ಬೆಂಗಳೂರು: ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ ನಿರ್ಲಕ್ಷಕ್ಕೆ ಕಿಡಿಕಾರಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಇದೇ ವೇಳೆ ಶಿಕ್ಷಕರ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಕೆಲ ಸಲಹೆ ನೀಡಿದ್ದಾರೆ. ಮೊದಲಿನಿಂದಲೂ ಚುನಾವಣೆಗಳು, ಜನಗಣತಿ ಸೇರಿದಂತೆ ಎಲ್ಲ ಆಪತ್ತುಗಳ ಸಂದರ್ಭದಲ್ಲಿ ಸರಕಾರದ ಎಲ್ಲ ಕೆಲಸಗಳಿಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಆದರೆ ಅಂತಹ ಕೆಲಸ ನಿರ್ವಹಣೆಯಲ್ಲಿ ಅವರಿಗೆ ಏನಾದರೂ ತೊಂದರೆ ಅನಾಹುತ …
Read More »ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್
ಶರಣ್ ನಟನೆಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ಅನ್ನು ನಾಳೆ ಬೆಳಿಗ್ಗೆ 11.05ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕುರಿತು ಶರಣ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು ಶರಣ್ ಅವರ ಲಡ್ಡು ಸಿನಿಮಾ ಹೌಸ್ ಮತ್ತು ತರುಣ್ ಸುಧೀರ್ ಅವರ ತರುಣ್ ಸುಧೀರ್ ಕ್ರಿಯೆಟೀವ್ಸ್ ನಿಂದ ನಿರ್ಮಾಣ ಮಾಡಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ನಟಿ ನಿಶ್ವಿಕಾ ನಾಯ್ಡು …
Read More »ಚಿನ್ನ ಗಿರವಿ ಇಟ್ಟು ಸಾಲ ಪಡೆದವರಿಗೆ ಗುಡ್ ನ್ಯೂಸ್ : ಚಿನ್ನದ ಸಾಲದ ಮೇಲಿನ ಬಡ್ಡಿ ಮನ್ನಾ!
ಬೆಂಗಳೂರು : ಚಿನ್ನ ಗಿರವಿ ಇಟ್ಟು ಸಾಲ ಪಡೆದ ಗ್ರಾಹಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ್ಡಿ ಮನ್ನಾ ಮಾಡುವ ಚಿಂತನೆಯಿದ್ದು, ಈ ಬಗ್ಗೆ ಸದ್ಯದಲ್ಲೇ ವರ್ತಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಆಭರಣ ವರ್ತಕರ ಸಂಘ ತಿಳಿಸಿದೆ. ಬಡ ಮತ್ತು …
Read More »ವಾಹನ ಸವಾರರಿಗೆ ಬಿಗ್ ಶಾಕ್ : 100 ರ ಗಡಿ ಸಮೀಪ ಪೆಟ್ರೋಲ್ ಬೆಲೆ!
ನವದೆಹಲಿ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ಇಂದು ಮತ್ತೆ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಯಾಗಿದೆ . ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 27 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 29 ಪೈಸೆ ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಈಗ ಲೀಟರ್ ಗೆ 92.85 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 83.51 ರೂ.ಗೆ ಏರಿಕೆಯಾಗಿದೆ. …
Read More »ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಸೋಂಕಿನಿಂದ 476 ಜನರು ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 13,338 ಜನರಿಗೆ ಕೊವಿಡ್ ದೃಢಪಟ್ಟಿದ್ದು, 239 ಜನರು ಅಸುನೀಗಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರನ್ನೂ ಸೇರಿಸಿ ಈವರೆಗೆ ರಾಜ್ಯದ ಕೊವಿಡ್ …
Read More »ಹಸಿದ ಹೊಟ್ಟೆಗೆ ಆಸರೆಯಾದ ಶಿವಣ್ಣ ದಂಪತಿ
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್‍ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ. ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು …
Read More »ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ
ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ …
Read More »ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …
Read More »‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್
ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …
Read More »‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಬೆಂಗಳೂರು: ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …
Read More »