ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಮಂದಿ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಡೆ ಸಂಚರಿಸುತ್ತಿದ್ದಾರೆ. ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ. ಕಳೆದ 20 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 429 ದ್ವಿಚಕ್ರ ವಾಹನ, 11 ತ್ರಿಚಕ್ರ ವಾಹನ, 8 ನಾಲ್ಕು ಚಕ್ರದ ವಾಹನ ಸೇರಿ …
Read More »ಲಾಕ್ ಡೌನ್ ಮಧ್ಯಯೇ ಹಸೆಮಣೆ ಏರಿದ ಚಂದನವನದ ಜೋಡಿ
ಬೆಂಗಳೂರು : ಲಾಕ್ ಡೌನ್ ಮಧ್ಯಯೇ ಸಿಂಪಲ್ ಆಗಿ ಹಸೆಮಣೆ ಏರಿದ ಚಂದನವನದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ. ಚಂದನ್ ತಮ್ಮ ಇನ್ಮಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡು ಮನೆ ಮದುವೆ , ಮದುವೆ ಮನೆ . ಗೋರಿಯಸ್ ಆಗಿಲ್ಲ , ಆದರೆ , ಸಂತಸದಿಂದ ತುಂಬಿದೆ ಎಂದು ಬರೆದುಕೊಂಡಿದ್ದಾರೆ . ‘ ಲಕ್ಷ್ಮೀ ಬಾರಮ್ಮ ‘ ಧಾರಾವಾಹಿಯ ಮೂಲಕ ಪರಿಚಿತವಾದ ಈ ಜೋಡಿ ಏ .1 ರಂದು ಎಂಗೇಜೆಂಟ್ …
Read More »ಪ್ರಧಾನಿ ಮೋದಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದ್ದಾರೆ : ಸಿದ್ದರಾಮಯ್ಯ ಲೇವಡಿ
ಬೆಂಗಳೂರು : ಕೊರೊನಾ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರದ ಹೋರಾಟ ವಿಫಲವಾಗಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರ ವ್ಯಾಕ್ಸಿನ್ ಕೊಡುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕೇಂದ್ರಕ್ಕೆ ಛೀಮಾರಿ ಹಾಕಿದರೂ ರಾಜ್ಯಕ್ಕೆ ವ್ಯಾಕ್ಸಿನ್ ನೀಡಿಲ್ಲ. ಇಂತಹ ಬೇಜವಬ್ದಾರಿ ಸರ್ಕಾರವನ್ನು ನಾನು …
Read More »ಕೊರೊನಾ ಲಸಿಕೆ ನೇರ ಖರೀದಿಗೆ 100 ಕೋಟಿ ರೂ. ಘೋಷಿಸಿದ ಕಾಂಗ್ರೆಸ್
ಬೆಂಗಳೂರು, : ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ.ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಘೋಷಣೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಸಂಗ್ರಹಿಸಲು 100 ಕೋಟಿ …
Read More »ರಾಜ್ಯಕ್ಕೆ ಲಭ್ಯವಾದ ಆಮ್ಲಜನಕ ಎಷ್ಟು? ಎಚ್‌ಡಿಕೆ -ತೇಜಸ್ವಿ ಸೂರ್ಯ ಟ್ವೀಟ್ ಜಗಳ
ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಿದೆ ಎಂಬ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರ ಮಧ್ಯೆ ಟ್ವೀಟ್ ಸಮರ ನಡೆಸಿದೆ. ‘ಕರ್ನಾಟಕಕ್ಕೆ ಪ್ರತಿ ನಿತ್ಯದ 1,200 ಟನ್ ಆಮ್ಲಜನಕ ಪೂರೈಸಬೇಕು ಎಂಬ ನ್ಯಾಯಾಲಯದ ಆದೇಶ ನಂತರವೂ ಕೇಂದ್ರ ಸರ್ಕಾರ ಕೇವಲ 120 ಟನ್ ಆಮ್ಲಜನಕ ಪೂರೈಕೆ ಮಾಡಿದೆ. ಆದರೆ, ಉತ್ತರ ಪ್ರದೇಶಕ್ಕೆ 1,680 ಟನ್ ಆಮ್ಲಜನಕ …
Read More »ಭಾರೀ ಚರ್ಚೆಗೆ ಕಾರಣವಾದ ಸದಾನಂದ ಗೌಡರ ಲಸಿಕೆ ಹೇಳಿಕೆ
ಬೆಂಗಳೂರು, ಮೇ 13; “ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆ ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?” ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ನೀಡಿದ ಹೇಳಿಕೆ ಬಗ್ಗೆ ಭಾರೀ ಚರ್ಚೆಗಳು ಆರಂಭವಾಗಿದೆ. ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದ ಗೌಡರು, “ಹೈಕೋರ್ಟ್ ನಾಳೆಯೇ ಲಸಿಕೆ ಬೇಕು ಎನ್ನುತ್ತದೆ. ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆ ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?” …
Read More »ಸಿಎಂ, ಸಚಿವರ 1 ವರ್ಷದ ವೇತನ ಕೋವಿಡ್ ಪರಿಹಾರ ನಿಧಿಗೆ
ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಭಾರೀ ಆಘಾತವನ್ನು ಉಂಟು ಮಾಡಿದೆ. ಸರ್ಕಾರ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ 14 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದೆ. ಪರಿಹಾರ ಕಾರ್ಯಗಳಿಗಾಗಿ ಸಚಿವರ ವೇತನವನ್ನು ಪರಿಹಾರ ನಿಧಿಗೆ ನೀಡಲಾಗುತ್ತದೆ. ಗುರುವಾರ ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಸಂಪುಟದ 32 ಸಚಿವರು ಒಂದು ವರ್ಷದ ವೇತನವನ್ನು ಕೋವಿಡ್ -19 ಪರಿಹಾರ ನಿಧಿಗೆ ನೀಡಲಿದ್ದಾರೆ. …
Read More »ಒಂದು ಪರ್ಸೆಂಟ್ ಜನಕ್ಕೆ ವ್ಯಾಕ್ಸಿನ್ ಕೊಡಲು ಸಾಧ್ಯವಾಗಿಲ್ಲ ಯಾಕೆ?: ಹೈಕೋರ್ಟ್ ತರಾಟೆ
ಬೆಂಗಳೂರು, ಮೇ. 13: ರಾಜ್ಯದ ಜನತೆಗೆ ಯಾವಾಗ ವ್ಯಾಕ್ಸಿನ್ ಕೊಡ್ತೀರಿ ? 31 ಲಕ್ಷ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನ್ ಯಾವಾಗ ನೀಡ್ತೀರಾ? ನಿಮಗೆ ನೀಡಲು ಸಾಧ್ಯವಿಲ್ಲ ಎನ್ನುವುದಾದರೆ ಹೇಳಿ. ನಿಮ್ಮ ಹೇಳಿಕೆಯನ್ನು ಹಾಗೇ ನ್ಯಾಯಾಲಯ ದಾಖಲಿಸಿಕೊಳ್ಳುತ್ತದೆ ! ಕೊರೊನಾ ಎರಡನೇ ಅಲೆಗೆ ತುತ್ತಾಗಿರುವ ಜನರ ಆರೋಗ್ಯ ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಎಡವಿದೆ. …
Read More »ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ : ಕಾಂಗ್ರೆಸ್
ಬೆಂಗಳೂರು: ಕೊವೀಡ್ ನಿರ್ವಹಣೆಯ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಮಾಡುತ್ತಿರುವ ಟೀಕಾ ಪ್ರಹಾರವನ್ನು ಮುಂದುವರಿಸಿರುವ ಕಾಂಗ್ರೆಸ್ , ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ ಎಂದು ಕಿಡಿಕಾರಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ” ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು, ತಿಕ್ಕಲು ಸಚಿವರಿಗೆ ಪರಿಜ್ಞಾನ, …
Read More »ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಶೇಷ ಪ್ಯಾಕೇಜ್ ಬಗ್ಗೆ ಪರೋಕ್ಷವಾಗಿ ನಿರಾಕರಿಸಿದ್ದಾರೆ. ಯಾವುದೇ ಆರ್ಥಿಕ ಪ್ಯಾಕೇಜ್ ಪ್ರಸ್ತಾಪಿಸದ ಸಿಎಂ, ಕೊರೊನಾ ಹೆಚ್ಚಾಗುತ್ತಿರುವುದರಿಂದ ಸೋಂಕಿತರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದಿದ್ದಾರೆ. ಕಠಿಣ ಕ್ರಮ ಜಾರಿ ಮಾಡಿರುವುದರಿಂದ ಜನರು ತೊಂದರೆಗೀಡಾಗಿದ್ದಾರೆ ನಿಜ. …
Read More »
Laxmi News 24×7