಗೆ.ಜೊತೆ ಜೊತೆಯಲ್ಲಿ ಎಲ್ಲರಿಗೂ ಎಲ್ಲಿಯವರೆಗೂ ತಲುಪಲು ಸಾಧ್ಯವೋ …
Read More »ಬೆಂಗಳೂರು; ಬಾಕಿ ಹಣಕ್ಕಾಗಿ ಸಂಬಂಧಿಕರನ್ನು ಕೂಡಿಹಾಕಿದ ಆಸ್ಪತ್ರೆ!
ಬೆಂಗಳೂರು, ಮೇ 30; ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗಳ ಧನ ದಾಹಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಕೋವಿಡ್‌ನಿಂದ ವ್ಯಕ್ತಿ ಮೃತಪಟ್ಟರೂ ಶವವನ್ನು ಕೊಡದೇ ಜೊತೆಗಿದ್ದ ಸಂಬಂಧಿಕರನ್ನು ಕೂಡಿಹಾಕಿದ ಘಟನೆ ನಡೆದಿದೆ. 42 ವರ್ಷದ ಲಕ್ಷ್ಮೀ ನಾರಾಯಣ ಚನ್ನಸಂದ್ರದ ಖಾಸಗಿ ಆಸ್ಪತ್ರೆಗೆ ಮೇ 17ರಂದು ದಾಖಲಾಗಿದ್ದರು. ಕೋವಿಡ್ ಸೋಂಕು ತಗುಲಿದ್ದ ಅವರು ಮೇ 27ರಂದು ಮೃತಪಟ್ಟಿದ್ದರು. ಒಟ್ಟು 8.17 ಲಕ್ಷ ರೂ. ಬಿಲ್ ಆಗಿತ್ತು. ಕುಟುಂಬದವರು 4.5 ಲಕ್ಷ ರೂ. ಪಾವತಿ …
Read More »ಕಮಿಷನ್ ಪಡೆದ ಆರೋಪ ; ಶಾಸಕ ರವಿ ಸುಬ್ರಮಣ್ಯ ವಿರುದ್ದ ಪೋಲೀಸ್ ದೂರು
ಬೆಂಗಳೂರು: ‘ಉಚಿತವಾಗಿ ನೀಡಬೇಕಾದ ಕೋವಿಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಿಗೆ ಮಾರಾಟ ಮಾಡಲಾಗುತ್ತಿದೆ. ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಹಣ ಪಡೆಯುತ್ತಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಶನಿವಾರ ದೂರು ನೀಡಿದ್ದಾರೆ. ‘ಲಸಿಕೆ’ ಪಡೆಯುವ ಬಗ್ಗೆ ವಿಚಾರಿಸಲು ಹೊಸಕೆರೆಹಳ್ಳಿಯ ಎ.ವಿ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆ ಮಾಡಿರುವ ವೆಂಕಟೇಶ್, ಅಲ್ಲಿನ ಸಿಬ್ಬಂದಿಜೊತೆ ಮಾತನಾಡಿದ ಆಡಿಯೊ ತುಣುಕನ್ನೂ ದೂರಿನ ಜೊತೆ …
Read More »ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ.?
ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ. ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ …
Read More »ಸರ್ಕಾರದ ಆರ್ಥಿಕ ಪ್ಯಾಕೇಜ್’ನ್ನು ‘ಬೋಗಸ್’ ಎಂದ ಕಾಂಗ್ರೆಸ್ ನಾಯಕರು
ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಕೋವಿಡ್-19 ಆರ್ಥಿಕ ಪ್ಯಾಕೇಜ್’ನ್ನು ರಾಜ್ಯ ಕಾಂಗ್ರೆಸ್ ನಾಯಕರು ಕಣ್ಣೊರೆಸುವ ಪ್ಯಾಕೇಜ್ ಎಂದು ಟೀಕಿಸಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವರುಗಳು, ಶಾಸಕರಾದ ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಹಾಗೂ ರಿಜ್ವಾನ್ ಅರ್ಷದ್ ಅವರು, ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ನ್ನು ಬೋಗಸ್ ಎಂದು ಕರೆದಿದ್ದಾರೆ. ಅಲ್ಲದೆ, ಲಾಕ್‌ಡೌನ್ ಬಾಧಿತರಿಗೆ ಕನಿಷ್ಟ ೧೦ ಸಾವಿರ ನೆರವು ಘೋಷಿಸುವಂತೆ ಸರ್ಕಾರವನ್ನು …
Read More »ರೇಪ್ ಮಾಡುವಾಗ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ನೀಚ ಕಾಮುಕರು
ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣದ ಮೊದಲ ಆರೋಪಿ ರಿದಾಯ್ ಬಾಬು …
Read More »ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು.
ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ. ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು …
Read More »ಜಿಂದಾಲ್‌ಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ: ಯತ್ನಾಳ್
ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ. ಪ್ರಧಾನಿ ಮೋದಿ ಸೇರಿ ಕೇಂದ್ರದ ನಾಯಕರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದೆವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ರಾಜ್ಯದ ನೆಲ ಜಲ ಮತ್ತು ನೈಸರ್ಗಿಕ ಸಂಪತ್ತು ಉಳಿಸಲು ನಾವು ಇತ್ತೀಚೆಗೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಸುಮಾರು 3660 ಎಕರೆ ಖನಿಜ ಸಂಪತ್ತು ಹೊಂದಿದ ಪ್ರತಿ ಎಕರೆಗೆ ಕೋಟ್ಯಂತರ ಬೆಲೆ …
Read More »ಯುವತಿಯ ಮೇಲೆ ಅತ್ಯಾಚಾರ,ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಮೇ. 28: ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಗೆ ಚಿತ್ರಹಿಂಸೆ ನೀಡುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ. ಈ ಸಂಬಂಧ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ರಾಮಮೂರ್ತಿನಗರದ ಎನ್‌ಆರ್‌ಐ ಬಡಾವಣೆಯಲ್ಲಿ ಕಳೆದ ಹತ್ತು ದಿನಗಳ ಹಿಂದೆ ಈ ಘಟನೆ ನಡೆದಿದೆ. …
Read More »ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ: ಒಂದು ಡೋಸ್ ಕೊರೊನಾ ಲಸಿಕೆಗೆ 200 ರೂ. ಸೇವಾ ಶುಲ್ಕ!
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ …
Read More »