Breaking News

ಬೆಂಗಳೂರು

ಸಂವಾದ ; ಕಣ್ಣೀರು ಹೇಡಿಯ ಅಸ್ತ್ರ ಎಂದ ಕಾಂಗ್ರೆಸ್‌

ಬೆಂಗಳೂರು, : ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, “ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ. ಎದುರಿಗಿದ್ದ ಕ್ಯಾಮೆರಾ ಹಾಗೂ ಟೆಲಿಪ್ರಾಂಪ್ಟರ್‌ ನೋಡಿಕೊಂಡು ಕಣ್ಣೀರು ಸುರಿಸುವುದು ಅದ್ಬುತ ನಟನಾ ಕೌಶಲ್ಯ! @narendramodi ಅವರೇ, ಜನತೆಗೆ ಬೇಕಿರುವುದು ನಿಮ್ಮ ಕಣ್ಣೀರಲ್ಲ””ಆಕ್ಸಿಜನ್, ಲಸಿಕೆ, ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಆರ್ಥಿಕ ನೆರವು. ಇದ್ಯಾವುದನ್ನೂ ನೀಡದೆ ಎರಡು …

Read More »

ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

ಬೆಂಗಳೂರು: ದೇಶದ ಸಾರಿಗೆ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ಶುಕ್ರವಾರ ನಿಧನರಾದರು. ಮಾಗಡಿ ಮೂಲದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಇದಕ್ಕೂ ಮುನ್ನ ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ …

Read More »

ಶಾಲಾ, ಕಾಲೇಜು ಶುಲ್ಕ ಕಡಿತಗೊಳಿಸಿ- ಸಿಎಂ ಬಿಎಸ್‍ವೈಗೆ ನಟ ಕಿರಣ್ ರಾಜ್ ಮನವಿ

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ಇರುವುದರಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಕಡಿಮೆಗೊಳಿಸುವಂತೆ ನಟ ಕಿರಣ್ ರಾಜ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೆ ಇದೀಗ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಪೋಷಕರು ಜೀವನ ನಡೆಸಲು ಕೂಡ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಮಕ್ಕಳ ಶಾಲಾ ಕಾಲೇಜಿನ ಪೂರ್ತಿ ಶುಲ್ಕವನ್ನು ಪಾವತಿಸಲು ಪೋಷಕರು ಕಷ್ಟಪಡುತ್ತಿದ್ದಾರೆ. ಅಲ್ಲದೆ ಶಾಲಾ ಆಡಳಿತ …

Read More »

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.: B.S.Y.

ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.

Read More »

ಹಳ್ಳಿಗಳಲ್ಲಿ ಕೊರೋನಾ 2ನೇ ಅಲೆ ಹರಡಲು ಸರ್ಕಾರದ ವೈಫಲ್ಯವೇ ಕಾರಣ : ಸಿದ್ದು

ಬೆಂಗಳೂರು, ಮೇ 21- ಕೊರೋನಾ 2ನೇ ಅಲೆ ಬಹಳ ವೇಗವಾಗಿ ಹರಡುತ್ತಿದೆ. ಮೊದಲನೆ ಅಲೆ ನಗರ ಪ್ರದೇಶದಲ್ಲಿ ಇತ್ತು. ಎರಡನೇ ಅಲೆ ಗ್ರಾಮೀಣ ಪ್ರದೇಶಕ್ಕೂ ಹಬ್ಬಿದೆ. ಸರ್ಕಾರದ ವೈಪಲ್ಯವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ಸರ್ಕಾರ ಎಚ್ಚೆತ್ತುಕೊಂಡು ಪರೀಕ್ಷೆಗಳನ್ನು ಸರಿಯಾಗಿ ಮಾಡುತ್ತಿಲ್ಲ, ವೈದ್ಯಕೀಯ ವ್ಯವಸ್ಥೆ ಸರಿ ಮಾಡಿಲ್ಲ. ಸುಳ್ಳು ಹೇಳುವುದೇ …

Read More »

ಬಿಜೆಪಿಯವರಿಗೆ ಲಸಿಕೆ ಮೇಲೆ ನಂಬಿಕೆ ಇರಲಿಲ್ಲ, ಅದಕ್ಕೆ ಮೊದಲು ಮೋದಿ ಪಡೆದಿಲ್ಲ: ಡಿ.ಕೆ.ಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ …

Read More »

ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …

Read More »

ಗಮನಿಸಿ : ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಆರಂಭ : ಈ ಮೂಲಕ ಅರ್ಜಿ ಸಲ್ಲಿಸಿ, 3 ಸಾವಿರ ಪರಿಹಾರ ಪಡೆಯಿರಿ.!

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರದ ವತಿಯಿಂದ ಹಲವು ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಲಾಗಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನವಾಗಿ 3 ಸಾವಿರ ರೂ. ಗಳನ್ನು ಘೋಷಿಸಲಾಗಿದೆ. ಸರ್ಕಾರದಿಂದ ಘೋಷಿಸಿರುವ ಪರಿಹಾರ ಧನ 3000 ರೂ. ಗಳನ್ನು ಪಡೆಯುವ ಫಲಾನುಭವಿಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಸರ್ಕಾರದ ಪರಿಹಾರವನ್ನು ಸೇವಾ …

Read More »

ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಔಷಧಿ ಬಿಡುಗಡೆ

ಬೆಂಗಳೂರು, ಮೇ 21- ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಆಯುಷ್ ಸಚಿವಾಲಯ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಕೋವಿಡ್- 19 ರೋಗಿಗಳಿಗೆ ಆಯುಷ್ 64 ಔಷಧಿಯನ್ನು ವಿತರಿಸಲು ಮುಂದಾಗಿದೆ. ಆಯುಷ್ ಸಚಿವಾಲಯವು ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಜೊತೆಗೆ ಆಯುಷ್ 64 ಆಯುರ್ವೇದ ಮಾತ್ರೆಯ ಮೌಲ್ಯಮಾಪನ ಮಾಡಲು ಬಹು-ಕೇಂದ್ರ ಸಂಶೋಧನೆ ನಡೆಸಿತ್ತು. ಈ ಪ್ರಯೋಗದಲ್ಲಿ ಸ್ಟ್ಯಾಂಡರ್ಡ್ ಆರೈಕೆ ಜೊತೆಗೆ …

Read More »

18+ ಲಸಿಕೆ ನಾಳೆ ಮತ್ತೆ ಆರಂಭ

ಬೆಂಗಳೂರು: ರಾಜ್ಯದಲ್ಲಿ 18-44 ವರ್ಷ ವಯೋಮಾನದವರಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪುಗಳನ್ನು ಗುರುತಿಸಿ ಮೇ 22ರಿಂದ ಕೋವಿಡ್ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಲಸಿಕೆ ಕೊರತೆಯಿಂದ 18-44 ವರ್ಷ ದವರ ಲಸಿಕೆ ಅಭಿಯಾನ ತಾತ್ಕಾಲಿಕ ಸ್ಥಗಿತವಾಗಿತ್ತು. ಸದ್ಯ ಮೇ 15ರಂದು ನಡೆದ ತಜ್ಞರ ಸಮಿತಿ ಸಭೆಯ ತೀರ್ಮಾನದಂತೆ ಕೊರೊನಾ ಮುಂಚೂಣಿ ಕಾರ್ಯಕರ್ತರು ಆದ್ಯತಾ ವಲಯದ 18ರಿಂದ 44 ವರ್ಷ ದವರಿಗೆ ಲಸಿಕೆ ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ …

Read More »