Breaking News

ಬೆಂಗಳೂರು

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

ಹಾಸನ: ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ನಮ್ಮ ಎದುರಾಳಿಗಳು, ರೇವಣ್ಣ ಅವರ ಕುಟುಂಬ ಮುಗಿಸಲು ಯಾವ ಎಸ್‌ಐಟಿ  ಬಳಸಿಕೊಂಡಿದ್ದರೋ ಅವರಿಗೆ ಉಡುಗೊರೆ ಕೊಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಸನದ  ಬೂವನಹಳ್ಳಿ ಬಳಿ ನಡೆದ ಜೆಡಿಎಸ್‌  ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ರೇವಣ್ಣ ಅವರ ಕುಟುಂಬವನ್ನು ಮುಗಿಸಲು ಎದುರಾಳಿಗಳು ಪ್ರಯತ್ನಪಟ್ಟರು. ಈ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ಜೆಡಿಎಸ್ ಮುಗಿಸಲು ಎರಡು ಬಾರಿ …

Read More »

ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು: ಬಿಗಿ ಪೊಲೀಸ್ ಬಂದೋಬಸ್ತ್, ಇ–ಪಾಸ್​ ವ್ಯವಸ್ಥೆ

ಬೆಂಗಳೂರು: 77ನೇ ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಐತಿಹಾಸಿಕ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ  ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ತಾಲೀಮು ಕೂಡ ನಡೆದಿದೆ. ಜನವರಿ 26ರಂದು ಭಾರತ ಸಂವಿಧಾನ ಜಾರಿಗೆ ಬಂದ ದಿನವನ್ನಾಗಿ ಸ್ಮರಿಸುತ್ತೇವೆ. ಇದರ ಅಂಗವಾಗಿ ಇಡೀ ದೇಶಾದ್ಯಂತ ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶವು ಗಣರಾಜ್ಯವಾಗಿರುವುದನ್ನು ಆಚರಿಸುವುದು, ಅಂದರೆ ಜನರಿಂದಲೇ …

Read More »

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ  ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡ  ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನು ಅರ್ಜಿಯನ್ನು ಚಿಕ್ಕಬಳ್ಳಾಪುರ ಅಪರ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಜ.14 ರಂದು ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಹತ್ತು ದಿನಗಳಿಂದಲೂ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಈ ಬೆನ್ನಲ್ಲೇ ಕೆಪಿಸಿಸಿ ವತಿಯಿಂದ ರಾಜೀವ್ ಗೌಡ ಅಮಾನತು ಸಹ ಮಾಡಲಾಗಿತ್ತು. ಪೊಲೀಸರಿಗೆ ಸವಾಲಾದ ರಾಜೀವ್ ಗೌಡ …

Read More »

ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ

ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ ​ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ‘ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ ಇಂದು ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ವಿಜಯೋತ್ಸವ ಹಾಗೂ ಹೊಸವರ್ಷದ ಸಂಭ್ರಮಾಚರಣೆಯನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ… 1818ರ ಜನವರಿ 1ರಂದು ಸಂಭವಿಸಿದ ಆ ಐತಿಹಾಸಿಕ ವಿಜಯವು ಕೇವಲ ಒಂದು ಯುದ್ಧದ ಗೆಲುವಲ್ಲ; ಅದು ಜಾತಿವಾದದ ವಿರುದ್ಧ ಸ್ವಾಭಿಮಾನದಿಂದ ಗಳಿಸಿದ ಮಹಾನ್ ಜಯ, …

Read More »

ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ 108 ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್‌ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದೆ. ಈ ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆಯು ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಮತ್ತು …

Read More »

ಡಿ.31ರ ರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ

ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್‌ಸಿಂಗ್ ಅವರು ಆದೇಶಿಸಿದ್ದಾರೆ. ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ …

Read More »

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್​ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್​ಆರ್​ಪಿ ದರವನ್ನು ಸರಿಯಾದ …

Read More »

ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು

ಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದಾನಂದನಗರದ ಎನ್‌ಜಿಇಎಫ್ ಲೇಔಟ್ ನಿವಾಸಿ ಜಿ.ವಸಂತ ಕುಮಾರ್ (81) ಸೈಬರ್ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ನಗರದ ಪೂರ್ವ ವಿಭಾಗದ ಸಿಇಎನ್​​ ಪೊಲೀಸ್ ಠಾಣೆಯಲ್ಲಿ ಜುಲೈ 23ರಂದು ಪ್ರಕರಣ ದಾಖಲಾಗಿದೆ. ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಜುಲೈ 5ರಂದು ಕರೆ …

Read More »

12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

ಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು ದೇಶದ ಐಟಿ ವಲಯದ ದಿಗ್ಗಜ ಕಂಪನಿ ಟಿಸಿಎಸ್​ (ಟಾಟಾ ಕನ್ಸಲ್ಟ್ಎನ್ಸಿ ಸರ್ವೀಸಸ್) ಗೆ ಸಮನ್ಸ್ ಜಾರಿ ಮಾಡಿದೆ. ಅಪಾರ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಬಗ್ಗೆ ಕಾರಣಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಟಿಸಿಎಸ್ ಅಧಿಕಾರಿಗಳ ಸಭೆಯನ್ನು ಸಹ ಕರೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಧ್ಯಮಗಳಿಗೆ …

Read More »

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 …

Read More »